Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನಿಗಿರುವ ಸಹಾಯವು ನಶ್ವರವಾದ ತೋಳುಬಲ; ನಮಗಾದರೋ ನಮ್ಮ ಸಹಾಯಕನು ದೇವರಾದ ಯೆಹೋವನೇ. ಆತನು ನಮಗೆ ನೆರವಾಗಿ, ಯುದ್ಧಗಳಲ್ಲಿ ನಮಗೋಸ್ಕರ ಕಾದಾಡುವನು” ಎಂದು ಹೇಳಿ ಧೈರ್ಯಪಡಿಸಿದನು. ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸೆಯುಳ್ಳವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವನಿಗಿರುವ ಸಹಾಯ ಮೂಳೆ ಮಾಂಸದ ತಡಿಕೆಯ ಬಲ; ನಮಗಿದ್ದಾರೆ ನಮ್ಮ ದೇವರಾದ ಸರ್ವೇಶ್ವರ. ಅವರೇ ನಮಗೆ ನೆರವಾಗಿ, ಯುದ್ಧಗಳಲ್ಲಿ ನಮ್ಮ ಪರವಾಗಿ ಕಾದಾಡುವರು,” ಎಂದು ಹೇಳಿ ಹುರಿದುಂಬಿಸಿದನು. ಜನರು ಜುದೇಯದ ಅರಸ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸೆಯುಳ್ಳವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನಿಗಿರುವ ಸಹಾಯವು ಮಾಂಸದ ತೋಳು; ನಮಗಾದರೋ ನಮ್ಮ ದೇವರಾದ ಯೆಹೋವನೇ. ಆತನು ನಮಗೆ ನೆರವಾಗಿ ಯುದ್ಧಗಳಲ್ಲಿ ನಮಗೋಸ್ಕರ ಕಾದಾಡುವನು ಎಂದು ಹೇಳಿ ಧೈರ್ಯಪಡಿಸಿದನು. ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸವುಳ್ಳವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅಶ್ಶೂರದ ರಾಜನ ಬಳಿಯಲ್ಲಿ ಮನುಷ್ಯರು ಮಾತ್ರ ಇರುವರು. ಆದರೆ ನಮ್ಮೊಂದಿಗೆ ದೇವರಾದ ಯೆಹೋವನಿದ್ದಾನೆ. ನಮ್ಮ ದೇವರು ನಮಗೆ ಸಹಾಯ ಮಾಡುತ್ತಾನೆ. ನಮ್ಮ ಯುದ್ಧದಲ್ಲಿ ಆತನು ನಮಗೋಸ್ಕರ ಕಾದಾಡುವನು” ಎಂದು ಹೇಳಿ ಹಿಜ್ಕೀಯ ಅರಸನು ತನ್ನ ಜನರನ್ನು ಪ್ರೋತ್ಸಾಹಿಸಿ ಬಲಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಮಗಾದರೋ ಸಹಾಯ ಮಾಡುವುದಕ್ಕೂ, ನಮ್ಮ ಯುದ್ಧಗಳನ್ನು ನಡಿಸುವುದಕ್ಕೂ ನಮ್ಮ ದೇವರಾದ ಯೆಹೋವ ದೇವರು ತಾವೇ ಇದ್ದಾರೆ,” ಎಂದು ಹೇಳಿದನು. ಆದ್ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಭರವಸೆಯುಳ್ಳವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:8
35 ತಿಳಿವುಗಳ ಹೋಲಿಕೆ  

ಯೆಹೋವನು ಹೀಗೆನ್ನುತ್ತಾನೆ, “ಮಾನವ ಮಾತ್ರದವರಲ್ಲಿ ಭರವಸವಿಟ್ಟು, ನರಜನ್ಮದವರನ್ನು ತನ್ನ ಭುಜಬಲವೆಂದು ತಿಳಿದು, ಯೆಹೋವನನ್ನು ತೊರೆಯುವ ಮನಸ್ಸುಳ್ಳವನು ಶಾಪಗ್ರಸ್ಥನು.


ಈ ಸಮೂಹದೊಂದಿಗೆ ನೀವು ಯುದ್ಧಮಾಡುವುದು ಅವಶ್ಯವಿಲ್ಲ. ಯೆಹೂದ್ಯರೇ, ಯೆರೂಸಲೇಮಿನವರೇ, ಸುಮ್ಮನೆ ನಿಂತುಕೊಂಡು ಯೆಹೋವನು ನಿಮಗೋಸ್ಕರ ಮಾಡುವ ರಕ್ಷಣಾ ಕಾರ್ಯವನ್ನು ನೋಡಿರಿ; ಹೆದರಬೇಡಿರಿ, ಕಳವಳಗೊಳ್ಳಬೇಡಿರಿ. ನಾಳೆ ಅವರೆದುರಿಗೆ ಹೊರಡಿರಿ, ಯೆಹೋವನು ನಿಮ್ಮ ಸಂಗಡ ಇರುವನು” ಎಂದು ಹೇಳಿದನು.


ಅವನು, “ಎಲ್ಲಾ ಯೆಹೂದ್ಯರೇ, ಯೆರೂಸಲೇಮಿನವರೇ, ಅರಸನಾದ ಯೆಹೋಷಾಫಾಟನೇ, ಯೆಹೋವನು ಹೇಳುವುದನ್ನು ಕೇಳಿರಿ: ಈ ಮಹಾಸಮೂಹದ ನಿಮಿತ್ತವಾಗಿ ಕಳವಳಗೊಳ್ಳಬೇಡಿರಿ; ಹೆದರಬೇಡಿರಿ; ಯುದ್ಧವು ನಿಮ್ಮದಲ್ಲ; ದೇವರದೇ.


ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.


ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನಗೆ ಕೇಡು ಮಾಡುವುದಿಲ್ಲ; ಈ ಪಟ್ಟಣದಲ್ಲಿ ನನಗೆ ಬಹಳ ಮಂದಿ ಇದ್ದಾರೆ” ಎಂದು ಹೇಳಿದನು.


ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರಾಗಿದ್ದೀರಿ. ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಉನ್ನತನಾಗಿರುವುದರಿಂದ ನೀವು ಆ ಸುಳ್ಳು ಪ್ರವಾದಿಗಳ ಆತ್ಮವನ್ನು ಜಯಿಸಿದ್ದೀರಿ.


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ.


ಇಗೋ, ದೇವರು ನಾಯಕನಾಗಿ ನಮ್ಮೊಂದಿಗಿದ್ದಾನೆ; ನಿಮಗೆ ವಿರುದ್ಧವಾಗಿ ಅರ್ಭಟದಿಂದ ಊದತಕ್ಕ ತುತ್ತೂರಿಗಳನ್ನು ಹಿಡಿದಿರುವ ಯಾಜಕರೂ ನಮ್ಮೊಂದಿಗಿದ್ದಾರೆ. ಇಸ್ರಾಯೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನೊಡನೆ ಯುದ್ಧ ಮಾಡಬೇಡಿರಿ, ನೀವು ಜಯಿಸಲಾರಿರಿ” ಎಂದು ಕೂಗಿ ಹೇಳಿದನು.


ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಸಂಗಡ ಇದ್ದು ಶತ್ರುಗಳೊಡನೆ ನಿಮಗೋಸ್ಕರ ಯುದ್ಧಮಾಡಿ ನಿಮಗೆ ಜಯವನ್ನು ಉಂಟುಮಾಡುವನು” ಎಂದು ಹೇಳಬೇಕು.


ಕಳವಳವು ಮನಸ್ಸನ್ನು ಕುಗ್ಗಿಸುವುದು, ಕನಿಕರದ ಮಾತು ಅದನ್ನು ಹಿಗ್ಗಿಸುವುದು.


ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಅರಣ್ಯಕ್ಕೆ ಹೊರಟರು. ಹೊರಡುವಾಗ, ಯೆಹೋಷಾಫಾಟನು ಅವರಿಗೆ, “ಯೆಹೂದ್ಯರೇ, ಯೆರೂಸಲೇಮಿನವರೇ, ನನ್ನ ಮಾತನ್ನು ಕೇಳಿರಿ, ಯೆಹೋವನಲ್ಲಿ ಭರವಸವಿಡಿರಿ, ಆಗ ನೀವು ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ನೀವು ಸಫಲರಾಗುವಿರಿ” ಎಂದು ಹೇಳಿದನು.


ಆಸನು ತನ್ನ ದೇವರಾದ ಯೆಹೋವನಿಗೆ, “ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ, ರಕ್ಷಿಸಲು ನಿನ್ನ ಹೊರತು ಬೇರಾರೂ ರಕ್ಷಿಸುವುದಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನೆದುರು ಗೆಲ್ಲಬಾರದು” ಎಂದು ಮೊರೆಯಿಡಲು.


ನೀವು ನಿಮ್ಮ ಶತ್ರುಗಳಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟಾಗ ಅವರ ಹತ್ತಿರ ಕುದುರೆಗಳೂ, ರಥಗಳೂ ಮತ್ತು ನಿಮಗಿಂತ ಹೆಚ್ಚಾದ ಕಾಲ್ಬಲವೂ ಇರುವುದನ್ನು ಕಂಡರೆ ಹೆದರಬಾರದು. ಏಕೆಂದರೆ ಐಗುಪ್ತದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಯೆಹೋವನು ನಿಮ್ಮ ಕಡೆ ಇದ್ದಾನಲ್ಲಾ.


“ಯೆಹೋವನು ನಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಹುಟ್ಟಿಸಾನು ನೋಡಿಕೊಳ್ಳಿರಿ. ಯಾವ ಜನಾಂಗದ ದೇವತೆಯು ತನ್ನ ದೇಶವನ್ನು ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ಕಾಪಾಡಿತು?


ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದುಹೋಗುವುದು. ಅಪ್ಪಣೆ ಮಾಡಿರಿ, ಅದು ನಿಲ್ಲುವುದಿಲ್ಲ. ಏಕೆಂದರೆ ದೇವರು ನಮ್ಮ ಕೂಡ ಇದ್ದಾನಷ್ಟೆ.


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬ ವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ


ನಿನ್ನ ಕೈಯೂ, ದೇವರ ಕೈಯೂ ಸಮವೋ? ದೇವರ ಧ್ವನಿಯಂತೆ ಗುಡುಗಬಲ್ಲಿಯಾ?


ಕರ್ತನು ನಿನ್ನ ಆತ್ಮದೊಂದಿಗೆ ಇರಲಿ. ಆತನ ಕೃಪೆಯು ನಿಮ್ಮೊಂದಿಗಿರಲಿ.


ನೀವು ಹಿಜ್ಕೀಯನಿಂದ ಮರುಳಾಗಿ ಈ ರೀತಿಯಾಗಿ ಮೋಸಹೋಗಬೇಡಿರಿ, ಅವನನ್ನು ನಂಬಲೂ ಬೇಡಿರಿ. ಯಾವ ರಾಜ್ಯಜನಾಂಗಗಳ ದೇವತೆಗಳೂ ತನ್ನ ಪ್ರಜೆಗಳನ್ನು ನನ್ನ ಮತ್ತು ನನ್ನ ಪೂರ್ವಿಕರ ಕೈಯಿಂದ ಬಿಡಿಸಲಾರದೆ ಹೋದನು ಅಂದ ಮೇಲೆ, ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕಿದಂತೆ ತಪ್ಪಿಸಬಲ್ಲನೇ?” ಎಂದು ಹೇಳಿಸಿದನು.


ಇಸ್ರಾಯೇಲರ ದೇವರಾದ ಯೆಹೋವನು ಅವರ ಪರವಾಗಿ ಯುದ್ಧ ಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿ ವಶಮಾಡಿಕೊಂಡನು.


ಆಗ ದಾವೀದನು ಅವನಿಗೆ, “ನೀನು ಈಟಿ, ಕತ್ತಿ, ಬರ್ಜಿಗಳೊಡನೆ ನನ್ನ ಬಳಿಗೆ ಬರುತ್ತೀ. ನಾನಾದರೋ ನೀನು ಹೀಯಾಳಿಸಿದಂಥ ಸೇನಾಧೀಶ್ವರನೂ, ಇಸ್ರಾಯೇಲ್ಯರ ಯುದ್ಧಭಟರ ದೇವರೂ ಆಗಿರುವ ಯೆಹೋವನ ನಾಮದೊಡನೆ ನಿನ್ನ ಬಳಿಗೆ ಬಂದಿದ್ದೇನೆ.


ಆಗ ಎಲೀಷನು ಅವನಿಗೆ, “ಹೆದರಬೇಡ, ಅವರ ಕಡೆಯಲ್ಲಿರುವವರಿಗಿಂತಲೂ, ನಮ್ಮ ಕಡೆಯಲ್ಲಿರುವವರು ಹೆಚ್ಚಾಗಿದ್ದಾರೆ” ಎಂದು ಹೇಳಿ,


ಏಕೆಂದರೆ ದೇವರು ಅವರ ಪರವಾಗಿ ಯುದ್ಧಮಾಡಿದ್ದರಿಂದ ಅವರು ವೈರಿಗಳಲ್ಲಿ ಅನೇಕರನ್ನು ತಿವಿದು ಕೊಂದದ್ದಲ್ಲದೆ, ತಾವು ಸೆರೆಯಾಗಿ ಹೋಗುವವರೆಗೂ ಅವರ ಊರುಗಳಲ್ಲಿ ವಾಸಿಸಿದರು.


ಆ ಕಾಲದಲ್ಲಿ ದರ್ಶಕನಾದ ಹನಾನಿಯು ಯೆಹೂದ್ಯರ ಅರಸನಾದ ಆಸನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ದೇವರಾದ ಯೆಹೋವನನ್ನು ಆಶ್ರಯಿಸಿಕೊಳ್ಳದೆ ಅರಾಮ್ಯರ ಅರಸನನ್ನು ಆಶ್ರಯಿಸಿಕೊಂಡದ್ದರಿಂದ ಅರಾಮ್ ರಾಜನ ಸೈನ್ಯವು ನಿನ್ನ ಕೈಗೆ ಬೀಳದಂತೆ ತಪ್ಪಿಸಿಕೊಂಡಿತು.


ಕೆಲವರು ರಥಬಲದಲ್ಲಿ, ಕೆಲವರು ಅಶ್ವಬಲದಲ್ಲಿ ಹೆಚ್ಚಳಪಡುತ್ತಾರೆ; ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ ಹೆಚ್ಚಳಪಡುತ್ತೇವೆ.


ಮನುಷ್ಯರಲ್ಲಿ ಭರವಸವಿಡುವುದಕ್ಕಿಂತ, ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು.


ನೀವು ಹೆದರಿರುವ ಬಾಬೆಲಿನ ಅರಸನಿಗೆ ಹೆದರಬೇಡಿರಿ, ಅವನಿಗೆ ಅಂಜದಿರಿ; ನಾನು ನಿಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಲಿಕ್ಕೆ ನಿಮ್ಮೊಂದಿಗಿದ್ದೇನಲ್ಲಾ. ಇದು ಯೆಹೋವನಾದ ನನ್ನ ನುಡಿ.


ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು, “ಪರಾಕ್ರಮದಿಂದಲ್ಲ, ಬಲದಿಂದಲ್ಲ. ನನ್ನ ಆತ್ಮದಿಂದಲೇ ಎಂಬುದು ಸೇನಾಧೀಶ್ವರನಾದ ಯೆಹೋವನ ನುಡಿ” ಎಂಬ ಈ ಮಾತುಗಳನ್ನು ಯೆಹೋವನು ಜೆರುಬ್ಬಾಬೆಲನಿಗೆ ದಯಪಾಲಿಸಿದ್ದಾನೆ.


ಜನರು ನಂಬಿದರು. ಯೆಹೋವನು ಇಸ್ರಾಯೇಲರನ್ನು ಕಟಾಕ್ಷಿಸಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡನೆಂಬುದನ್ನು, ಇಸ್ರಾಯೇಲರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.


“ಇಸ್ರಾಯೇಲರೇ, ಕೇಳಿರಿ; ನೀವು ಈಗ ಶತ್ರುಗಳೊಡನೆ ಯುದ್ಧಮಾಡುವ ಕಾಲ ಸಮೀಪಿಸಿತಷ್ಟೆ. ನೀವು ಎದೆಗುಂದಬಾರದು, ದಿಗಿಲುಪಡಬಾರದು, ನಡುಗಬಾರದೂ ಮತ್ತು ಅವರಿಗೆ ಹೆದರಲೂಬಾರದು.


ಹಿಜ್ಕೀಯನು ಇಸ್ರಾಯೇಲರ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದನು. ಯೆಹೂದ್ಯರಲ್ಲಿ ಇವನಿಗೆ ಸಮಾನನಾದ ಅರಸನು ಹಿಂದೆಯೂ ಇರಲಿಲ್ಲ, ಆಮೇಲೂ ಇರಲಿಲ್ಲ.


ಆಸನು ಅವನಿಗೆ ವಿರುದ್ಧವಾಗಿ ಹೊರಟನು. ಮಾರೇಷದ ಬಳಿಯಲ್ಲಿರುವ ಚೆಫಾತಾ ಬಯಲಿನಲ್ಲಿ ಇಬ್ಬರೂ ವ್ಯೂಹಕಟ್ಟಿದರು.


ಮತ್ತು ಯೆಹೋವನು ಸಂಕಲ್ಪಿಸಿದ ದಂಡದ ಪ್ರತಿಯೊಂದು ಪೆಟ್ಟು, ದಮ್ಮಡಿ, ಕಿನ್ನರಿಗಳ ನಾದದೊಡನೆ ಅವರ ಮೇಲೆ ಬೀಳುವುದು. ಆತನು ಅವರೊಂದಿಗೆ ಹೋರಾಡುತ್ತಾ ಯುದ್ಧಮಾಡುವನು.


ಐಗುಪ್ತ್ಯರು ಮನುಷ್ಯ ಮಾತ್ರದವರೇ, ದೇವರಲ್ಲ. ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವಾದವುಗಳು. ಯೆಹೋವನು ತನ್ನ ಕೈ ಚಾಚುವಾಗ ಸಹಾಯ ಮಾಡಿದವನು ಮತ್ತು ಸಹಾಯಪಡೆದವನು ಬಿದ್ದುಹೋಗುವನು. ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು