2 ಪೂರ್ವಕಾಲ ವೃತ್ತಾಂತ 33:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆದರೆ ಯೆಹೂದ್ಯರೂ ಯೆರೂಸಲೇಮಿನವರೂ ಮನಸ್ಸೆಯಿಂದ ಪ್ರೇರಿತರಾಗಿ ಇಸ್ರಾಯೇಲರ ಮುಂದೆಯೇ ಯೆಹೋವನಿಂದ ನಾಶಹೊಂದಿದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆದರೆ ಯೆಹೂದ್ಯರೂ ಜೆರುಸಲೇಮಿನವರೂ ಮನಸ್ಸೆಯಿಂದ ಪ್ರಚೋದಿತರಾಗಿ ಇಸ್ರಯೇಲರ ಮುಂದೆಯೇ ಸರ್ವೇಶ್ವರನಿಂದ ನಾಶಹೊಂದಿದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆದರೆ ಯೆಹೂದ್ಯರೂ ಯೆರೂಸಲೇವಿುನವರೂ ಮನಸ್ಸೆಯಿಂದ ಪ್ರೇರಿತರಾಗಿ ಇಸ್ರಾಯೇಲ್ಯರ ಮುಂದೆಯೇ ಯೆಹೋವನಿಂದ ನಾಶಹೊಂದಿದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಮನಸ್ಸೆಯು ಯೆಹೂದದ ಜನರನ್ನೂ ಜೆರುಸಲೇಮಿನಲ್ಲಿದ್ದ ಜನರನ್ನೂ ಕೆಟ್ಟಕಾರ್ಯಗಳನ್ನು ಮಾಡಲು ಪ್ರೋತ್ಸಾಹಿಸಿದನು. ಇಸ್ರೇಲರು ಬರುವದಕ್ಕಿಂತ ಮೊದಲು ಆ ದೇಶದಲ್ಲಿದ್ದ ಜನರಿಗಿಂತಲೂ ಅತ್ಯಂತ ಕೆಟ್ಟವನಾಗಿ ವರ್ತಿಸಿದನು. ಆ ದೇಶದಲ್ಲಿದ್ದ ಜನರನ್ನು ಯೆಹೋವನು ನಾಶಮಾಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆದರೆ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಇಸ್ರಾಯೇಲರ ಮುಂದೆಯೇ ಯೆಹೋವ ದೇವರಿಂದ ನಾಶಹೊಂದಿದ ಇತರ ಜನಾಂಗಗಳಿಗಿಂತ ಅಧಿಕವಾಗಿ ಕೆಟ್ಟದ್ದನ್ನು ಮಾಡಲು ಮನಸ್ಸೆಯು ಅವರನ್ನು ಪ್ರೇರೇಪಿಸಿದನು. ಅಧ್ಯಾಯವನ್ನು ನೋಡಿ |