Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 35:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೋಷೀಯನು ಯಾಜಕರನ್ನು ಅವರವರ ಕೆಲಸಕ್ಕೆ ನೇಮಿಸಿ, ಯೆಹೋವನ ಆಲಯದ ಸೇವೆಗಾಗಿ ಅವರನ್ನು ಪ್ರೋತ್ಸಾಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಯೋಷೀಯನು ಯಾಜಕರನ್ನು ಅವರವರ ಕೆಲಸಕ್ಕೆ ನೇಮಿಸಿ, ಸರ್ವೇಶ್ವರನ ಸೇವೆಮಾಡುವಂತೆ ಪ್ರೋತ್ಸಾಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೋಷೀಯನು ಯಾಜಕರನ್ನು ಅವರವರ ಕೆಲಸಕ್ಕೆ ನೇವಿುಸಿ ಯೆಹೋವನ ಆಲಯದ ಸೇವೆಗಾಗಿ ಅವರನ್ನು ಪ್ರೋತ್ಸಾಹಪಡಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದೇವಾಲಯದಲ್ಲಿ ಸೇವೆ ಮಾಡುತ್ತಿದ್ದ ಯಾಜಕರನ್ನು ಯೋಷೀಯನು ಪ್ರೋತ್ಸಾಹಿಸಿ ವಿವಿಧ ಕೆಲಸಕಾರ್ಯಗಳಿಗೆ ಯಾಜಕರನ್ನು ಆರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಅವನು ಯಾಜಕರನ್ನು ಅವರವರ ಕೆಲಸಗಳಲ್ಲಿ ನಿಲ್ಲಿಸಿ; ಯೆಹೋವ ದೇವರ ಆಲಯದ ಸೇವೆ ಮಾಡುವುದಕ್ಕೆ ಅವರನ್ನು ಪ್ರೋತ್ಸಾಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 35:2
9 ತಿಳಿವುಗಳ ಹೋಲಿಕೆ  

ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ, ಸರ್ವಾಂಗಹೋಮ, ಸಮಾಧಾನ ಯಜ್ಞ, ಇವುಗಳನ್ನು ಸಮರ್ಪಿಸುವುದಕ್ಕೂ ಯೆಹೋವನ ಪಾಳೆಯದ ದ್ವಾರಗಳಲ್ಲಿ ಸೇರಿ ಯೆಹೋವನನ್ನು ಆರಾಧಿಸುತ್ತಾ, ಕೀರ್ತಿಸುತ್ತಾ, ಕೃತಜ್ಞತಾಸ್ತುತಿಮಾಡುತ್ತಾ ಇರುವುದಕ್ಕೂ ನೇಮಿಸಿದನು.


ಆದುದರಿಂದ ನೀವು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವನ ದರ್ಶನವನ್ನು ಬಯಸಿರಿ. ಏಳಿರಿ, ನಿಮ್ಮ ದೇವರಾದ ಯೆಹೋವನ ಪವಿತ್ರಾಲಯವನ್ನು ಕಟ್ಟಿರಿ. ಯೆಹೋವನ ಒಡಂಬಡಿಕೆ ಮಂಜೂಷವನ್ನೂ, ದೇವಾರಾಧನೆಯ ಪವಿತ್ರ ಸಾಮಗ್ರಿಗಳನ್ನೂ ಯೆಹೋವನ ಹೆಸರಿಗೋಸ್ಕರ ಕಟ್ಟಲ್ಪಡುವ ಮಂದಿರದಲ್ಲಿ ಇಡಿರಿ” ಎಂದು ಹೇಳಿದನು.


ಆ ಮೇಲೆ ಯಾಜಕರ ಮತ್ತು ಲೇವಿಯರ ಆಯಾ ಮಾರ್ಗಗಳನ್ನು ಮೋಶೆಯ ಧರ್ಮಶಾಸ್ತ್ರ ನಿಯಮದ ಪ್ರಕಾರ ಯೆರೂಸಲೇಮಿನ ದೇವರ ಸೇವೆಗೆ ನೇಮಿಸಿದರು.


ಯೆಹೋಯಾದನು ಲೇವಿಯರಾದ ಯಾಜಕರ ಕೈಕೆಳಗೆ ಯೆಹೋವನ ಆಲಯದ ಕಾವಲುಗಾರರನ್ನು ನೇಮಿಸಿದನು. ದಾವೀದನು ಆ ಯಾಜಕರನ್ನು ಯೆಹೋವನ ಆಲಯದ ಸೇವೆಗಾಗಿ ವರ್ಗವರ್ಗಗಳಾಗಿ ವಿಭಾಗಿಸಿದ್ದನು. ದಾವೀದನು ನೇಮಿಸಿದ್ದ ಉತ್ಸಾಹ ಗಾಯನದೊಡನೆ ಮೋಶೆಯ ಧರ್ಮಶಾಸ್ತ್ರಾನುಸಾರ ಯೆಹೋವನಿಗೆ ಸರ್ವಾಂಗಹೋಮ ಸಮರ್ಪಣೆ ಮಾಡುವುದೇ ಅವರ ಕರ್ತವ್ಯವಾಗಿತ್ತು.


ಲೇವಿಯ ಎಲ್ಲಾ ಯೆಹೂದ್ಯರೂ ಯಾಜಕನಾದ ಯೆಹೋಯಾದನ ಆಜ್ಞೆಯಂತೆ ನಡೆದುಕೊಂಡರು. ಅವನು ಸಬ್ಬತ್ ದಿನದಲ್ಲಿ ಸೇವಾ ವಿಮುಕ್ತರಾದ ವರ್ಗಗಳವರನ್ನು ಕಳುಹಿಸಿಬಿಡಲಿಲ್ಲ; ಆದುದರಿಂದ ಪ್ರತಿಯೊಬ್ಬನು ಸಬ್ಬತ್ ದಿನ ಮನೆಗೆ ಹೋಗಬೇಕಾಗಿದ್ದ ಮತ್ತು ಬರಬೇಕಾಗಿದ್ದ ತನ್ನ ಕೈಕೆಳಗಿನವರನ್ನು ಸೇರಿಸಿಕೊಂಡನು.


ಕೂಸಿಗೆ ಏನಾಗುವುದೆಂದು ತಿಳಿದುಕೊಳ್ಳುವುದಕ್ಕೆ, ಆ ಕೂಸಿನ ಅಕ್ಕ ಸ್ವಲ್ಪ ದೂರದಲ್ಲಿ ನಿಂತುಕೊಂಡಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು