2 ಪೂರ್ವಕಾಲ ವೃತ್ತಾಂತ 35:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ತರುವಾಯ ತಮಗೋಸ್ಕರವೂ ಯಾಜಕರಿಗೋಸ್ಕರವೂ ಸಿದ್ಧಮಾಡಿದರು. ಆರೋನನ ಮಕ್ಕಳಾದ ಯಾಜಕರು ರಾತ್ರಿಯವರೆಗೂ ಸರ್ವಾಂಗಹೋಮಗಳನ್ನೂ, ಕೊಬ್ಬನ್ನೂ ಸರ್ಮಪಿಸುತ್ತಾ ಇದ್ದುದರಿಂದ ಲೇವಿಯರು ತಮಗೋಸ್ಕರ ಹೇಗೋ ಹಾಗೆ ಆರೋನನ ಮಕ್ಕಳಾದ ಯಾಜಕರಿಗೋಸ್ಕರ ಭೋಜನ ಸಿದ್ಧಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ತರುವಾಯ ತಮಗೆ ಹಾಗು ಯಾಜಕರಿಗೆ ಭೋಜನವನ್ನು ಸಿದ್ಧಮಾಡಿದರು. ಆರೋನನ ಮಕ್ಕಳಾದ ಯಾಜಕರು ರಾತ್ರಿಯವರೆಗೂ ದಹನಬಲಿಗಳನ್ನೂ ಕೊಬ್ಬನ್ನೂ ಸಮರ್ಪಿಸುತ್ತಾ ಇದ್ದುದರಿಂದ ಲೇವಿಯರು ತಮಗೆ ಹೇಗೋ ಹಾಗೆ ಆರೋನನ ಮಕ್ಕಳಾದ ಯಾಜಕರಿಗೂ ಭೋಜನವನ್ನು ಸಿದ್ಧಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ತರುವಾಯ ತಮಗೋಸ್ಕರವೂ ಯಾಜಕರಿಗೋಸ್ಕರವೂ ಸಿದ್ಧಮಾಡಿದರು. ಆರೋನನ ಮಕ್ಕಳಾದ ಯಾಜಕರು ರಾತ್ರಿಯವರೆಗೂ ಸರ್ವಾಂಗಹೋಮಗಳನ್ನೂ ಕೊಬ್ಬನ್ನೂ ಸಮರ್ಪಿಸುತ್ತಾ ಇದ್ದದರಿಂದ ಲೇವಿಯರು ತಮಗೋಸ್ಕರ ಹೇಗೋ ಹಾಗೆ ಆರೋನನ ಮಕ್ಕಳಾದ ಯಾಜಕರಿಗೋಸ್ಕರವೂ ಸಿದ್ಧಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಬಳಿಕ ಲೇವಿಯರು ತಮಗಾಗಿಯೂ ಆರೋನನ ಸಂತತಿಯವರಾದ ಯಾಜಕರಿಗಾಗಿಯೂ ಮಾಂಸವನ್ನು ಸಿದ್ಧಮಾಡಿದರು. ಆ ಯಾಜಕರು ರಾತ್ರಿ ತನಕವೂ ಕೆಲಸದಲ್ಲಿ ನಿರತರಾಗಿದ್ದರು; ಸರ್ವಾಂಗಹೋಮಗಳನ್ನೂ ಪಶುಗಳ ಕೊಬ್ಬನ್ನೂ ಹೋಮಮಾಡುತ್ತಾ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ತರುವಾಯ ತಮಗೋಸ್ಕರ, ಯಾಜಕರಿಗೋಸ್ಕರ ಭೋಜನವನ್ನು ಸಿದ್ಧಮಾಡಿದರು. ಏಕೆಂದರೆ ಆರೋನನ ಮಕ್ಕಳಾದ ಯಾಜಕರು ರಾತ್ರಿಯ ಪರ್ಯಂತರ ದಹನಬಲಿಗಳನ್ನೂ, ಕೊಬ್ಬನ್ನೂ ಅರ್ಪಿಸುವುದರಲ್ಲಿದ್ದರು. ಆದ್ದರಿಂದ ಲೇವಿಯರು ತಮಗೋಸ್ಕರವೂ, ಆರೋನನ ಮಕ್ಕಳಾದ ಯಾಜಕರಿಗೋಸ್ಕರವೂ ಭೋಜನವನ್ನು ಸಿದ್ಧಮಾಡಿದರು. ಅಧ್ಯಾಯವನ್ನು ನೋಡಿ |