2 ಪೂರ್ವಕಾಲ ವೃತ್ತಾಂತ 34:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
21 “ನಮ್ಮ ಪೂರ್ವಿಕರು ಈ ಗ್ರಂಥದಲ್ಲಿ ಬರೆದಿರುವ ಯೆಹೋವನ ಆಜ್ಞೆಗಳನ್ನೆಲ್ಲಾ ಕೈಕೊಳ್ಳದೆ ಹೋದುದರಿಂದಲೇ ಯೆಹೋವನು ತನ್ನ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾನೆ; ಆದುದರಿಂದ ನೀವು ನನಗೋಸ್ಕರವೂ ಹಾಗೂ ಇಸ್ರಾಯೇಲ್ಯರಲ್ಲಿ, ಯೆಹೂದ್ಯರಲ್ಲಿ ಉಳಿದಿರುವವರಿಗೋಸ್ಕರವೂ ಯೆಹೋವನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ಅರ್ಥವನ್ನು ವಿವರವಾಗಿ ತಿಳಿದು ಬರಲು” ಆಜ್ಞಾಪಿಸಿದನು.
21 “ನಮ್ಮ ಪೂರ್ವಜರು ಈ ಗ್ರಂಥದಲ್ಲಿ ಬರೆದಿರುವ ಸರ್ವೇಶ್ವರನ ಆಜ್ಞೆಗಳನ್ನೆಲ್ಲಾ ಕೈಗೊಳ್ಳದೆ ಹೋದುದರಿಂದಲೇ ಸರ್ವೇಶ್ವರ ತಮ್ಮ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾರೆ. ಆದುದರಿಂದ ನೀವು ನನ್ನ ಪರವಾಗಿ, ಹಾಗು ಇಸ್ರಯೇಲರಲ್ಲಿ ಮತ್ತು ಯೆಹೂದ್ಯರಲ್ಲಿ ಉಳಿದಿರುವವರ ಪರವಾಗಿ ಸರ್ವೇಶ್ವರನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ಬಗ್ಗೆ ವಿಚಾರಿಸಿರಿ,” ಎಂದು ಆಜ್ಞಾಪಿಸಿದನು.
21 ನಮ್ಮ ಪೂರ್ವಿಕರು ಈ ಗ್ರಂಥದಲ್ಲಿ ಬರೆದಿರುವ ಯೆಹೋವನ ಆಜ್ಞೆಗಳನ್ನೆಲ್ಲಾ ಕೈಕೊಳ್ಳದೆ ಹೋದದರಿಂದ ಯೆಹೋವನು ತನ್ನ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾನೆ; ಆದದರಿಂದ ನೀವು ನನಗೋಸ್ಕರವೂ ಇಸ್ರಾಯೇಲ್ಯರಲ್ಲಿ ಮತ್ತು ಯೆಹೂದ್ಯರಲ್ಲಿ ಉಳಿದಿರುವವರಿಗೋಸ್ಕರವೂ ಯೆಹೋವನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ವಿಷಯವಾಗಿ ವಿಚಾರಿಸಿರಿ ಎಂದು ಆಜ್ಞಾಪಿಸಿದನು.
21 “ಹೋಗಿ ನನ್ನ ವಿಷಯವಾಗಿಯೂ ಇಸ್ರೇಲ್ ಮತ್ತು ಯೆಹೂದದಲ್ಲಿರುವ ಜನರಿಗೋಸ್ಕರವಾಗಿಯೂ ಯೆಹೋವನಲ್ಲಿ ವಿಚಾರಿಸಿರಿ. ಯೆಹೋವನು ನಮ್ಮ ಮೇಲೆ ಕೋಪಗೊಂಡಿದ್ದಾನೆ. ಯಾಕೆಂದರೆ ನಮ್ಮ ಪೂರ್ವಿಕರು ಆತನ ಧರ್ಮಶಾಸ್ತ್ರದ ಪ್ರಕಾರ ನಡೆದುಕೊಂಡಿಲ್ಲ. ಈ ಪುಸ್ತಕದಲ್ಲಿ ಮಾಡಬೇಕೆಂದು ಹೇಳಿದ್ದನ್ನು ಅವರು ಮಾಡದೆ ಹೋಗಿದ್ದಾರೆ” ಎಂದು ಹೇಳಿದನು.
21 “ನೀವು ಹೋಗಿ ಸಿಕ್ಕಿದ ಈ ಗ್ರಂಥದ ವಾಕ್ಯಗಳ ಕುರಿತು ನನಗೋಸ್ಕರವೂ, ಇಸ್ರಾಯೇಲ್ ಮತ್ತು ಯೆಹೂದದಲ್ಲಿ ಉಳಿದವರಿಗೋಸ್ಕರವೂ ಯೆಹೋವ ದೇವರ ಬಳಿಯಲ್ಲಿ ವಿಚಾರಿಸಿರಿ. ಏಕೆಂದರೆ ನಮ್ಮನ್ನು ಕುರಿತು ಬರೆದಿರುವ ಎಲ್ಲವನ್ನೂ ಕೈಗೊಂಡು ನಡೆಯಲು ನಮ್ಮ ಪಿತೃಗಳು ಈ ಗ್ರಂಥದ ಮಾತುಗಳನ್ನು ಕೇಳದೆ ಹೋದುದರಿಂದ, ನಮ್ಮ ಮೇಲೆ ಸುರಿದ ಯೆಹೋವ ದೇವರ ಕೋಪವು ದೊಡ್ಡದಾಗಿದೆ,” ಎಂದು ಹೇಳಿದನು.
“ದಯಮಾಡಿ ಯೆಹೋವನ ಚಿತ್ತವೇನೆಂದು ಆತನನ್ನು ನಮಗೋಸ್ಕರ ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮ್ಮ ವಿರುದ್ಧವಾಗಿ ಯುದ್ಧ ಮಾಡುತ್ತಿದ್ದಾನಲ್ಲಾ; ಒಂದು ವೇಳೆ ಯೆಹೋವನು ತನ್ನ ಸಮಸ್ತ ಅದ್ಭುತಕಾರ್ಯಗಳಿಗೆ ಅನುಗುಣವಾಗಿ ನಮ್ಮ ಪಕ್ಷವನ್ನು ವಹಿಸಿ ಈ ಶತ್ರುವು ನಮ್ಮ ಕಡೆಯಿಂದ ತೊಲಗುವಂತೆ ಮಾಡಿಯಾನು” ಎಂದು ಅವರ ಮೂಲಕ ವಿಜ್ಞಾಪಿಸಿದಾಗ ಯೆಹೋವನಿಂದ ಯೆರೆಮೀಯನಿಗೆ ದೈವೋಕ್ತಿಯು ದೊರೆಯಿತು.
ರೆಮಲ್ಯನ ಮಗನು ಇಸ್ರಾಯೇಲ್ಯರ ಅರಸನು ಆದ ಪೆಕಹ ಎಂಬವನು ಒಂದೇ ದಿನ ಯೆಹೂದ್ಯರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಲ್ಲಿಸಿದನು. ಇವರೆಲ್ಲರೂ ಯುದ್ಧವೀರರು. ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತೊರೆದು ಬಿಟ್ಟಿದ್ದೇ ಇದಕ್ಕೆ ಕಾರಣವಾಗಿತ್ತು.
“ನಮ್ಮ ಪೂರ್ವಿಕರು ನಮಗೆ ಸಿಕ್ಕಿರುವ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳಿಗೆ ಕಿವಿಗೊಡದೆಯೂ, ಅವುಗಳನ್ನು ಕೈಕೊಳ್ಳದೆಯೂ ಹೋದುದರಿಂದ ನಾವು ಯೆಹೋವನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದುದರಿಂದ ನೀವು ನನಗಾಗಿಯೂ, ಜನರಿಗಾಗಿಯೂ, ಮತ್ತು ಎಲ್ಲಾ ಯೆಹೂದ್ಯರಿಗಾಗಿಯೂ ಯೆಹೋವನ ಬಳಿಗೆ ಹೋಗಿ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳ ಕುರಿತಾಗಿ ವಿಚಾರಿಸಿರಿ” ಎಂದು ಆಜ್ಞಾಪಿಸಿದನು.
(ಪೂರ್ವ ಕಾಲದಲ್ಲಿ ಇಸ್ರಾಯೇಲ್ಯರಲ್ಲಿ ಯಾವನಾದರೂ ದೈವೋತ್ತರ ಕೇಳಬೇಕಾದರೆ “ದೇವ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ” ಎನ್ನುವರು. ಈ ಕಾಲದಲ್ಲಿ ಪ್ರವಾದಿಗಳೆನಿಸಿಕೊಳ್ಳುವವರನ್ನು, ಆ ಕಾಲದಲ್ಲಿ ದೇವದರ್ಶಿಗಳೆಂದು ಕರೆಯುತ್ತಿದ್ದರು.)
ಆಗ ಹಿಲ್ಕೀಯನೂ ಅರಸನ ಜನರೂ ಹುಲ್ದ ಎಂಬ ಪ್ರವಾದಿನಿಯ ಬಳಿಗೆ ಹೋಗಿ, ಆಕೆಯ ಹತ್ತಿರ ವಿಚಾರಿಸಿದರು. ಹಸ್ರನ ಮೊಮ್ಮಗನೂ ತೊಕ್ಹತನ ಮಗನೂ ರಾಜವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಆಕೆಯ ಗಂಡನು. ಆಕೆಯು ಯೆರೂಸಲೇಮಿನ ಎರಡನೆಯ ಕೇರಿಯಲ್ಲಿ ವಾಸವಾಗಿದ್ದಳು.