2 ಪೂರ್ವಕಾಲ ವೃತ್ತಾಂತ 33:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಮನಸ್ಸೆಯ ಉಳಿದ ಚರಿತ್ರೆಯೂ, ಅವನು ತನ್ನ ದೇವರಿಗೆ ಮಾಡಿದ ಪ್ರಾರ್ಥನೆಯೂ ದರ್ಶಕರು ಇಸ್ರಾಯೇಲಿನ ದೇವರಾದ ಯೆಹೋವನ ಹೆಸರಿನಲ್ಲಿ ಅವನಿಗೆ ಹೇಳಿದ ಮಾತುಗಳೂ ಇಸ್ರಾಯೇಲ್ ರಾಜರ ವೃತ್ತಾಂತಗಳಲ್ಲಿ ಬರೆಯಲ್ಪಟ್ಟಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಮನಸ್ಸೆಯ ಉಳಿದ ಚರಿತ್ರೆ, ಅವನು ತನ್ನ ದೇವರಿಗೆ ಮಾಡಿದ ಪ್ರಾರ್ಥನೆ, ಹಾಗು ದರ್ಶಿಗಳು ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿನಲ್ಲಿ ಅವನಿಗೆ ಹೇಳಿದ ಮಾತುಗಳು, ಇವು ಇಸ್ರಯೇಲ್ ರಾಜರ ಇತಿಹಾಸದಲ್ಲಿ ದಾಖಲಾಗಿ ಇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಮನಸ್ಸೆಯ ಉಳಿದ ಚರಿತ್ರೆಯೂ ಅವನು ತನ್ನ ದೇವರಿಗೆ ಮಾಡಿದ ಪ್ರಾರ್ಥನೆಯೂ ದರ್ಶಿಗಳು ಇಸ್ರಾಯೇಲ್‍ದೇವರಾದ ಯೆಹೋವನ ಹೆಸರಿನಲ್ಲಿ ಅವನಿಗೆ ಹೇಳಿದ ಮಾತುಗಳೂ ಇಸ್ರಾಯೇಲ್‍ರಾಜರ ವೃತ್ತಾಂತದಲ್ಲಿ ಬರೆದಿರುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಮನಸ್ಸೆ ಮಾಡಿದ ಇತರ ಕಾರ್ಯಗಳು ಮತ್ತು ಅವನು ಯೆಹೋವನಿಗೆ ಮಾಡಿದ ಪ್ರಾರ್ಥನೆ, ದೇವದರ್ಶಿಗಳು ಅವನಿಗೆ ಇಸ್ರೇಲರ ದೇವರಾದ ಯೆಹೋವನ ಸಂದೇಶವನ್ನು ಕೊಟ್ಟ ವಿಷಯವೆಲ್ಲಾ ಇಸ್ರೇಲ್ ರಾಜರ ಚರಿತ್ರೆ ಎಂಬ ಗ್ರಂಥದಲ್ಲಿ ಬರೆಯಲ್ಪಟ್ಟಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಮನಸ್ಸೆಯ ಇತರ ಕ್ರಿಯೆಗಳೂ, ಅವನು ತನ್ನ ದೇವರಿಗೆ ಮಾಡಿದ ಪ್ರಾರ್ಥನೆಯೂ, ಇಸ್ರಾಯೇಲಿನ ದೇವರಾದ ಯೆಹೋವ ದೇವರ ನಾಮದಲ್ಲಿ ಅವನ ಸಂಗಡ ಮಾತನಾಡಿದ ಪ್ರವಾದಿಗಳ ಮಾತುಗಳೂ, ಇಸ್ರಾಯೇಲಿನ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ. ಅಧ್ಯಾಯವನ್ನು ನೋಡಿ |