2 ಪೂರ್ವಕಾಲ ವೃತ್ತಾಂತ 34:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಅರಸನು ತನ್ನ ಸ್ಥಳದಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞಾನಿಯಮ ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ತನ್ನ ಸ್ಥಳದಲ್ಲೇ ನಿಂತು, ತಾನು ಸರ್ವೇಶ್ವರನ ಮಾರ್ಗದಲ್ಲಿ ನಡೆಯುವುದಾಗಿ ಆತನ ಆಜ್ಞಾನಿಯಮ ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಕೈಕೊಳ್ಳುವುದಾಗಿ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲ ವಾಕ್ಯಗಳನ್ನು ನೆರವೇರಿಸುವುದಾಗಿ ಸರ್ವೇಶ್ವರನಿಗೆ ಪ್ರಮಾಣಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ತನ್ನ ಸ್ಥಳದಲ್ಲಿ ನಿಂತು ತಾನು ಯೆಹೋವನ ಮಾರ್ಗದಲ್ಲಿ ನಡೆಯುವದಾಗಿಯೂ ಆತನ ಆಜ್ಞಾನಿಯಮವಿಧಿಗಳನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಕೈಕೊಳ್ಳುವದಾಗಿಯೂ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವದಾಗಿಯೂ ಯೆಹೋವನಿಗೆ ಪ್ರಮಾಣ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಆಮೇಲೆ ಅರಸನು ತನ್ನ ಸ್ಥಳದಲ್ಲಿ ಎದ್ದುನಿಂತು, ಯೆಹೋವನ ಎಲ್ಲಾ ಕಟ್ಟಳೆಗಳಿಗೆ ವಿಧೇಯನಾಗಿ ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಮನಸ್ಸಿನಿಂದಲೂ ಅನುಸರಿಸುವುದಾಗಿ ಪ್ರಮಾಣಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಅರಸನು ತನ್ನ ಸ್ತಂಭದಲ್ಲಿ ನಿಂತುಕೊಂಡು ಯೆಹೋವ ದೇವರನ್ನು ಹಿಂಬಾಲಿಸುವುದಕ್ಕೂ, ದೇವರ ಆಜ್ಞೆಗಳನ್ನೂ, ದೇವರ ಸಾಕ್ಷಿಗಳನ್ನೂ, ಕಟ್ಟಳೆಗಳನ್ನೂ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಕೈಗೊಳ್ಳುವುದಕ್ಕೂ, ಈ ಗ್ರಂಥದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳನ್ನು ನೆರವೇರಿಸುವುದಕ್ಕೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿದನು. ಅಧ್ಯಾಯವನ್ನು ನೋಡಿ |
ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ಅವನು ದ್ರೋಹದ ಮಾತುಗಳನ್ನಾಡಿ, ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.