Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 34:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇವರು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ ದೇವಾಲಯಕ್ಕಾಗಿ ಸಂಗ್ರಹವಾದ ಹಣವನ್ನು ಅಂದರೆ ದ್ವಾರಪಾಲಕರಾದ ಲೇವಿಯರು ಮನಸ್ಸೆ, ಎಫ್ರಾಯೀಮ್ ಮುಂತಾದ ಇಸ್ರಾಯೇಲ್ ಕುಲಗಳಲ್ಲಿ ಉಳಿದವರಿಂದಲೂ, ಎಲ್ಲಾ ಯೆಹೂದ ಬೆನ್ಯಾಮೀನ್ಯರಿಂದಲೂ, ಯೆರೂಸಲೇಮಿನವರಿಂದಲೂ ಕೂಡಿಸಿದ್ದ ಹಣವನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇವರು ಮಹಾಯಾಜಕ ಹಿಲ್ಕೀಯನ ಬಳಿಗೆ ಹೋಗಿ, ದೇವಾಲಯಕ್ಕಾಗಿ ಸಂಗ್ರಹವಾದ ಹಣವನ್ನು, ಅಂದರೆ, ದ್ವಾರಪಾಲಕರಾದ ಲೇವಿಯರು ಮನಸ್ಸೆ, ಎಫ್ರಯಿಮ್ ಮುಂತಾದ ಇಸ್ರಯೇಲ್‍ಕುಲಗಳಲ್ಲಿ ಉಳಿದವರಿಂದ ಎಲ್ಲ ಯೆಹೂದ ಬೆನ್ಯಾಮೀನ್ಯರಿಂದ ಹಾಗು ಜೆರುಸಲೇಮಿನವರಿಂದ ಸಂಗ್ರಹಿಸಿದ್ದ ಹಣವನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇವರು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ ದೇವಾಲಯಕ್ಕೋಸ್ಕರ ಸಂಗ್ರಹವಾದ ಹಣವನ್ನು ಅಂದರೆ ದ್ವಾರಪಾಲಕರಾದ ಲೇವಿಯರು ಮನಸ್ಸೆ ಎಫ್ರಾಯೀಮ್ ಮುಂತಾದ ಇಸ್ರಾಯೇಲ್ ಕುಲಗಳಲ್ಲಿ ಉಳಿದವರಿಂದಲೂ ಎಲ್ಲಾ ಯೆಹೂದ ಬೆನ್ಯಾಮೀನ್ಯರಿಂದಲೂ ಯೆರೂಸಲೇವಿುನವರಿಂಲೂ ಕೂಡಿಸಿದ್ದ ಹಣವನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಜನರು ದೇವಾಲಯದ ದುರಸ್ತಿಗಾಗಿ ಅರ್ಪಿಸಿದ್ದ ಕಾಣಿಕೆಯನ್ನು ಅವರು ಮಹಾಯಾಜಕನಾದ ಹಿಲ್ಕೀಯನಿಗೆ ತಂದುಕೊಟ್ಟರು. ಮನಸ್ಸೆ, ಎಫ್ರಾಯೀಮ್ ಮತ್ತು ಇಸ್ರೇಲ್ ರಾಜ್ಯದ ಜನರು ಕೊಟ್ಟ ಕಾಣಿಕೆಯನ್ನು ದ್ವಾರಪಾಲಕರಾದ ಲೇವಿಯರು ಒಟ್ಟುಗೂಡಿಸಿದರು. ಯೆಹೂದ, ಬೆನ್ಯಾಮೀನ್ ಕುಲದವರೂ ಜೆರುಸಲೇಮಿನಲ್ಲಿ ವಾಸಿಸುವರೂ ಕೊಟ್ಟ ಕಾಣಿಕೆಗಳನ್ನು ಅವರು ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇವರು ದ್ವಾರಪಾಲಕರಾದ ಲೇವಿಯರು ಮನಸ್ಸೆ, ಎಫ್ರಾಯೀಮ್ ಜನರಿಂದಲೂ, ಇಸ್ರಾಯೇಲಿನ ಉಳಿದವರಿಂದಲೂ, ಯೆಹೂದ ಬೆನ್ಯಾಮೀನರಿಂದಲೂ ಯೆರೂಸಲೇಮಿನ ಎಲ್ಲಾ ನಿವಾಸಿಗಳಿಂದಲೂ ಕೂಡಿಸಿದ ಹಣವನ್ನು ತೆಗೆದುಕೊಂಡು ದೇವರ ಆಲಯಕ್ಕೆ ತಂದು ಮಹಾಯಾಜಕನಾದ ಹಿಲ್ಕೀಯನಿಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 34:9
13 ತಿಳಿವುಗಳ ಹೋಲಿಕೆ  

ಅವನ ಸರದಾರರು ಜನರಿಗೂ, ಯಾಜಕರಿಗೂ, ಲೇವಿಯರಿಗೂ ಯಜ್ಞಪಶುಗಳನ್ನು ಸಂತೋಷವಾಗಿ ಕೊಟ್ಟರು. ದೇವಾಲಯದ ಪ್ರಧಾನರಾದ ಹಿಲ್ಕೀಯ, ಜೆಕರ್ಯ, ಯೆಹೀಯೇಲ್ ಎಂಬುವವರು ಯಾಜಕರಿಗೆ ಎರಡು ಸಾವಿರದ ಆರು ನೂರು ಪಸ್ಕದ ಕುರಿಮರಿಗಳನ್ನೂ, ಮುನ್ನೂರು ಹೋರಿಗಳನ್ನೂ ಕೊಟ್ಟರು.


ಜನರಲ್ಲಿ ಅನೇಕರು ಅಂದರೆ, ಹೆಚ್ಚಾಗಿ ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್, ಹಾಗು ಜೆಬುಲೂನ್ ಪ್ರಾಂತ್ಯಗಳವರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಧರ್ಮಶಾಸ್ತ್ರಕ್ಕೆ ವಿರುದ್ಧವಾದ ರೀತಿಯಿಂದ ಪಸ್ಕದ (ಹಬ್ಬ) ಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು, “ಯೆಹೋವನೇ, ದಯಾಪರನಾದ ದೇವರೇ, ಅವರೆಲ್ಲರಿಗೆ ಕ್ಷಮೆಯನ್ನು ಅನುಗ್ರಹಿಸು” ಎಂದು ವಿಜ್ಞಾಪನೆ ಮಾಡಿದನು.


ದೂತರು ಎಫ್ರಾಯೀಮ್, ಮನಸ್ಸೆ, ಜೆಬುಲೂನ್ ಪ್ರಾಂತ್ಯಗಳಲ್ಲಿ, ಪಟ್ಟಣದಿಂದ ಪಟ್ಟಣಕ್ಕೆ ಹೋದರು. ಜನರು ಅವರನ್ನು ಕಂಡು ನಕ್ಕು ಗೇಲಿಮಾಡಿದರು.


ಕಡೆಯದಾಗಿ, ಸಹೋದರರೇ, ಯಾವುದು ಸತ್ಯವೂ, ಮಾನ್ಯವೂ, ನ್ಯಾಯವೂ, ಶುದ್ಧವೂ, ಪ್ರೀತಿಕರವೂ, ಮನೋಹರವೂ ಆಗಿದೆಯೋ, ಯಾವುದು ಸದ್ಗುಣವಾಗಿದೆಯೋ, ಯಾವುದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳ ಬಗ್ಗೆ ಚಿಂತಿಸುವವರಾಗಿರಿ.


ಆಗ ಹಿಲ್ಕೀಯನೂ ಅರಸನ ಜನರೂ ಹುಲ್ದ ಎಂಬ ಪ್ರವಾದಿನಿಯ ಬಳಿಗೆ ಹೋಗಿ, ಆಕೆಯ ಹತ್ತಿರ ವಿಚಾರಿಸಿದರು. ಹಸ್ರನ ಮೊಮ್ಮಗನೂ ತೊಕ್ಹತನ ಮಗನೂ ರಾಜವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಆಕೆಯ ಗಂಡನು. ಆಕೆಯು ಯೆರೂಸಲೇಮಿನ ಎರಡನೆಯ ಕೇರಿಯಲ್ಲಿ ವಾಸವಾಗಿದ್ದಳು.


ಅರಸನು ಹಿಲ್ಕೀಯ, ಶಾಫಾನನ ಮಗನಾದ ಅಹೀಕಾಮ್, ಮೀಕನ ಮಗನಾದ ಅಬ್ದೋನ್, ಲೇಖಕನಾದ ಶಾಫಾನ್, ಅರಸನ ಸಹಕಾರಿಯಾದ ಅಸಾಯ ಎಂಬುವವರಿಗೆ ಅಜ್ಞಾಪಿಸಿದೇನೆಂದರೆ,


ಇದಲ್ಲದೆ, ಲೇಖಕನಾದ ಶಾಫಾನನು ಅರಸನಿಗೆ, “ಯಾಜಕನಾದ ಹಿಲ್ಕೀಯನು ನನಗೊಂದು ಗ್ರಂಥವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಅವನ ಮುಂದೆ ಅದನ್ನು ಓದಿದನು.


ಇದಾದನಂತರ ನೆರೆದುಬಂದ ಇಸ್ರಾಯೇಲರೆಲ್ಲರೂ ಯೆಹೂದ ದೇಶದ ಪಟ್ಟಣಗಳಿಗೆ ಹೋಗಿ ಕಲ್ಲು ಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಹಾಕಿ, ಪೂಜಾಸ್ಥಳಗಳನ್ನೂ, ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಯೆಹೂದ ಬೆನ್ಯಾಮೀನ್ ಪ್ರಾಂತ್ಯಗಳಲ್ಲದೆ ಎಫ್ರಾಯೀಮ್, ಮನಸ್ಸೆ ಪ್ರಾಂತ್ಯಗಳಲ್ಲಿಯೂ ಯಾವುದೊಂದನ್ನೂ ಉಳಿಸಲಿಲ್ಲ. ಆ ಮೇಲೆ ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಸ್ವಾಸ್ತ್ಯವಿರುವ ಪಟ್ಟಣಗಳಿಗೆ ಹೋದರು.


ತರುವಾಯ ಅರಸನು ಮಹಾಯಾಜಕನಾದ ಹಿಲ್ಕೀಯನಿಗೆ, ಅವನ ಕೈಕೆಳಗಿರುವ ಯಾಜಕರ ಮತ್ತು ದ್ವಾರಪಾಲಕರ ಮುಖಾಂತರವಾಗಿ ಬಾಳ್, ಅಶೇರ್ ಎಂಬ ದೇವತೆಗಳಿಗಾಗಿಯೂ, ಆಕಾಶಸೈನ್ಯಗಳಿಗಾಗಿಯೂ, ಉಪಯೋಗಿಸುತ್ತಿದ್ದ ಎಲ್ಲಾ ಸಾಮಾನುಗಳನ್ನು ಯೆಹೋವನ ಆಲಯದಿಂದ ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಬಯಲಿನಲ್ಲಿ ಅವುಗಳನ್ನು ಸುಟ್ಟು ಬೂದಿಯನ್ನು ಬೇತೇಲಿಗೆ ಕಳುಹಿಸಿದನು.


ಯೆಹೋವನ ದೇವಾಲಯದ ಕೆಲಸಮಾಡಿಸುವವರಿಗೆ ಕೊಡುವುದಕ್ಕಾಗಿ ಅವನಿಗೆ ಒಪ್ಪಿಸಿದರು. ದೇವಾಲಯದ ಕೆಲಸಮಾಡಿಸುತ್ತಿದ್ದವರು ಆ ಹಣವನ್ನು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು