2 ಪೂರ್ವಕಾಲ ವೃತ್ತಾಂತ 35:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಇಂಥಾ ಪಸ್ಕಹಬ್ಬವು ಪ್ರವಾದಿಯಾದ ಸಮುವೇಲನ ದಿನಗಳಿಂದ ಇಸ್ರಾಯೇಲರಲ್ಲಿ ನಡೆಯಲೇ ಇಲ್ಲ. ಯೋಷೀಯನೂ, ಯಾಜಕರೂ, ಲೇವಿಯರೂ ಕೂಡಿಬಂದಿದ್ದ ಇಸ್ರಾಯೇಲರು, ಯೆಹೂದ್ಯರು, ಯೆರೂಸಲೇಮಿನವರೂ ಪಸ್ಕಹಬ್ಬವನ್ನು ಆಚರಿಸಿದಂತೆ ಇಸ್ರಾಯೇಲ್ ರಾಜರಲ್ಲಿ ಒಬ್ಬನೂ ಆಚರಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಇಂಥಾ ಪಾಸ್ಕಹಬ್ಬ ಪ್ರವಾದಿ ಸಮುವೇಲನ ದಿವಸಗಳಿಂದ ಇಸ್ರಯೇಲರಲ್ಲಿ ನಡೆದಿರಲಿಲ್ಲ. ಯೋಷೀಯನು, ಯಾಜಕರು, ಲೇವಿಯರು, ಕೂಡಿಬಂದಿದ್ದ ಇಸ್ರಯೇಲರು, ಯೆಹೂದ್ಯರು, ಹಾಗು ಜೆರುಸಲೇಮಿನವರು ಈ ಪಾಸ್ಕಹಬ್ಬವನ್ನು ಆಚರಿಸಿದಂತೆ ಇಸ್ರಯೇಲ್ ಅರಸರಲ್ಲಿ ಒಬ್ಬನೂ ಆಚರಿಸಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಇಂಥಾ ಪಸ್ಕಹಬ್ಬವು ಪ್ರವಾದಿಯಾದ ಸಮುವೇಲನ ದಿವಸಗಳಿಂದ ಇಸ್ರಾಯೇಲ್ಯರಲ್ಲಿ ನಡೆಯಲೇ ಇಲ್ಲ. ಯೋಷೀಯನೂ ಯಾಜಕರೂ ಲೇವಿಯರೂ ಕೂಡಿಬಂದಿದ್ದ ಇಸ್ರಾಯೇಲ್ಯ ಯೆಹೂದ್ಯರೂ ಯೆರೂಸಲೇವಿುನವರೂ ಪಸ್ಕಹಬ್ಬವನ್ನು ಆಚರಿಸಿದಂತೆ ಇಸ್ರಾಯೇಲ್ ರಾಜರಲ್ಲಿ ಒಬ್ಬನೂ ಆಚರಿಸಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಪ್ರವಾದಿಯಾದ ಸಮುವೇಲನ ಕಾಲದಿಂದ ಈ ರೀತಿಯಾಗಿ ಪಸ್ಕಹಬ್ಬವನ್ನು ಎಂದೂ ಆಚರಿಸಿರಲಿಲ್ಲ. ಇಸ್ರೇಲರ ಅರಸರಲ್ಲಿ ಯಾರೂ ಈ ರೀತಿಯಾಗಿ ಹಬ್ಬ ಆಚರಿಸಿರಲಿಲ್ಲ. ಅರಸನಾದ ಯೋಷೀಯ, ಯಾಜಕರು, ಲೇವಿಯರು, ಯೆಹೂದದ ಜನರು, ಇಸ್ರೇಲಿನಿಂದ ಬಂದ ಜನರು ಮತ್ತು ಜೆರುಸಲೇಮಿನ ಜನರು ವಿಶೇಷ ರೀತಿಯಲ್ಲಿ ಪಸ್ಕಹಬ್ಬವನ್ನು ಆಚರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಪ್ರವಾದಿಯಾದ ಸಮುಯೇಲನ ದಿವಸಗಳು ಮೊದಲುಗೊಂಡು ಇಸ್ರಾಯೇಲಿನಲ್ಲಿ ಇಂಥಾ ಪಸ್ಕವನ್ನು ಆಚರಿಸಿರಲಿಲ್ಲ. ಇಸ್ರಾಯೇಲಿನ ಸಮಸ್ತ ಅರಸರಲ್ಲಿ ಯೋಷೀಯನೂ, ಯಾಜಕರೂ, ಲೇವಿಯರೂ, ಸಿದ್ಧವಾಗಿದ್ದ ಯೆಹೂದ ಹಾಗೂ ಇಸ್ರಾಯೇಲರೆಲ್ಲರೂ, ಯೆರೂಸಲೇಮಿನ ನಿವಾಸಿಗಳೂ ಆಚರಿಸಿದ ಪಸ್ಕದ ಹಾಗೆ ಯಾರೂ ಆಚರಿಸಲಿಲ್ಲ. ಅಧ್ಯಾಯವನ್ನು ನೋಡಿ |