ಇದಾದನಂತರ ನೆರೆದುಬಂದ ಇಸ್ರಾಯೇಲರೆಲ್ಲರೂ ಯೆಹೂದ ದೇಶದ ಪಟ್ಟಣಗಳಿಗೆ ಹೋಗಿ ಕಲ್ಲು ಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಹಾಕಿ, ಪೂಜಾಸ್ಥಳಗಳನ್ನೂ, ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಯೆಹೂದ ಬೆನ್ಯಾಮೀನ್ ಪ್ರಾಂತ್ಯಗಳಲ್ಲದೆ ಎಫ್ರಾಯೀಮ್, ಮನಸ್ಸೆ ಪ್ರಾಂತ್ಯಗಳಲ್ಲಿಯೂ ಯಾವುದೊಂದನ್ನೂ ಉಳಿಸಲಿಲ್ಲ. ಆ ಮೇಲೆ ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಸ್ವಾಸ್ತ್ಯವಿರುವ ಪಟ್ಟಣಗಳಿಗೆ ಹೋದರು.
ಮತ್ತು ನೀವು ಯಾವುದರ ಮೂಲಕ ಪಾಪವನ್ನು ಮಾಡಿದ್ದಿರೋ ಆ ಬಸವನನ್ನು ನಾನು ತೆಗೆದುಕೊಂಡು ಬೆಂಕಿಯಿಂದ ಸುಟ್ಟು, ಒಡೆದು, ಅರೆದು ಧೂಳುಮಾಡಿ, ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ಬೀಸಾಡಿಬಿಟ್ಟೆ.
ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು; ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದುಹಾಕುವೆನು; ನಿಮ್ಮ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಬೀಸಾಡುವೆನು; ನಾನು ನಿಮ್ಮ ವಿಷಯದಲ್ಲಿ ಅಸಹ್ಯಪಡುವೆನು.
ಅದರ ಎರಕದ ಬೊಂಬೆಗಳನ್ನೆಲ್ಲಾ ಪುಡಿಪುಡಿ ಮಾಡುವೆನು. ಅದರ ಸಮಸ್ತ ಸಂಪಾದನೆಯು ಸುಟ್ಟುಹೋಗುವುದು. ಅದರ ಸಕಲ ವಿಗ್ರಹಗಳನ್ನು ಹಾಳುಮಾಡುವೆನು. ಅದು ವೇಶ್ಯಾವಾಟಿಕೆಯಿಂದ ಸಂಪಾದನೆಯಾಗಿ ಕೂಡಿಸಿಟ್ಟುಕೊಂಡವುಗಳು ಹಾಗೂ ವೇಶ್ಯಾವಾಟಿಕೆಯ ಸಂಪಾದನೆಯಾಗಿಯೇ ಪರರ ಪಾಲಾಗುವವು.