Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 34:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಇನ್ನೂ ಯೌವನಸ್ಥನಾಗಿರುವಾಗಲೇ ತನ್ನ ಪೂರ್ವಿಕನಾದ ದಾವೀದನ ದೇವರನ್ನು ಹುಡುಕುವವನಾದನು. ಹನ್ನೆರಡನೆಯ ವರ್ಷ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿ ಇದ್ದ ಪೂಜಾಸ್ಥಳಗಳನ್ನೂ, ಅಶೇರ ಸ್ತಂಭಗಳನ್ನೂ, ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನೂ ತೆಗೆದುಹಾಕಿ ದೇಶವನ್ನು ಶುದ್ಧಿಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯೋಷೀಯನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ, ಇನ್ನೂ ಯೌವನಸ್ಥನಾಗಿರುವಾಗಲೇ, ತನ್ನ ಪೂರ್ವಜನಾದ ದಾವೀದನ ದೇವರನ್ನು ಅವಲಂಬಿಸುವವನಾದನು; ಹನ್ನೆರಡನೆಯ ವರ್ಷ ಜುದೇಯದಲ್ಲೂ, ಜೆರುಸಲೇಮಿನಲ್ಲೂ ಇದ್ದ ಪೂಜಾಸ್ಥಳಗಳನ್ನು, ಆಶೇರಸ್ತಂಭಗಳನ್ನು ಹಾಗು ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನು ತೆಗೆದುಹಾಕಿ ನಾಡನ್ನು ಶುದ್ಧಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನು ತನ್ನ ಆಳಿಕೆಯ ಎಂಟನೆಯ ವರುಷದಲ್ಲಿ ಇನ್ನೂ ಯೌವನಸ್ಥನಾಗಿರುವಾಗಲೇ ತನ್ನ ಪೂರ್ವಿಕನಾದ ದಾವೀದನ ದೇವರನ್ನು ಹುಡುಕುವವನಾದನು. ಹನ್ನೆರಡನೆಯ ವರುಷ ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ ಇದ್ದ ಪೂಜಾಸ್ಥಳಗಳನ್ನೂ ಅಶೇರ ಸ್ತಂಭಗಳನ್ನೂ ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನೂ ತೆಗೆದುಹಾಕಿ ದೇಶವನ್ನು ಶುದ್ಧಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ತನ್ನ ಪಿತೃವಾದ ದಾವೀದನು ಅನುಸರಿಸಿದ್ದ ದೇವರನ್ನು ಅನುಸರಿಸಿದನು. ಆಗ ಅವನು ಇನ್ನೂ ಎಳೆಯ ಪ್ರಾಯದವನಾಗಿದ್ದನು. ಅವನು ಪಟ್ಟಕ್ಕೆ ಬಂದ ಹನ್ನೆರಡನೆಯ ವರ್ಷದಲ್ಲಿ, ಜೆರುಸಲೇಮಿನಲ್ಲಿ ಮತ್ತು ಯೆಹೂದದಲ್ಲಿದ್ದ ಎತ್ತರವಾದ ಸ್ಥಳಗಳನ್ನೂ ಅಶೇರಸ್ತಂಭಗಳನ್ನೂ ಎರಕದ ಮತ್ತು ಕೆತ್ತನೆಯ ವಿಗ್ರಹಗಳನ್ನೂ ನಾಶಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವನು ಇನ್ನೂ ಬಾಲಕನಾಗಿರುವಾಗ, ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ತನ್ನ ಪೂರ್ವಜನಾದ ದಾವೀದನ ದೇವರನ್ನು ಹುಡುಕಲು ಆರಂಭಿಸಿದನು. ಅವನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಉನ್ನತ ಪೂಜಾಸ್ಥಳಗಳನ್ನೂ, ಅಶೇರ ಸ್ತಂಭಗಳನ್ನೂ, ಕೆತ್ತಿದ ವಿಗ್ರಹಗಳನ್ನೂ ತೆಗೆದುಹಾಕಿ, ಯೆಹೂದ ಮತ್ತು ಯೆರೂಸಲೇಮನ್ನು ಶುಚಿಮಾಡಲು ಆರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 34:3
26 ತಿಳಿವುಗಳ ಹೋಲಿಕೆ  

ಆಮೋನನು ತನ್ನ ತಂದೆಯಾದ ಮನಸ್ಸೆಯ ಹಾಗೆಯೇ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. ತನ್ನ ತಂದೆಯಾದ ಮನಸ್ಸೆಯು ಮಾಡಿಸಿದ್ದ ಎಲ್ಲಾ ವಿಗ್ರಹಗಳಿಗೆ ಯಜ್ಞವನ್ನರ್ಪಿಸಿ ಅವುಗಳನ್ನು ಪೂಜಿಸಿದನು.


ಅವನು ಆಸನನ್ನು ಎದುರುಗೊಳ್ಳುವುದಕ್ಕೆ ಹೋಗಿ ಅವನಿಗೆ, “ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರೇ, ಕಿವಿಗೊಡಿರಿ, ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟುಬಿಡುವನು.


ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ, ಆತುರದಿಂದ ಹುಡುಕುವವರು ನನ್ನನ್ನು ಕಂಡುಕೊಳ್ಳುವರು.


ಅವರು ಈ ಪ್ರಕಾರ ದೇವರಾದ ಯೆಹೋವನೊಬ್ಬನಿಗೇ ಯಜ್ಞವನ್ನು ಅರ್ಪಿಸುವವರಾದರೂ ಆ ಯಜ್ಞಗಳನ್ನೂ ಇನ್ನೂ ಪೂಜಾಸ್ಥಳಗಳಲ್ಲಿಯೇ ಸಮರ್ಪಿಸುತ್ತಿದ್ದರು.


ಚಿಕ್ಕಂದಿನಿಂದಲೂ ನಿನಗೆ ಪರಿಶುದ್ಧ ಗ್ರಂಥಗಳ ಪರಿಚಯವಾಗಿದೆಯಲ್ಲಾ. ಆ ಗ್ರಂಥಗಳು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದುವ ಜ್ಞಾನವನ್ನು ನಿನಗೆ ಕೊಡುವುದಕ್ಕೆ ಶಕ್ತವಾಗಿವೆ.


ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ಕಷ್ಟದ ದಿನಗಳು ಬರುವುದಕ್ಕೆ ಮೊದಲು, “ಇವುಗಳಲ್ಲಿ ನನಗೆ ಸಂತೋಷವಿಲ್ಲ” ಎಂದು, ನೀನು ಹೇಳುವ ವರ್ಷಗಳು ಸಮೀಪಿಸುವುದರೊಳಗಾಗಿ, ಯೌವನದಲ್ಲಿಯೇ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು.


ಯೌವನಸ್ಥನು ತನ್ನ ನಡತೆಯನ್ನು ಶುದ್ಧಪಡಿಸಿಕೊಳ್ಳುವುದು ಯಾವುದರಿಂದ? ನಿನ್ನ ವಾಕ್ಯವನ್ನು ಗಮನಿಸಿ ನಡೆಯುವುದರಿಂದಲೇ.


ಅವರು ಯೆರೂಸಲೇಮಿನಲ್ಲಿದ್ದ ಯಜ್ಞವೇದಿಗಳನ್ನೂ ಎಲ್ಲಾ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್ ಹಳ್ಳದಲ್ಲಿ ಬಿಸಾಡಿಬಿಟ್ಟರು.


ತರುವಾಯ ಅರಸನಾದ ದಾವೀದನು, “ದೇವರು ನನ್ನ ಮಗನಾದ ಸೊಲೊಮೋನನನ್ನೇ ದೇವಾಲಯ ಕಟ್ಟಲು ಆರಿಸಿಕೊಂಡಿದ್ದಾನೆ. ಆದರೆ ಅವನು ಇನ್ನೂ ಎಳೇ ಪ್ರಾಯದವನು. ಮಾಡತಕ್ಕ ಕೆಲಸವೋ ವಿಶೇಷವಾದದ್ದು. ಕಟ್ಟತಕ್ಕ ಮಂದಿರವು ದೇವರಾದ ಯೆಹೋವನಿಗಾಗಿಯೇ ಹೊರತು ಮನುಷ್ಯನಿಗಾಗಿಯಲ್ಲ.


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ದಾವೀದನು ತನ್ನ ಮನಸ್ಸಿನಲ್ಲಿ ತನ್ನ ಮಗನಾದ ಸೊಲೊಮೋನನು ಎಳೆ ಪ್ರಾಯದವನಾಗಿದ್ದಾನೆ. ಯೆಹೋವನಿಗೋಸ್ಕರ ಕಟ್ಟಿಸತಕ್ಕ ಆಲಯದ ಕೀರ್ತಿಯು ಎಲ್ಲಾ ದೇಶಗಳಲ್ಲಿ ಘನತೆಯನ್ನು ಹೊಂದಬೇಕಾದರೆ ಅದು ಅಧಿಕ ಶೋಭಾಯಮಾನವಾಗಿರಬೇಕು. ಆದುದರಿಂದ ಅದಕ್ಕೆ ಬೇಕಾಗುವುದನ್ನೆಲ್ಲಾ ಸಿದ್ಧಪಡಿಸುವೆನು ಅಂದುಕೊಂಡು ಸಾಯುವುದಕ್ಕೆ ಮೊದಲೇ ಎಲ್ಲಾ ಸಿದ್ಧತೆಗಳನ್ನು ಮಾಡಿದನು.


ಕಲ್ಲು ಕಂಬಗಳನ್ನು ಒಡೆದುಹಾಕಿ ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಬಿಟ್ಟು ಅವುಗಳಲ್ಲಿದ್ದ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.


ತರುವಾಯ ಅರಸನು ಮಹಾಯಾಜಕನಾದ ಹಿಲ್ಕೀಯನಿಗೆ, ಅವನ ಕೈಕೆಳಗಿರುವ ಯಾಜಕರ ಮತ್ತು ದ್ವಾರಪಾಲಕರ ಮುಖಾಂತರವಾಗಿ ಬಾಳ್, ಅಶೇರ್ ಎಂಬ ದೇವತೆಗಳಿಗಾಗಿಯೂ, ಆಕಾಶಸೈನ್ಯಗಳಿಗಾಗಿಯೂ, ಉಪಯೋಗಿಸುತ್ತಿದ್ದ ಎಲ್ಲಾ ಸಾಮಾನುಗಳನ್ನು ಯೆಹೋವನ ಆಲಯದಿಂದ ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಬಯಲಿನಲ್ಲಿ ಅವುಗಳನ್ನು ಸುಟ್ಟು ಬೂದಿಯನ್ನು ಬೇತೇಲಿಗೆ ಕಳುಹಿಸಿದನು.


ಪೂಜಾಸ್ಥಳಗಳನ್ನು ಹಾಳುಮಾಡಿ, ಕಲ್ಲುಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕತ್ತರಿಸಿ ಹಾಕಿದನು. ಮೋಶೆಯು ಮಾಡಿಸಿದ ತಾಮ್ರದ ಸರ್ಪವನ್ನು ಚೂರು‍ಚೂರು ಮಾಡಿದನು. ಇಸ್ರಾಯೇಲರು ಅದಕ್ಕೆ ಆ ವರೆಗೂ ಧೂಪವನ್ನರ್ಪಿಸುತ್ತಿದ್ದರು. ಅದಕ್ಕೆ “ನೆಹುಷ್ಟಾನ್” ಎಂಬ ಹೆಸರಿತ್ತು.


ಆಗ ಆ ಮನುಷ್ಯನು ಯೆಹೋವನ ಅಪ್ಪಣೆಯಿಂದ ಯಜ್ಞವೇದಿಯನ್ನು ಕುರಿತು, “ವೇದಿಯೇ, ವೇದಿಯೇ, ದಾವೀದನ ಸಂತಾನದಲ್ಲಿ ಯೋಷೀಯನು ಎಂಬ ಒಬ್ಬ ಮನುಷ್ಯನು ಹುಟ್ಟುವನು. ಅವನು ನಿನ್ನ ಮೇಲೆ ಧೂಪಹಾಕುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು, ಅವರನ್ನು ನಿನ್ನ ಮೇಲೆಯೇ ಯಜ್ಞಮಾಡುವನು. ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವು ಎಂದು ಯೆಹೋವನು ಹೇಳುತ್ತಾನೆ” ಅಂದನು.


ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು; ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದುಹಾಕುವೆನು; ನಿಮ್ಮ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಬೀಸಾಡುವೆನು; ನಾನು ನಿಮ್ಮ ವಿಷಯದಲ್ಲಿ ಅಸಹ್ಯಪಡುವೆನು.


ಆದರೆ ನೀವು ಅವರ ಯಜ್ಞವೇದಿಗಳನ್ನು ಕೆಡವಿ ಅವರ ಕಲ್ಲುಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು.


ಯೋಷೀಯನು ಇಸ್ರಾಯೇಲರಿಗೆ ಸೇರಿದ ಎಲ್ಲಾ ಪ್ರಾಂತ್ಯಗಳೊಳಗಿನ ಅಸಹ್ಯ ಮೂರ್ತಿಗಳನ್ನೆಲ್ಲಾ ತೆಗೆದುಹಾಕಿಸಿ, ಇಸ್ರಾಯೇಲರಲ್ಲಿ ಉಳಿದಿರುವವರು ತಮ್ಮ ದೇವರಾದ ಯೆಹೋವನನ್ನೇ ಆರಾಧಿಸುವಂತೆ ಮಾಡಿದನು. ಅವನ ಜೀವಮಾನದಲ್ಲೆಲ್ಲಾ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಬಿಡದೆ ಹಿಂಬಾಲಿಸಿದರು.


ಇದಕ್ಕೆಲ್ಲಾ ಕಾರಣ ಯಾಕೋಬಿನ ದ್ರೋಹ ಮತ್ತು ಇಸ್ರಾಯೇಲ್ ವಂಶದ ಪಾಪಗಳೇ. ಯಾಕೋಬಿನ ದ್ರೋಹವೇನು? ಸಮಾರ್ಯವಲ್ಲವೇ! ಯೆಹೂದದ ಕೆಟ್ಟ ಪೂಜಾಸ್ಥಾನಗಳು ಯಾವುವು? ಯೆರೂಸಲೇಮಲ್ಲವೇ!


ಇದಲ್ಲದೆ, ಬಾಳ್ ದೇವತೆಯ ವಿಗ್ರಹ ಸ್ತಂಭಗಳನ್ನೂ, ದೇವಸ್ಥಾನಗಳನ್ನೂ ಕೆಡವಿ ಹಾಳುಮಾಡಿದರು. ಅಂದಿನಿಂದ ಇಂದಿನವರೆಗೂ ಆ ಸ್ಥಳವನ್ನು ಶೌಚಾಲಯಕ್ಕಾಗಿ ಉಪಯೋಗಿಸುತ್ತಿದ್ದಾರೆ.


“ನೀನು ಹಿಂದಿರುಗಿ ಹೋಗಿ, ನನ್ನ ಜನಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ನಿನ್ನ ಪಿತೃವಾದ ದಾವೀದನ ದೇವರಾದ ಯೆಹೋವನು ಹೇಳಿದ್ದೇನೆಂದರೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.


ಯೆಹೋವನ ಅನುಗ್ರಹದಿಂದ ಶತ್ರುಭಯ ತಪ್ಪಿ ಯಾವ ಯುದ್ಧವೂ ಇಲ್ಲದೆ ದೇಶದಲ್ಲಿ ಸಮಾಧಾನವಿದ್ದುದರಿಂದ ಇವನು ಯೆಹೂದದಲ್ಲಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು.


ಅನ್ಯದೇವತಾಪ್ರತಿಮೆಗಳನ್ನೂ, ತಾನು ಮಾಡಿಸಿದ್ದ ಸ್ತಂಭವನ್ನೂ ಯೆಹೋವನ ಆಲಯದಿಂದ ತೆಗೆಸಿ ಯೆಹೋವನ ಮಂದಿರವಿರುವ ಗುಡ್ಡದಲ್ಲಿಯೂ, ಯೆರೂಸಲೇಮಿನಲ್ಲಿಯೂ ಕಟ್ಟಿಸಿದ್ದ ಎಲ್ಲಾ ಯಜ್ಞವೇದಿಗಳನ್ನು ಕೆಡವಿ ಪಟ್ಟಣದ ಹೊರಗೆ ಹಾಕಿಸಿದನು.


ಕರ್ತನಾದ ಯೆಹೋವನೇ, ಬಾಲ್ಯದಿಂದ ನನ್ನ ನಿರೀಕ್ಷೆಯೂ, ಭರವಸವೂ ನೀನಲ್ಲವೋ?


ಒಬ್ಬ ಹುಡುಗನಾದರೂ ಶುದ್ಧವೂ, ಸತ್ಯವೂ ಆದ ನಡತೆಯಿಂದಲೇ, ತನ್ನ ಗುಣವನ್ನು ತೋರ್ಪಡಿಸಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು