Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 34:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೋಷೀಯನು ಅರಸನಾದಾಗ ಅವನು ಎಂಟು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಮೂವತ್ತೊಂದು ವರ್ಷಗಳ ಕಾಲ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೋಷೀಯನು ಅರಸನಾದಾಗ ಅವನಿಗೆ ಎಂಟು ವರ್ಷ ಪ್ರಾಯ. ಅವನು ಜೆರುಸಲೇಮಿನಲ್ಲಿ ಮೂವತ್ತೊಂದು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೋಷೀಯನು ಅರಸನಾದಾಗ ಎಂಟು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಮೂವತ್ತೊಂದು ವರುಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೋಷೀಯನು ಅರಸನಾದಾಗ ಎಂಟು ವರ್ಷ ಪ್ರಾಯದವನಾಗಿದ್ದನು. ಅವನು ಮೂವತ್ತೊಂದು ವರ್ಷದ ತನಕ ಜೆರುಸಲೇಮಿನಲ್ಲಿ ರಾಜ್ಯಭಾರವನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೋಷೀಯನು ಅರಸನಾದಾಗ ಎಂಟು ವರ್ಷದವನಾಗಿದ್ದನು, ಅವನು ಮೂವತ್ತೊಂದು ವರ್ಷ ಯೆರೂಸಲೇಮಿನಲ್ಲಿ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 34:1
18 ತಿಳಿವುಗಳ ಹೋಲಿಕೆ  

ಆಮೋನನ ಮಗನೂ, ಯೆಹೂದದ ಅರಸನಾದ ಯೋಷೀಯನ ಕಾಲದಲ್ಲಿ ಕೂಷಿಯನ ಮಗನೂ, ಗೆದಲ್ಯನ ಮೊಮ್ಮಗನೂ, ಹಿಜ್ಕೀಯನಿಗೆ ಹುಟ್ಟಿದ ಅಮರ್ಯನ ಮರಿಮಗನೂ ಆದ ಚೆಫನ್ಯನಿಗೆ ಯೆಹೋವನು ದಯಪಾಲಿಸಿದ ವಾಕ್ಯ.


ಯೆಹೂದದ ಅರಸನೂ, ಆಮೋನನ ಮಗನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಲ್ಲಿ ಯೆಹೋವನಿಂದ ಈ ವಾಕ್ಯವನ್ನು ಹೊಂದಿದನು.


ಎಚ್ಚರಿಕೆಯ ಮಾತಿಗೆ ಕಿವಿಗೊಡದ ಮುದಕನೂ, ಮೂಢನೂ ಆದ ಅರಸನಿಗಿಂತ ಜ್ಞಾನಿಯಾದ ಬಡ ಯುವಕನೇ ಮೇಲು.


ಆದರೆ ದೇಶದ ಜನರು ಅರಸನಾದ ಆಮೋನನಿಗೆ ವಿರುದ್ಧವಾಗಿ ಒಳಸಂಚು ಮಾಡಿದವರನ್ನೆಲ್ಲಾ ಕೊಂದುಹಾಕಿ ಆಮೋನನಿಗೆ ಬದಲಾಗಿ ಅವನ ಮಗನಾದ ಯೋಷೀಯನನ್ನು ಅರಸನನ್ನಾಗಿ ಮಾಡಿದರು.


ಮನಸ್ಸೆಯು ಅರಸನಾದಾಗ ಅವನು ಹನ್ನೆರಡು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಐವತ್ತೈದು ವರ್ಷಗಳ ಕಾಲ ಆಳಿದನು.


ಆನಂತರ ಎಲ್ಲಾ ಯೆಹೂದ್ಯರು ಅಮಚ್ಯನ ಮಗನಾದ ಉಜ್ಜೀಯನನ್ನು ಅರಸನ್ನನ್ನಾಗಿ ಮಾಡಿದರು. ಉಜ್ಜೀಯನು ಅರಸನಾದಾಗ ಹದಿನಾರು ವರ್ಷದವನಾಗಿದ್ದ.


ಯೆಹೋವಾಷನು ಅರಸನಾದಾಗ ಏಳು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ನಲ್ವತ್ತು ವರ್ಷ ರಾಜ್ಯಭಾರ ಮಾಡಿದನು. ಬೇರ್ಷೆಬದವಳಾದ ಚಿಬ್ಯಳು ಅವನ ತಾಯಿ.


ಆಗ ಆ ಮನುಷ್ಯನು ಯೆಹೋವನ ಅಪ್ಪಣೆಯಿಂದ ಯಜ್ಞವೇದಿಯನ್ನು ಕುರಿತು, “ವೇದಿಯೇ, ವೇದಿಯೇ, ದಾವೀದನ ಸಂತಾನದಲ್ಲಿ ಯೋಷೀಯನು ಎಂಬ ಒಬ್ಬ ಮನುಷ್ಯನು ಹುಟ್ಟುವನು. ಅವನು ನಿನ್ನ ಮೇಲೆ ಧೂಪಹಾಕುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು, ಅವರನ್ನು ನಿನ್ನ ಮೇಲೆಯೇ ಯಜ್ಞಮಾಡುವನು. ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವು ಎಂದು ಯೆಹೋವನು ಹೇಳುತ್ತಾನೆ” ಅಂದನು.


ಬಾಲಕನಾದ ಸಮುವೇಲನಾದರೋ ಬೆಳೆಯುತ್ತಾ ಬಂದ ಹಾಗೆಲ್ಲಾ ಯೆಹೋವನ ಮತ್ತು ಮನುಷ್ಯರ ದಯೆಗೆ ಪಾತ್ರನಾದನು.


ಆದರೆ ಬಾಲಕನಾದ ಸಮುವೇಲನು ಏಫೋದೆಂಬ ನಾರು ಮಡಿಯಂಗಿಯನ್ನು ತೊಟ್ಟುಕೊಂಡು ಯೆಹೋವನ ಸೇವೆ ಮಾಡುತ್ತಿದ್ದನು.


ಅರಸನಾದ ಯೋಷೀಯನ ಕಾಲದಲ್ಲಿ ಯೆಹೋವನು ನನಗೆ ಹೀಗೆ ಹೇಳಿದನು, “ಭ್ರಷ್ಟಳಾದ ಇಸ್ರಾಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ಎತ್ತರವಾದ ಎಲ್ಲಾ ಗುಡ್ಡಗಳನ್ನು ಹತ್ತಿ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೆ ಹೋಗಿ ವ್ಯಭಿಚಾರಿಯಾಗಿ ನಡೆದಳಷ್ಟೆ.


ಆತನು, “ಆಮೋನನ ಮಗನೂ ಯೆಹೂದದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಿಂದ ಈ ದಿನದವರೆಗೆ, ಇಪ್ಪತ್ತಮೂರು ವರ್ಷಗಳಿಂದಲೂ ಯೆಹೋವನು ತನ್ನ ವಾಕ್ಯವನ್ನು ನನಗೆ ದಯಪಾಲಿಸಿದ್ದಾನೆ; ಅದನ್ನು ನಿಮಗೆ ಪ್ರಕಟಿಸುತ್ತಲೇ ಬಂದಿದ್ದೇನೆ; ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.


ಅನಂತರ ಅರಸನು ದೂತರ ಮುಖಾಂತರವಾಗಿ ಯೆರೂಸಲೇಮಿನ ಮತ್ತು ಯೆಹೂದ ಪ್ರಾಂತ್ಯಗಳಲ್ಲಿರುವ ಎಲ್ಲಾ ಊರುಗಳ ಹಿರಿಯರನ್ನು ತನ್ನ ಬಳಿಗೆ ಕರೆಯಿಸಿದನು.


ತಕ್ಷಣವೇ ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು