2 ಪೂರ್ವಕಾಲ ವೃತ್ತಾಂತ 32:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 “ಶೂರರಾಗಿರಿ, ಧೈರ್ಯದಿಂದಿರಿ; ಅಶ್ಶೂರದ ಅರಸನಿಗೂ ಅವನೊಂದಿಗಿರುವ ಆ ದೊಡ್ಡ ಗುಂಪಿಗೂ ಅಂಜಬೇಡಿರಿ, ಕಳವಳಪಡಬೇಡಿರಿ. ಅವನಿಗಿರುವ ಸಹಾಯಕ್ಕಿಂತ ನಮಗಿರುವ ಸಹಾಯವು ದೊಡ್ಡದ್ದು. ಅವನೊಂದಿಗಿರುವದಕ್ಕಿಂತ ದೊಡ್ಡವನಾಗಿರುವವನು ನಮ್ಮೊಂದಿಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅಸ್ಸೀರಿಯದ ಅರಸನಿಗೂ ಅವನೊಂದಿಗಿರುವ ಆ ದೊಡ್ಡ ಸೈನ್ಯಕ್ಕೂ ಅಂಜಬೇಡಿ, ಕಳವಳಪಡಬೇಡಿ. ಅವನಿಗಿರುವ ಸಹಾಯಕ್ಕಿಂತ ನಮಗಿರುವ ಸಹಾಯ ದೊಡ್ಡದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಶೂರರಾಗಿರಿ, ಧೈರ್ಯದಿಂದಿರಿ; ಅಶ್ಶೂರದ ಅರಸನಿಗೂ ಅವನೊಂದಿಗಿರುವ ಆ ದೊಡ್ಡ ಗುಂಪಿಗೂ ಅಂಜಬೇಡಿರಿ, ಕಳವಳಪಡಬೇಡಿರಿ. ಅವನಿಗಿರುವ ಸಹಾಯಕ್ಕಿಂತ ನಮಗಿರುವ ಸಹಾಯವು ದೊಡ್ಡದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ಬಲಗೊಳ್ಳಿರಿ, ಧೈರ್ಯವಾಗಿರಿ, ಅಸ್ಸೀರಿಯದ ಅರಸನ ನಿಮಿತ್ತವೂ, ಅವನ ಸಂಗಡ ಕೂಡಿರುವ ಮಹಾ ಗುಂಪಿನ ನಿಮಿತ್ತವೂ ಭಯಪಡಬೇಡಿರಿ, ನಿರಾಶರಾಗಬೇಡಿರಿ. ಏಕೆಂದರೆ ಅವನ ಸಂಗಡ ಇರುವವರಿಗಿಂತ ಮಿಗಿಲಾದದ್ದು ನಮ್ಮ ಸಂಗಡ ಇದೆ. ಅಧ್ಯಾಯವನ್ನು ನೋಡಿ |