2 ಪೂರ್ವಕಾಲ ವೃತ್ತಾಂತ 34:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಮನಸ್ಸೆ, ಎಫ್ರಾಯೀಮ್, ಸಿಮೆಯೋನ್, ನಫ್ತಾಲಿ ಪ್ರಾಂತ್ಯಗಳ ಸುತ್ತಣ ಊರುಗಳಲಿಯೂ ಬಯಲುಗಳಲ್ಲಿದ್ದ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಮನಸ್ಸೆ, ಎಫ್ರಯಿಮ್, ಸಿಮೆಯೋನ್, ನಫ್ತಾಲಿ ಪ್ರಾಂತ್ಯಗಳ ಊರುಗಳ ಸುತ್ತಲು ಹಾಳುಬೀಳುಗಳಲ್ಲಿದ್ದ ಬಲಿಪೀಠಗಳನ್ನು ಕೆಡವಿಸಿದನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಮನಸ್ಸೆ ಎಫ್ರಾಯೀಮ್ ಸಿಮೆಯೋನ್ ನಫ್ತಾಲಿ ಪ್ರಾಂತಗಳ ಊರುಗಳ ಸುತ್ತಣ ಹಾಳುಬೀಳುಗಳಲ್ಲಿದ್ದ ಯಜ್ಞವೇದಿಗಳನ್ನು ಕೆಡವಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅದೇ ಪ್ರಕಾರ ಎಫ್ರಾಯೀಮ್, ಮನಸ್ಸೆ, ಸಿಮೆಯೋನ್ ಮತ್ತು ನಫ್ತಾಲಿ ಪ್ರಾಂತ್ಯಗಳ ಉದ್ದಕ್ಕೂ ಮಾಡಿದನು. ಆ ಪಟ್ಟಣಗಳ ಸಮೀಪದಲ್ಲಿದ್ದ ಹಾಳುಬಿದ್ದವುಗಳಿಗೂ ಅವನು ಹಾಗೆಯೇ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಹೀಗೆಯೇ ಅವರು ತಮ್ಮ ಗುದ್ದಲಿಗಳಿಂದ ಮನಸ್ಸೆ, ಎಫ್ರಾಯೀಮ್, ಸಿಮೆಯೋನ್, ನಫ್ತಾಲಿ ಪ್ರಾಂತ್ಯಗಳ ಪಟ್ಟಣಗಳ ಸುತ್ತಲೂ ಶುಚಿಮಾಡಿದರು. ಅಧ್ಯಾಯವನ್ನು ನೋಡಿ |
ಇದಾದನಂತರ ನೆರೆದುಬಂದ ಇಸ್ರಾಯೇಲರೆಲ್ಲರೂ ಯೆಹೂದ ದೇಶದ ಪಟ್ಟಣಗಳಿಗೆ ಹೋಗಿ ಕಲ್ಲು ಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಹಾಕಿ, ಪೂಜಾಸ್ಥಳಗಳನ್ನೂ, ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಯೆಹೂದ ಬೆನ್ಯಾಮೀನ್ ಪ್ರಾಂತ್ಯಗಳಲ್ಲದೆ ಎಫ್ರಾಯೀಮ್, ಮನಸ್ಸೆ ಪ್ರಾಂತ್ಯಗಳಲ್ಲಿಯೂ ಯಾವುದೊಂದನ್ನೂ ಉಳಿಸಲಿಲ್ಲ. ಆ ಮೇಲೆ ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಸ್ವಾಸ್ತ್ಯವಿರುವ ಪಟ್ಟಣಗಳಿಗೆ ಹೋದರು.