2 ಪೂರ್ವಕಾಲ ವೃತ್ತಾಂತ 34:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನಾನು ಈ ದೇಶದ ಮೇಲೆಯೂ, ಅದರ ನಿವಾಸಿಗಳ ಮೇಲೆಯೂ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮರಣಹೊಂದಿ ಸಮಾಧಿ ಸೇರುವಂತೆ ಅನುಗ್ರಹಿಸುವೆನು ಎಂಬುದಾಗಿ ತಿಳಿಸಿದೆ ಎಂದು ಅರಸನಿಗೆ ತಿಳಿಸಿರಿ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ನಾನು ನಾಡಿನ ಮೇಲೂ ಇದರ ನಿವಾಸಿಗಳ ಮೇಲೂ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮೃತಿಹೊಂದಿ ಸಮಾಧಿ ಸೇರುವಂತೆ ಅನುಗ್ರಹಿಸುವೆನು,’ ಎಂಬುದಾಗಿ ತಿಳಿಸಿರಿ,” ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ನಾನು ಈ ದೇಶದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮೃತಿಹೊಂದಿ ಸಮಾಧಿಸೇರುವಂತೆ ಅನುಗ್ರಹಿಸುವೆನು ಎಂಬದೇ ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ನಿನ್ನನ್ನು ನಿನ್ನ ಪೂರ್ವಿಕರ ಬಳಿಗೆ ತೆಗೆದುಕೊಳ್ಳುತ್ತೇನೆ. ನಿನ್ನ ಪ್ರಾರ್ಥನೆಯನ್ನು ನಾನು ಕೇಳಿದೆ. ನೀನು ನಿನ್ನ ಸಮಾಧಿಗೆ ಸಮಾಧಾನದಿಂದ ಸೇರುವೆ. ನಾನು ಈ ಸ್ಥಳದ ಮೇಲೂ ಈ ಸ್ಥಳದಲ್ಲಿ ವಾಸಿಸುವವರ ಮೇಲೂ ತರುವ ಸಂಕಟಗಳಲ್ಲಿ ನೀನು ಒಂದಾನ್ನಾದರೂ ಅನುಭವಿಸುವದಿಲ್ಲ.’” ಹಿಲ್ಕೀಯನೂ ಅರಸನ ಸೇವಕರೂ ಈ ಸಂದೇಶವನ್ನು ಅರಸನಾದ ಯೋಷೀಯನಿಗೆ ತಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆದ್ದರಿಂದ ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು. ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವೆ. ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವುದಿಲ್ಲ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದಳು. ಅವರು ಹೋಗಿ ಈ ಉತ್ತರವನ್ನು ಅರಸನಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿ |