2 ಪೂರ್ವಕಾಲ ವೃತ್ತಾಂತ 34:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆಗ ಹಿಲ್ಕೀಯನೂ ಅರಸನ ಜನರೂ ಹುಲ್ದ ಎಂಬ ಪ್ರವಾದಿನಿಯ ಬಳಿಗೆ ಹೋಗಿ, ಆಕೆಯ ಹತ್ತಿರ ವಿಚಾರಿಸಿದರು. ಹಸ್ರನ ಮೊಮ್ಮಗನೂ ತೊಕ್ಹತನ ಮಗನೂ ರಾಜವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಆಕೆಯ ಗಂಡನು. ಆಕೆಯು ಯೆರೂಸಲೇಮಿನ ಎರಡನೆಯ ಕೇರಿಯಲ್ಲಿ ವಾಸವಾಗಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆಗ ಹಿಲ್ಕೀಯನೂ ಅರಸನ ಜನರೂ ಹುಲ್ದ ಎಂಬ ಪ್ರವಾದಿನಿಯ ಬಳಿಗೆ ಹೋಗಿ, ಅಪ್ಪಣೆಯಾದಂತೆ ಆಕೆಯ ಬಳಿ ವಿಚಾರಿಸಿದರು. ಹಸ್ತನ ಮೊಮ್ಮಗನೂ ತೊಕ್ಹತನ ಮಗನೂ ರಾಜವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಆಕೆಯ ಗಂಡ. ಆಕೆ ಜೆರುಸಲೇಮಿನ ಎರಡನೆಯ ಕೇರಿಯಲ್ಲಿ ವಾಸವಾಗಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆಗ ಹಿಲ್ಕೀಯನೂ ಅರಸನ ಜನರೂ ಹುಲ್ದ ಎಂಬ ಪ್ರವಾದಿನಿಯ ಬಳಿಗೆ ಹೋಗಿ ಅಪ್ಪಣೆಯಾದಂತೆ ಆಕೆಯ ಹತ್ತಿರ ವಿಚಾರಿಸಿದರು. ಹಸ್ರನ ಮೊಮ್ಮಗನೂ ತೊಕ್ಹತನ ಮಗನೂ ರಾಜವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಆಕೆಯ ಗಂಡನು. ಆಕೆಯು ಯೆರೂಸಲೇವಿುನ ಎರಡನೆಯ ಕೇರಿಯಲ್ಲಿ ವಾಸವಾಗಿದ್ದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಹಿಲ್ಕೀಯನೂ ಅರಸನ ಸೇವಕರೂ ಪ್ರವಾದಿನಿಯಾಗಿದ್ದ ಹುಲ್ದಳ ಬಳಿಗೆ ಹೋದರು. ಆಕೆ ತೊಕ್ಹತನ ಮಗನಾದ ಶಲ್ಲೂಮನ ಹೆಂಡತಿಯಾಗಿದ್ದಳು. ತೊಕ್ಹತನು ಹಸ್ರನ ಮಗ. ಇವನು ಅರಸನ ಬಟ್ಟೆಬರೆಗಳ ಮುಖ್ಯಸ್ತನಾಗಿದ್ದನು. ಹುಲ್ದಳು ಜೆರುಸಲೇಮಿನ ಹೊಸ ಬಡಾವಣೆಯಲ್ಲಿ ವಾಸ ಮಾಡುತ್ತಿದ್ದಳು. ಅರಸನು ಹೇಳಿದ್ದನ್ನೆಲ್ಲಾ ಸೇವಕರು ಆಕೆಗೆ ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆಗ ಹಿಲ್ಕೀಯನೂ ಅರಸನ ಜನರೂ ಹಸ್ರನ ಮಗನೂ ತೊಕ್ಹತನ ಮಗನೂ ಪ್ರವಾದಿನಿ ಹುಲ್ದಳ ಬಳಿಗೆ ಹೋಗಿ ವಿಚಾರಿಸಿದರು. ಆಕೆಯು ರಾಜವಸ್ತ್ರಗಳ ಮೇಲ್ವಿಚಾರಕನೂ ಆದ ಶಲ್ಲೂಮನ ಹೆಂಡತಿ, ಅವಳು ಯೆರೂಸಲೇಮಿನೊಳಗೆ ಹೊಸದಾದ ನಿರ್ಮಿತ ಭಾಗದಲ್ಲಿ ವಾಸವಾಗಿದ್ದಳು. ಅಧ್ಯಾಯವನ್ನು ನೋಡಿ |
“ನಮ್ಮ ಪೂರ್ವಿಕರು ಈ ಗ್ರಂಥದಲ್ಲಿ ಬರೆದಿರುವ ಯೆಹೋವನ ಆಜ್ಞೆಗಳನ್ನೆಲ್ಲಾ ಕೈಕೊಳ್ಳದೆ ಹೋದುದರಿಂದಲೇ ಯೆಹೋವನು ತನ್ನ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾನೆ; ಆದುದರಿಂದ ನೀವು ನನಗೋಸ್ಕರವೂ ಹಾಗೂ ಇಸ್ರಾಯೇಲ್ಯರಲ್ಲಿ, ಯೆಹೂದ್ಯರಲ್ಲಿ ಉಳಿದಿರುವವರಿಗೋಸ್ಕರವೂ ಯೆಹೋವನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ಅರ್ಥವನ್ನು ವಿವರವಾಗಿ ತಿಳಿದು ಬರಲು” ಆಜ್ಞಾಪಿಸಿದನು.