Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಇದಲ್ಲದೆ, ಪಟ್ಟಣಗಳನ್ನೂ ಕಟ್ಟಿಸಿ ದನಕುರಿಗಳ ದೊಡ್ಡ ಹಿಂಡುಗಳನ್ನು ಸಂಪಾದಿಸಿಕೊಂಡನು. ದೇವರು ಅವನಿಗೆ ಕೊಟ್ಟ ಸಂಪತ್ತು ಅಪರಿಮಿತವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಇದಲ್ಲದೆ, ಪಟ್ಟಣಗಳನ್ನು ಕಟ್ಟಿಸಿ ದನಕುರಿಗಳ ದೊಡ್ಡ ಹಿಂಡುಗಳನ್ನು ಸಂಪಾದಿಸಿಕೊಂಡನು. ದೇವರು ಅವನಿಗೆ ಕೊಟ್ಟ ಸಂಪತ್ತು ಅಪರಿಮಿತವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಇದಲ್ಲದೆ ಪಟ್ಟಣಗಳನ್ನು ಕಟ್ಟಿಸಿ ದನಕುರಿಗಳ ದೊಡ್ಡ ಹಿಂಡುಗಳನ್ನು ಸಂಪಾದಿಸಿಕೊಂಡನು. ದೇವರು ಅವನಿಗೆ ಕೊಟ್ಟ ಸಂಪತ್ತು ಅಪರಿವಿುತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಅವನು ನಗರಗಳನ್ನು ಕಟ್ಟಿಸಿದನು. ಅವನಿಗೆ ದನಕುರಿಗಳ ದೊಡ್ಡ ಹಿಂಡುಗಳಿದ್ದವು; ದೇವರು ಅವನಿಗೆ ಅಪರಿಮಿತವಾದ ಐಶ್ವರ್ಯವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಇದಲ್ಲದೆ ತನಗೆ ಪಟ್ಟಣಗಳನ್ನೂ, ದನಕುರಿಗಳ ದೊಡ್ಡ ಹಿಂಡುಗಳನ್ನೂ ಬಹಳವಾಗಿ ಮಾಡಿಕೊಂಡನು. ಏಕೆಂದರೆ ದೇವರು ಅವನಿಗೆ ಬಹು ಹೆಚ್ಚಾಗಿ ಸಂಪತ್ತನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:29
15 ತಿಳಿವುಗಳ ಹೋಲಿಕೆ  

ಪ್ರಭಾವ ಐಶ್ವರ್ಯಗಳು ನಿನ್ನ ಸನ್ನಿಧಿಯಿಂದ ಬರುತ್ತವೆ. ನೀನು ಸರ್ವಾಧಿಕಾರಿಯು. ಬಲಪರಾಕ್ರಮಗಳು ನಿನ್ನ ಹಸ್ತದಲ್ಲಿರುತ್ತವೆ. ಎಲ್ಲಾ ಮಹಿಮೆಗೂ, ಶಕ್ತಿಗೂ ನೀನೇ ಮೂಲನು.


ಯೆಹೋವನ ಆಶೀರ್ವಾದವು ಭಾಗ್ಯದಾಯಕವು, ಅದು ವ್ಯಸನವನ್ನು ಸೇರಿಸದು.


ಯೆಹೋವನು ಯೋಬನ ಮೊದಲನೆಯ ಸ್ಥಿತಿಗಿಂತಲೂ ಅವನ ಕಡೆಯ ಸ್ಥಿತಿಯನ್ನು ಹೀಗೆ ಹೆಚ್ಚಾಗಿ ಆಶೀರ್ವದಿಸಿದನು. ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ, ಆರು ಸಾವಿರ ಒಂಟೆಗಳೂ, ಒಂದು ಸಾವಿರ ಜೋಡಿ ಎತ್ತುಗಳೂ, ಒಂದು ಸಾವಿರ ಹೆಣ್ಣುಕತ್ತೆಗಳೂ ಉಂಟಾದವು.


ಅದಕ್ಕೆ ಸೈತಾನನು, “ಯೋಬನು ನಿನ್ನಲ್ಲಿ ಭಯಭಕ್ತಿಯನ್ನು ಲಾಭವಿಲ್ಲದೆ ಇಟ್ಟಿದ್ದಾನೋ?


ಅವನಿಗೆ ಏಳು ಸಾವಿರ ಕುರಿಗಳೂ, ಮೂರು ಸಾವಿರ ಒಂಟೆಗಳೂ, ಐನೂರು ಜೋಡಿ ಎತ್ತುಗಳೂ, ಐನೂರು ಹೆಣ್ಣು ಕತ್ತೆಗಳೂ, ಬಹುಮಂದಿ ಸೇವಕರೂ ಇದ್ದುದರಿಂದ ಅವನು ಮೂಡಣ ದೇಶದವರಲ್ಲೆಲ್ಲಾ ಹೆಚ್ಚು ಸ್ವತ್ತುಳ್ಳವನಾಗಿದ್ದನು.


ಅವನಿಗೆ ಇಳಿಜಾರಿನ ಪ್ರದೇಶದಲ್ಲಿಯೂ, ತಪ್ಪಲ ಸೀಮೆಯಲ್ಲಿಯೂ ಅಲ್ಲದೆ ಅಡವಿಯಲ್ಲಿಯೂ ಪಶುಗಳ ದೊಡ್ಡ ಮಂದೆಗಳು ಇದ್ದವು. ಆದುದರಿಂದ ಆ ಅಡವಿಯಲ್ಲಿ ಗೋಪುರಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ವ್ಯವಸಾಯದಲ್ಲಿ ಬಹಳ ಅಭಿರುಚಿ ಇದ್ದುದರಿಂದ ಗುಡ್ಡ, ಫಲವತ್ತಾದ ಬಯಲು, ಇವುಗಳಲ್ಲಿ ಹೊಲ ಹಾಗು ದ್ರಾಕ್ಷಿ ತೋಟಗಳಲ್ಲಿ ಕೆಲಸಗಾರರನ್ನು ನೇಮಿಸಿದನು.


ಅಮಚ್ಯನು ದೇವರ ಮನುಷ್ಯನನ್ನು, “ಹಾಗಾದರೆ ನಾನು ಇಸ್ರಾಯೇಲ್ ಸೈನ್ಯಕ್ಕೋಸ್ಕರ ನೂರು ತಲಾಂತುಗಳನ್ನು ಕೊಟ್ಟ ವಿಷಯದಲ್ಲಿ ನಾನೇನು ಮಾಡಬೇಕು?” ಎಂದು ಕೇಳಲು ಅವನು, “ಯೆಹೋವನು ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿನಗೆ ಕೊಡಬಲ್ಲನು” ಎಂದನು.


ಬಡತನ, ಸಿರಿತನಗಳನ್ನು ಕೊಡುವವನೂ ಯೆಹೋವನೇ, ತಗ್ಗಿಸುವವನೂ, ಹೆಚ್ಚಿಸುವವನೂ ಆತನೇ.


ಆದುದರಿಂದ ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ಈಗ ನಿಮ್ಮ ಅನುಭವಕ್ಕೆ ಬಂದ ರೀತಿಯಲ್ಲಿ ನೆರವೇರಿಸುವವನಾಗಿ, ನಿಮಗೆ ಇಷ್ಟು ಭಾಗ್ಯವನ್ನು ಸಂಪಾದಿಸುವುದಕ್ಕೆ ಸಾಮರ್ಥ್ಯವನ್ನು ಕೊಟ್ಟವನೆಂದು ಜ್ಞಾಪಕಮಾಡಿಕೊಳ್ಳಿರಿ.


ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು ಸಂಗ್ರಹಿಸುವುದಕ್ಕಾಗಿ ಉಗ್ರಾಣಗಳನ್ನು ಕಟ್ಟಿಸಿದನು.ಆಯಾ ಜಾತಿಯ ಪಶುಗಳಿಗೋಸ್ಕರ ಕೊಟ್ಟಿಗೆಗಳನ್ನೂ, ಆಡುಕುರಿಗಳ ಹಿಂಡುಗಳಿಗೋಸ್ಕರ ಹಟ್ಟಿಗಳನ್ನೂ ಸಿದ್ಧಮಾಡಿಸಿಕೊಂಡನು.


ಅವನು ಐಶ್ವರ್ಯ, ಮಾನ, ದೀರ್ಘಾಯುಷ್ಯ ಇವುಗಳನ್ನು ಅನುಭವಿಸಿದ ನಂತರ ತುಂಬಾ ವೃದ್ಧನಾಗಿ ಮರಣ ಹೊಂದಿದನು. ಅವನಿಗೆ ಬದಲಾಗಿ ಅವನ ಮಗನಾದ ಸೊಲೊಮೋನನು ಅರಸನಾದನು.


ಆದುದರಿಂದ ಯೆಹೋವನು ಇವನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿದನು; ಯೆಹೂದ್ಯರೆಲ್ಲರೂ ಯೆಹೋಷಾಫಾಟನಿಗೆ ಕಾಣಿಕೆ ಕೊಡುತ್ತಿದ್ದುದರಿಂದ ಇವನ ಧನ ಘನತೆಗಳು ಹೆಚ್ಚಾದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು