2 ಪೂರ್ವಕಾಲ ವೃತ್ತಾಂತ 34:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಗಾಯನ ನಿಪುಣರಾದ ಲೇವಿಯರೆಲ್ಲರೂ ಹೊರೆಹೊರುವವರ ಮೇಲ್ವಿಚಾರಕರಾಗಿದ್ದು ಎಲ್ಲಾ ವಿಧವಾದ ಕೆಲಸಮಾಡುವವರನ್ನು ನಡೆಸುತ್ತಿದ್ದರು; ಲೇವಿಯರಲ್ಲಿ ಕೆಲವರು ಲೇಖಕರೂ, ಕೆಲವರು ಅಧಿಕಾರಿಗಳೂ, ದ್ವಾರಪಾಲಕರೂ ಲೇವಿಯರೇ ಆಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಗಾಯನ ನಿಪುಣರಾದ ಲೇವಿಯರೆಲ್ಲರೂ ಹೊರೆಹೊರುವವರ ಮೇಲ್ವಿಚಾರಕರಾಗಿದ್ದು ಎಲ್ಲಾ ವಿಧವಾದ ಕೆಲಸಮಾಡುವವರನ್ನು ನೋಡಿಕೊಳ್ಳುತ್ತಿದ್ದರು; ಎಲ್ಲ ಲೇಖಕರು, ಅಧಿಕಾರಿಗಳು ಹಾಗು ದ್ವಾರಪಾಲಕರು ಲೇವಿಯರೇ ಆಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಗಾಯನ ನಿಪುಣರಾದ ಲೇವಿಯರೆಲ್ಲರೂ ಹೊರೆಹೊರುವವರ ಮೇಲ್ವಿಚಾರಕರಾಗಿದ್ದು ಎಲ್ಲಾ ವಿಧವಾದ ಕೆಲಸಮಾಡುವವರನ್ನು ನಡಿಸುತ್ತಿದ್ದರು; ಎಲ್ಲಾ ಲೇಖಕರೂ ಅಧಿಕಾರಿಗಳೂ ದ್ವಾರಪಾಲಕರೂ ಲೇವಿಯರೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಇದಲ್ಲದೆ ಕಾರ್ಮಿಕರ ಮೇಲೆಯೂ, ಬೇರೆ ಬೇರೆ ಸೇವೆಯ ಕೆಲಸವನ್ನು ಮಾಡುವವರ ಮೇಲೆಯೂ ಅವರು ಮೇಲ್ವಿಚಾರಕರಾಗಿದ್ದರು. ಲೇವಿಯರಲ್ಲಿ ಕೆಲವರು ಕಾರ್ಯದರ್ಶಿಗಳೂ, ಬರಹಗಾರರೂ, ದ್ವಾರಪಾಲಕರೂ ಆಗಿದ್ದರು. ಅಧ್ಯಾಯವನ್ನು ನೋಡಿ |
ಇಗೋ, ಯೆಹೋವನ ಆಜ್ಞಾಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಮಹಾಯಾಜಕನಾದ ಅಮರ್ಯನು ನಿಮ್ಮ ನಾಯಕನು; ರಾಜಕೀಯ ಕಾರ್ಯಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಇಷ್ಮಾಯೇಲನ ಮಗನೂ ಯೆಹೂದ ಕುಲದ ಪ್ರಮುಖನೂ ಆದ ಜೆಬದ್ಯನು ಅಧ್ಯಕ್ಷನು; ಲೇವಿಯರು ನ್ಯಾಯಸ್ಥಾನದ ಉದ್ಯೋಗಸ್ಥರಾಗಿ ನಿಮ್ಮೊಂದಿಗಿದ್ದಾರೆ; ಧ್ಯೆರ್ಯದಿಂದ ಕಾರ್ಯಪ್ರವೃತ್ತರಾಗಿರಿ, ಯೆಹೋವನು ಸಜ್ಜನರ ಸಹಾಯಕನು” ಎಂದು ಹೇಳಿದನು.
ಇದಲ್ಲದೆ, ತನ್ನ ತಂದೆಯಾದ ದಾವೀದನ ಆಜ್ಞೆಗೆ ಅನುಸಾರವಾಗಿ ಯಾಜಕ ವರ್ಗಗಳನ್ನೂ, ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವರನ್ನು ಸ್ತುತಿಸಲು, ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯುತ್ತಲೂ ಇರಬೇಕಾಗಿತ್ತು. ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ ಇದೇ ಆಗಿತ್ತು.