Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 33:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇಸ್ರಾಯೇಲರು ಇನ್ನು ಮುಂದೆ ದೇಶಭ್ರಷ್ಟರಾಗಿರದೆ ತಮ್ಮ ಪೂರ್ವಿಕರಿಗೆ ನೇಮಿಸಲ್ಟಟ್ಟ ದೇಶದಲ್ಲಿಯೇ ವಾಸವಾಗಿರುವಂತೆ ಮಾಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅದು ಮಾತ್ರವಲ್ಲ, ಇಸ್ರಯೇಲರು ಇನ್ನು ಮುಂದೆ ದೇಶಭ್ರಷ್ಟರಾಗಿರದೆ ತಮ್ಮ ಪಿತೃಗಳಿಗೆ ಕೊಡಲಾದ ನಾಡಿನಲ್ಲಿಯೇ ವಾಸವಾಗಿರುವಂತೆ ಮಾಡುವೆನು,” ಎಂದು ಹೇಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇಸ್ರಾಯೇಲ್ಯರು ಇನ್ನು ಮುಂದೆ ದೇಶಭ್ರಷ್ಟರಾಗಿರದೆ ತಮ್ಮ ಪಿತೃಗಳಿಗೆ ನೇವಿುಸಲ್ಪಟ್ಟ ದೇಶದಲ್ಲಿಯೇ ವಾಸವಾಗಿರುವಂತೆ ಮಾಡುವೆನು ಎಂದು ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ಮೋಶೆಯ ಮೂಲಕ ಕೊಟ್ಟಿರುವ ನಿಯಮಗಳಿಗೆ ಮತ್ತು ಆಜ್ಞೆಗಳಿಗೆ ಇಸ್ರೇಲರು ವಿಧೇಯರಾಗಿರುವುದಾದರೆ, ಅವರ ಪೂರ್ವಿಕರಿಗೆ ಕೊಡಲು ನಾನು ಆರಿಸಿಕೊಂಡ ದೇಶದಿಂದ ಅವರನ್ನು ತೆಗೆದುಬಿಡುವುದೇ ಇಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು ಮೋಶೆಯ ಮುಖಾಂತರ ಆಜ್ಞಾಪಿಸಿದ ಎಲ್ಲಾ ಅಪ್ಪಣೆಗಳನ್ನೂ, ಕಾನೂನುಗಳನ್ನೂ, ವಿಧಿಗಳನ್ನೂ ಕೈಗೊಂಡು ನಡೆಯುವುದರಲ್ಲಿ ಅವರು ಜಾಗರೂಕರಾಗಿದ್ದರೆ, ನಾನು ಅವರ ಪಿತೃಗಳಿಗೆ ನೇಮಕ ಮಾಡಿದ ದೇಶವನ್ನು ಪುನಃ ಇಸ್ರಾಯೇಲರು ಬಿಟ್ಟುಹೋಗುವಂತೆ ಮಾಡುವುದಿಲ್ಲ,” ಎಂದು ಹೇಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 33:8
18 ತಿಳಿವುಗಳ ಹೋಲಿಕೆ  

ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಕೊಟ್ಟು, ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಅವರು ಇನ್ನು ಮೇಲೆ ಯಾವ ಭಯವು ಇಲ್ಲದೆ ಅಲ್ಲಿ ವಾಸಿಸುವರು.


ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ, ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡೆದುಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.


ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಕೊಟ್ಟು ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಅವರು ಇನ್ನು ಮೇಲೆ ಯಾವ ಭಯವೂ ಇಲ್ಲದೆ ಅಲ್ಲಿ ವಾಸಮಾಡುವರು.


“ಅವರು, ಈ ಧರ್ಮಶಾಸ್ತ್ರವಾಕ್ಯಗಳಿಗೆ ಒಡಂಬಟ್ಟು ಕೈಕೊಳ್ಳದೆ ಇರುವವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.


ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಅನುಸರಿಸಿದರೆ ನೀವು ಬದುಕಿ ಅಭಿವೃದ್ಧಿಹೊಂದುವಿರಿ, ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.


ನೀನಾದರೋ ಇಲ್ಲೇ ನನ್ನ ಹತ್ತಿರ ನಿಂತಿರು; ನಾನು ಅವರಿಗೆ ಬೋಧಿಸಬೇಕಾದ ಎಲ್ಲಾ ಧರ್ಮೋಪದೇಶವನ್ನು ಮತ್ತು ವಿಧಿನಿಯಮಗಳನ್ನೂ ನಿನಗೆ ತಿಳಿಸುತ್ತೇನೆ. ನಾನು ಅವರಿಗೆ ಸ್ವಂತಕ್ಕಾಗಿ ಕೊಡುವ ದೇಶದಲ್ಲಿ ಅವರು ಇವುಗಳನ್ನು ಅನುಸರಿಸಬೇಕು” ಎಂದು ಹೇಳಿದನು.


ಮೋಶೆ ಎಲ್ಲಾ ಇಸ್ರಾಯೇಲರನ್ನು ಕರೆದು, “ಇಸ್ರಾಯೇಲರೇ, ನಾನು ಈಗ ನಿಮಗೆ ತಿಳಿಸುವ ಆಜ್ಞಾವಿಧಿಗಳನ್ನು ಕೇಳಿರಿ; ಇವುಗಳನ್ನು ಗ್ರಹಿಸಿಕೊಂಡು ಅನುಸರಿಸಿ ನಡೆಯಬೇಕು.


ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶುಭವುಂಟಾಗುವಂತೆಯೂ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸದಾಕಾಲ ಬಾಳುವಂತೆಯೂ, ನಾನು ನಿಮಗೆ ಈಗ ತಿಳಿಸಿದ ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು.


ಯೆಹೋವನು ಮೋಶೆಯ ಮೂಲಕ ಇಸ್ರಾಯೇಲರಿಗೆ ಮಾಡಿದ ಎಲ್ಲಾ ಆಜ್ಞೆಗಳನ್ನು ಜನರಿಗೆ ಬೋಧಿಸುವುದೂ ನಿಮ್ಮ ಕರ್ತವ್ಯವಾಗಿದೆ” ಎಂದು ಹೇಳಿದನು.


ಯೆಹೋವನು ಮೋಶೆಯ ಮೂಲಕವಾಗಿ ಆಜ್ಞಾಪಿಸಿದಂತೆ ಆರೋನನೂ ಮತ್ತು ಅವನ ಮಕ್ಕಳೂ ಅನುಸರಿಸಿ ನಡೆದರು.


ಆದರೆ ಯೆಹೂದ್ಯರೂ ಯೆರೂಸಲೇಮಿನವರೂ ಮನಸ್ಸೆಯಿಂದ ಪ್ರೇರಿತರಾಗಿ ಇಸ್ರಾಯೇಲರ ಮುಂದೆಯೇ ಯೆಹೋವನಿಂದ ನಾಶಹೊಂದಿದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.


ನಾನು ನಿಮ್ಮನ್ನು ಈ ಸ್ಥಳದಲ್ಲಿ, ನಾನೇ ನಿಮ್ಮ ಪೂರ್ವಿಕರಿಗೆ ಶಾಶ್ವತವಾಗಿ ದಯಪಾಲಿಸಿದ ಈ ದೇಶದಲ್ಲಿ ನೆಲೆಗೊಳಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು