2 ಪೂರ್ವಕಾಲ ವೃತ್ತಾಂತ 34:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ತಾನು ಕೇಳಿದ ವಾಕ್ಯಗಳ ವಿಷಯವಾಗಿ, ಇಸ್ರಾಯೇಲ್ ದೇವರಾದ ಯೆಹೋವನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ತಿಳಿಸಬೇಕಾದ ಮಾತೇನೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ತಾನು ಕೇಳಿದ ವಾಕ್ಯಗಳ ಬಗ್ಗೆ, ಸರ್ವೇಶ್ವರನ ಬಳಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಜುದೇಯದ ಅರಸನಿಗೆ ನೀವು ತಿಳಿಸಬೇಕಾದ ಮಾತೇನೆಂದರೆ: ‘ಇಸ್ರಯೇಲ್ ದೇವರಾದ ಸರ್ವೇಶ್ವರ ಇಂತೆನ್ನುತ್ತಾರೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ತಾನು ಕೇಳಿದ ವಾಕ್ಯಗಳ ವಿಷಯವಾಗಿ ಯೆಹೋವನ ಬಳಿಯಲ್ಲಿ ವಿಚಾರಿಸುವದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ತಿಳಿಸಬೇಕಾದ ಮಾತೇನಂದರೆ - ಇಸ್ರಾಯೇಲ್‍ದೇವರಾದ ಯೆಹೋವನು ಇಂತೆನ್ನುತ್ತಾನೆ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 “ಆದರೆ ಯೆಹೋವನನ್ನು ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಾದ ಯೋಷೀಯನಿಗೆ ಹೀಗೆ ಹೇಳಿರಿ: ‘ನೀನು ಸ್ವಲ್ಪಕಾಲದ ಹಿಂದೆ ಕೇಳಿದ ವಿಷಯಗಳ ಬಗ್ಗೆ ಇಸ್ರೇಲಿನ ಯೆಹೋವನು ಹೇಳುವುದೇನೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆದರೆ ಯೆಹೋವ ದೇವರನ್ನು ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದು ಇದೇ, ‘ನೀವು ಕೇಳಿದ ಮಾತುಗಳನ್ನು ಕುರಿತು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ಅಧ್ಯಾಯವನ್ನು ನೋಡಿ |
“ನಮ್ಮ ಪೂರ್ವಿಕರು ಈ ಗ್ರಂಥದಲ್ಲಿ ಬರೆದಿರುವ ಯೆಹೋವನ ಆಜ್ಞೆಗಳನ್ನೆಲ್ಲಾ ಕೈಕೊಳ್ಳದೆ ಹೋದುದರಿಂದಲೇ ಯೆಹೋವನು ತನ್ನ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾನೆ; ಆದುದರಿಂದ ನೀವು ನನಗೋಸ್ಕರವೂ ಹಾಗೂ ಇಸ್ರಾಯೇಲ್ಯರಲ್ಲಿ, ಯೆಹೂದ್ಯರಲ್ಲಿ ಉಳಿದಿರುವವರಿಗೋಸ್ಕರವೂ ಯೆಹೋವನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ಅರ್ಥವನ್ನು ವಿವರವಾಗಿ ತಿಳಿದು ಬರಲು” ಆಜ್ಞಾಪಿಸಿದನು.