Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 33:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದರೆ ಆ ಕಷ್ಟದಲ್ಲಿ ಮನಸ್ಸೆಯು ತನ್ನ ದೇವರಾದ ಯೆಹೋವನ ಪ್ರಸನ್ನತೆಯನ್ನು ಬೇಡಿಕೊಂಡನು. ಅವನು ತನ್ನ ಪೂರ್ವಿಕರ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನನ್ನು ಪ್ರಾರ್ಥಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆದರೆ ಆ ಕಷ್ಟದಲ್ಲಿ ಮನಸ್ಸೆ ತನ್ನ ದೇವರಾದ ಸರ್ವೇಶ್ವರನ ಪ್ರಸನ್ನತೆಯನ್ನು ಬೇಡಿಕೊಂಡನು; ತನ್ನ ಪಿತೃಗಳ ದೇವರ ಮುಂದೆ ತನ್ನನ್ನೇ ಬಹಳವಾಗಿ ತಗ್ಗಿಸಿಕೊಂಡು ಅವರನ್ನು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆದರೆ ಆ ಕಷ್ಟದಲ್ಲಿ ಮನಸ್ಸೆಯು ತನ್ನ ದೇವರಾದ ಯೆಹೋವನ ಪ್ರಸನ್ನತೆಯನ್ನು ಬೇಡಿಕೊಂಡನು. ಅವನು ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನನ್ನು ಪ್ರಾರ್ಥಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಈ ಸಂಕಷ್ಟಗಳು ಅವನಿಗೆ ಒದಗಿದಾಗ ಅವನು ದೇವರಾದ ಯೆಹೋವನನ್ನು ತನಗೆ ಸಹಾಯ ಮಾಡಲು ಬೇಡಿದನು. ತನ್ನ ಪೂರ್ವಿಕರ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಮನಸ್ಸೆಯು ಬಾಧೆಯಲ್ಲಿರುವಾಗ ತನ್ನ ದೇವರಾದ ಯೆಹೋವ ದೇವರನ್ನು ಬೇಡಿಕೊಂಡನು ಮತ್ತು ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಪ್ರಾರ್ಥನೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 33:12
29 ತಿಳಿವುಗಳ ಹೋಲಿಕೆ  

ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.


ಆಗ ಹಿಜ್ಕೀಯನ ತನ್ನ ಗರ್ವವನ್ನು ಬಿಟ್ಟು, ಯೆರೂಸಲೇಮಿನವರೊಡನೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ಅವನ ಉಳಿದ ಜೀವಮಾನದಲ್ಲಿ ಯೆಹೋವನ ಕೋಪವು ಅವನ ಮೇಲೆ ಬರಲಿಲ್ಲ.


ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವುದೇನೆಂದರೆ, ‘ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವುದು ಇನ್ನು ಎಲ್ಲಿಯವರೆಗೆ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು.


ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆಗ ಆತನು ನಿಮ್ಮನ್ನು ಮೇಲಕ್ಕೆತ್ತುವನು.


ಕರ್ತನು ಅವನಿಗೆ, “ನೀನೆದ್ದು ನೆಟ್ಟನೇ ಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ಕುರಿತು ವಿಚಾರಿಸು; ಅವನು ಈಗ ಪ್ರಾರ್ಥನೆ ಮಾಡುತ್ತಿದ್ದಾನೆ.


ಯೆಹೋವನ ನಾಮದಲ್ಲಿ ಭಯಭಕ್ತಿಯಿಡುವುದು ಸುಜ್ಞಾನವೇ, ಎಂದು ಯೆರೂಸಲೇಮಿನ ಪಟ್ಟಣಕ್ಕೆ ಎಚ್ಚರಿಕೆ ನೀಡುವ ಯೆಹೋವನ ನುಡಿ. ಬೀಸಿ ಬರುವ ಶಿಕ್ಷೆಯ ದಂಡಕ್ಕೆ ಎಚ್ಚರವಾಗಿರಿ. ಅದನ್ನು ನೇಮಿಸಿದವನು ಯಾರೆಂದು ತಿಳಿದುಕೊಳ್ಳಿರಿ.


ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ, ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೆ ನನ್ನನ್ನು ಆಶ್ರಯಿಸುವರು.


ಆದರೂ ಆಮೋನನ ತಂದೆಯಾದ ಮನಸ್ಸೆಯು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡಿದ್ದನಷ್ಠೆ. ಅಮೋನನಾದರೋ ತನ್ನನ್ನು ತಗ್ಗಿಸಿಕೊಳ್ಳದೆ ಮಹಾ ಅಪರಾಧಿಯಾದನು.


ಕಷ್ಟ ಬಂದಾಗ ಅರಸನಾದ ಆಹಾಜನು ಯೆಹೋವನಿಗೆ ಮತ್ತಷ್ಟು ದ್ರೋಹಿಯಾದನು.


ಈ ಕಾರಣ ಅವನ ದೇವರಾದ ಯೆಹೋವನು, ಅವನನ್ನು ಅರಾಮ್ಯರ ಅರಸನ ಕೈಗೆ ಒಪ್ಪಿಸಿದನು. ಅರಾಮ್ಯರು ಅವನನ್ನು ಸೋಲಿಸಿ, ಅವನ ಜನರಲ್ಲಿ ಬಹಳಷ್ಟುಮಂದಿಯನ್ನು ಸೆರೆಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಅವನು ಇಸ್ರಾಯೇಲ್ ರಾಜನ ಕೈಗೂ ಒಪ್ಪಿಸಲ್ಪಟ್ಟು, ಅವನಿಂದಲೂ ಪೂರ್ಣವಾಗಿ ಅಪಜಯ ಹೊಂದಿದನು.


ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿ, ನನ್ನನ್ನು ವಿಶಾಲವಾದ ಸ್ಥಳದಲ್ಲಿ ನೆಲೆಸುವಂತೆ ಮಾಡಿದನು.


ನನ್ನ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿದನು.


ಯೆಹೋವನೇ, ಪಾತಾಳದಲ್ಲಿದ್ದು ನಿನ್ನನ್ನು ಕೂಗಿಕೊಳ್ಳುತ್ತೇನೆ.


ಕರ್ತನೇ, ನನ್ನ ಮೊರೆಯನ್ನು ಕೇಳು; ನನ್ನ ವಿಜ್ಞಾಪನೆಯ ಶಬ್ದಕ್ಕೆ ಕಿವಿದೆರೆ.


ರಾಜನಿಗೂ ಮತ್ತು ರಾಜಮಾತೆಗೂ, “ನೆಲದಲ್ಲಿ ಕುಳಿತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ” ಎಂದು ಹೇಳಿರಿ.


ಅವರು ಒಂದು ವೇಳೆ ಯೆಹೋವನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಯೆಹೋವನು ಈ ಜನರ ಮೇಲೆ ತೀರಿಸಬೇಕೆಂದು ಪ್ರಕಟಿಸಿರುವ ಕೋಪ ಮತ್ತು ರೋಷಗಳು ಅಪಾರವಾಗಿವೆ” ಎಂದು ಅಪ್ಪಣೆಕೊಟ್ಟನು.


ಅದೇ ಸಮಯದಲ್ಲಿ ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು; ನನ್ನ ಪ್ರಭಾವ ವೈಭವಗಳು ನನಗೆ ಮತ್ತೆ ಲಭಿಸಿ ನನ್ನ ರಾಜ್ಯದ ಕೀರ್ತಿಯು ಪ್ರಕಾಶಿಸಿತು; ನನ್ನ ಮಂತ್ರಿಗಳೂ ಅಧಿಪತಿಗಳೂ ನನ್ನನ್ನು ಸಮಾಧಾನಪಡಿಸಿದರು; ನನ್ನ ರಾಜ್ಯದಲ್ಲಿ ರಾಜನಾಗಿ ನೆಲೆಗೊಂಡೆನು; ನನ್ನ ಮಹಿಮೆಯು ಅತ್ಯಧಿಕವಾಯಿತು.


ಯೆಹೋವನ ವಾಕ್ಯವು ಶೆಮಾಯನಿಗೆ, “ಇವರು ತಮ್ಮನ್ನು ತಗ್ಗಿಸಿಕೊಂಡಿದ್ದರಿಂದ ಇವರನ್ನು ಸಂಹರಿಸುವುದಿಲ್ಲ; ಸ್ವಲ್ಪ ಕಾಲದಲ್ಲಿಯೇ ಇವರಿಗೆ ರಕ್ಷಣೆಯನ್ನು ಅನುಗ್ರಹಿಸುವೆನು; ಶೀಶಕನ ಮುಖಾಂತರವಾಗಿ ನನ್ನ ರೌದ್ರವನ್ನು ಯೆರೂಸಲೇಮಿನ ಮೇಲೆ ಸುರಿದು ಬಿಡುವುದಿಲ್ಲ.


ಅವನು ಆಸನನ್ನು ಎದುರುಗೊಳ್ಳುವುದಕ್ಕೆ ಹೋಗಿ ಅವನಿಗೆ, “ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರೇ, ಕಿವಿಗೊಡಿರಿ, ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟುಬಿಡುವನು.


ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವನ ಕಡೆಗೆ ತಿರುಗಿಕೊಂಡರು. ಅವರು ಆತನನ್ನು ಹುಡುಕಿದಾಗ ಆತನು ಅವರಿಗೆ ಸಿಕ್ಕಿದನು.


“ಇಸ್ರಾಯೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ; ಈ ದೇಶದ ಮತ್ತು ಅದರ ನಿವಾಸಿಗಳ ವಿಷಯ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದಲೂ, ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.


“ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ಆತನು ನನಗೆ ಸದುತ್ತರವನ್ನು ದಯಪಾಲಿಸಿದನು; ಪಾತಾಳದ ಗರ್ಭದೊಳಗಿಂದ ಸಹಾಯಕ್ಕಾಗಿ ಕೂಗಿಕೊಂಡೆನು! ಆಹಾ, ನೀನು ನನ್ನ ಸ್ವರವನ್ನು ಲಾಲಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು