Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಮೇಲಣ ಗೀಹೋನ್ ಎಂಬ ಬುಗ್ಗೆಗೆ ಅಣೆಕಟ್ಟು ಕಟ್ಟಿಸಿ ಅದರ ನೀರು ನೆಟ್ಟಗೆ ದಾವೀದನಗರದ ಪಡುವಣ ತಗ್ಗಿಗೆ ಹರಿಯುವಂತೆ ಮಾಡಿದವನು ಹಿಜ್ಕೀಯನೇ. ಅವನು ತನ್ನ ಎಲ್ಲಾ ಕಾರ್ಯಗಳಲ್ಲಿಯೂ ಕೃತಾರ್ಥನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಮೇಲಣ ಗೀಹೋನ್ ಎಂಬ ಬುಗ್ಗೆಗೆ ಕಟ್ಟೆಕಟ್ಟಿಸಿ ಅದರ ನೀರು ನೆಟ್ಟಗೆ ದಾವೀದನಗರದ ಪೂರ್ವದಿಕ್ಕಿನ ಕಣಿವೆಗೆ ಹರಿಯುವಂತೆ ಮಾಡಿದವನು ಹಿಜ್ಕೀಯನೇ. ಅವನು ತನ್ನ ಎಲ್ಲ ಕಾರ್ಯಗಳಲ್ಲೂ ಯಶಸ್ವಿ ಆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಮೇಲಣ ಗೀಹೋನ್ ಎಂಬ ಬುಗ್ಗೆಗೆ ಕಟ್ಟೆಕಟ್ಟಿಸಿ ಅದರ ನೀರು ನೆಟ್ಟಗೆ ದಾವೀದನಗರದ ಪಡುವಣ ತಗ್ಗಿಗೆ ಹರಿಯುವಂತೆ ಮಾಡಿದವನು ಹಿಜ್ಕೀಯನೇ. ಅವನು ತನ್ನ ಎಲ್ಲಾ ಕಾರ್ಯಗಳಲ್ಲಿಯೂ ಸಾರ್ಥಕನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಹಿಜ್ಕೀಯನು ಗೀಹೋನ್ ಬುಗ್ಗೆಯನ್ನು ತಡೆದು ಆ ನೀರು ಪಶ್ಚಿಮದ ಕಡೆಯಲ್ಲಿದ್ದ ದಾವೀದ ನಗರಕ್ಕೆ ನೇರವಾಗಿ ಇಳಿದು ಬರುವಂತೆ ಮಾಡಿದನು. ಅವನು ಕೈಹಾಕಿದ ಕಾರ್ಯಗಳೆಲ್ಲವೂ ಸಫಲವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಈ ಹಿಜ್ಕೀಯನು ಗೀಹೋನೆಂಬ ಮೇಲಿನ ಕಾಲುವೆಯನ್ನು ಮುಚ್ಚಿಬಿಟ್ಟು, ಅದನ್ನು ದಾವೀದನ ಪಟ್ಟಣದಲ್ಲಿ ಪಶ್ಚಿಮ ದಿಕ್ಕಿಗೆ ಕಾಲುವೆಯಾಗಿ ಬರಮಾಡಿದನು. ಹೀಗೆಯೇ ಹಿಜ್ಕೀಯನು ತನ್ನ ಸಮಸ್ತ ಕ್ರಿಯೆಗಳಲ್ಲಿ ವೃದ್ಧಿಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:30
11 ತಿಳಿವುಗಳ ಹೋಲಿಕೆ  

ಅರಸನು ಅವರಿಗೆ, “ನೀವು ನನ್ನ ಸೇವಕರನ್ನು ಕರೆದುಕೊಂಡು ನನ್ನ ಮಗನಾದ ಸೊಲೊಮೋನನನ್ನು ನನ್ನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿಕೊಂಡು ಗೀಹೋನ್ ಬುಗ್ಗೆಗೆ ಹೋಗಿರಿ.


ಆಗ ಅನೇಕರು ಸೇರಿ, “ಇಲ್ಲಿಗೆ ಬರುವ ಅಶ್ಶೂರದ ರಾಜರು ಬೇಕಾದಷ್ಟು ನೀರನ್ನು ನೋಡುವುದೇತಕ್ಕೆ?” ಎಂದುಕೊಂಡು ಎಲ್ಲಾ ಒರತೆಗಳನ್ನೂ ದೇಶದ ಮಧ್ಯದಲ್ಲಿ ಹರಿಯುವ ಹೊಳೆಯನ್ನು ಮುಚ್ಚಿಬಿಟ್ಟರು.


ಹಿಜ್ಕೀಯನ ಉಳಿದ ಚರಿತ್ರೆಯೂ, ಅವನ ಪರಾಕ್ರಮಕೃತ್ಯಗಳೂ, ಅವನು ಕೆರೆಕಾಲುವೆಗಳನ್ನು ಮಾಡಿಸಿ ಊರೊಳಗೆ ನೀರನ್ನು ತಂದ ವಿವರವೂ ಯೆಹೂದ ರಾಜಕಾಲವೃತ್ತಾಂತ ಪುಸ್ತಕ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಯಾಜಕನಾದ ಚಾದೋಕನೂ, ಪ್ರವಾದಿಯಾದ ನಾತಾನನೂ ಗೀಹೋನಿನ ಬಳಿಯಲ್ಲಿ ಅವನಿಗೆ ರಾಜ್ಯಾಭಿಷೇಕ ಮಾಡಿದರು. ಅಲ್ಲಿಂದ ಅವರು ಮಹಾ ಸಂತೋಷದಿಂದ ಜಯಘೋಷ ಮಾಡುತ್ತಾ ಪಟ್ಟಣಕ್ಕೆ ಬಂದಿದ್ದಾರೆ. ಇದರಿಂದಲೇ ಪಟ್ಟಣದಲ್ಲಿ ಗದ್ದಲವುಂಟಾಗಿದೆ. ನೀವು ಕೇಳಿದ ಶಬ್ದವು ಇದೇ.


ಆಗ ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್, ಯೆಹೋಯಾದಾವನ ಮಗನಾದ ಬೆನಾಯ ಎಂಬುವರು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳನ್ನು ತೆಗೆದುಕೊಂಡು ಸೊಲೊಮೋನನನ್ನು ಅರಸನಾದ ದಾವೀದನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿ, ಗೀಹೋನಿಗೆ ಕರೆದುಕೊಂಡು ಹೋದರು.


ದೈವಭಕ್ತಿಯನ್ನು ಬೋಧಿಸುತ್ತಿದ್ದ ಜೆಕರ್ಯನ ಜೀವಮಾನಕಾಲದಲ್ಲಿ ಅವನು ದೇವರನ್ನು ಅವಲಂಬಿಸಿಕೊಂಡಿದ್ದನು; ಹೀಗೆ ಅವನು ಯೆಹೋವನನ್ನು ಅವಲಂಬಿಸಿದ್ದ ಕಾಲದಲ್ಲೆಲ್ಲಾ ದೇವರಾದ ಯೆಹೋವನು ಅವನನ್ನು ಅಭಿವೃದ್ಧಿಗೆ ತಂದನು.


ಅವನು ಪಟ್ಟಣದ ಹೊರಗಿರುವ ಎಲ್ಲಾ ಒರತೆಗಳನ್ನು ಮುಚ್ಚಿಸಬೇಕೆಂದು ಮನಸ್ಸು ಮಾಡಿ ತನ್ನ ಸರದಾರರ ಮತ್ತು ಶೂರರ ಮುಂದೆ ಆ ಪ್ರಸ್ತಾಪವನ್ನೆತ್ತಿ ಅವರ ಸಹಾಯವನ್ನು ಪಡೆದುಕೊಂಡನು.


ಇದಾದ ಮೇಲೆ ಅವನು ಗೀಹೋನ್ ಬುಗ್ಗೆಯ ಪಡುವಣ ಕಡೆಯಿಂದ ಮೀನುಬಾಗಿಲಿನ ಮಾರ್ಗದವರೆಗಿರುವ ತಗ್ಗಿನಲ್ಲಿ ಓಫೆಲ್ ಗುಡ್ಡದ ಸುತ್ತಲೂ ದಾವೀದನಗರದ ಹೊರಗಿನ ಗೋಡೆಯನ್ನು ಇನ್ನೂ ಎತ್ತರವಾಗಿ ಕಟ್ಟಿಸಿ, ಯೆಹೂದ ದೇಶದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳಲ್ಲಿ ಸೇನಾಧಿಪತಿಗಳನ್ನಿರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು