2 ಪೂರ್ವಕಾಲ ವೃತ್ತಾಂತ 35:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಯೋಷೀಯನು ಅವನಿಗೆ ವಿರುದ್ಧವಾಗಿ ಹೊರಡಲು ನೆಕೋವನು ಅವನ ಬಳಿಗೆ ದೂತರನ್ನು ಕಳುಹಿಸಿ, “ಯೆಹೂದದ ಅರಸನೇ, ನನ್ನ ಗೊಡವೆ ನಿನಗೇಕೆ? ನಾನು ಈ ಸಾರಿ ಯುದ್ಧಕ್ಕೆ ಹೊರಟದ್ದು ನಿನಗೆ ವಿರುದ್ಧವಾಗಿ ಅಲ್ಲ. ನನ್ನ ಶತ್ರುವಂಶಕ್ಕೆ ವಿರುದ್ಧವಾಗಿ, ನಾನು ಮುನ್ನುಗ್ಗಬೇಕೆಂದು ದೇವರ ಅಪ್ಪಣೆಯಾಗಿದೆ. ನನ್ನೊಂದಿಗಿರುವ ದೇವರಿಗೆ ವಿರುದ್ಧ ಕೈಯೆತ್ತುವುದನ್ನು ಬಿಡು. ಇಲ್ಲವಾದರೆ ಆತನು ನಿನ್ನನ್ನು ನಾಶಮಾಡುವನು” ಎಂದು ಹೇಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಯೋಷೀಯನು ಅವನಿಗೆ ವಿರುದ್ಧ ಹೊರಟನು. ನೆಕೋವನು ಅವನ ಬಳಿಗೆ ದೂತರನ್ನು ಕಳುಹಿಸಿ, “ಜುದೇಯದ ಅರಸನೇ, ನನ್ನ ಗೊಡವೆ ನಿನಗೇಕೆ? ನಾನು ಈ ಸಾರಿ ಯುದ್ಧಕ್ಕೆ ಹೊರಟಿದ್ದು ನಿನಗೆ ವಿರೋಧವಾಗಿ ಅಲ್ಲ, ನನ್ನ ಶತ್ರುವಂಶಕ್ಕೆ ವಿರೋಧವಾಗಿಯೇ, ನಾನು ಮುನ್ನುಗ್ಗಬೇಕೆಂದು ದೇವರ ಅಪ್ಪಣೆ ಆಗಿದೆ. ನನ್ನೊಂದಿಗಿರುವ ದೇವರಿಗೆ ವಿರೋಧವಾಗಿ ನೀನು ಕೈಯೆತ್ತುವುದನ್ನು ಬಿಡು. ಇಲ್ಲವಾದರೆ, ಅವರು ನಿನ್ನನ್ನು ನಾಶಮಾಡುವರು,” ಎಂದು ಹೇಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಯೋಷೀಯನು ಅವನಿಗೆ ವಿರೋಧವಾಗಿ ಹೊರಡಲು ನೆಕೋವನು ಅವನ ಬಳಿಗೆ ದೂತರನ್ನು ಕಳುಹಿಸಿ - ಯೆಹೂದದ ಅರಸನೇ, ನನ್ನ ಗೊಡವೆ ನಿನಗೇಕೆ? ನಾನು ಈ ಸಾರಿ ಯುದ್ಧಕ್ಕೆ ಹೊರಟದ್ದು ನಿನಗೆ ವಿರೋಧವಾಗಿ ಅಲ್ಲ, ನನ್ನ ಶತ್ರುವಂಶಕ್ಕೆ ವಿರೋಧವಾಗಿಯೇ. ನನ್ನನ್ನು ಮುಂದರಿಸಬೇಕೆಂದು ದೇವರ ಅಪ್ಪಣೆಯಾಗಿದೆ. ನನ್ನೊಂದಿಗಿರುವ ದೇವರಿಗೆ ವಿರೋಧವಾಗಿ ಕೈಯೆತ್ತುವದನ್ನು ಬಿಡು. ಇಲ್ಲವಾದರೆ ಆತನು ನಿನ್ನನ್ನು ನಾಶಮಾಡುವನು ಎಂದು ಹೇಳಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆದರೆ ನೆಕೋ ಯೋಷೀಯನಿಗೆ ಸಂದೇಶವನ್ನು ಕಳುಹಿಸಿ ಅದರಲ್ಲಿ, “ಅರಸನಾದ ಯೋಷೀಯನೇ, ನಾನು ನಿನಗೆ ವಿರುದ್ಧವಾಗಿ ಬರಲಿಲ್ಲ. ಆದ್ದರಿಂದ ನೀನು ಯುದ್ಧಕ್ಕೆ ಕೈಹಾಕಬೇಡ. ನಾನು ನನ್ನ ವೈರಿಗಳ ಮೇಲೆ ಯುದ್ಧಮಾಡಲು ಬಂದಿದ್ದೇನೆ. ಬೇಗನೆ ಯುದ್ಧಮಾಡಲು ದೇವರು ನನ್ನನ್ನು ಅವಸರಪಡಿಸುತ್ತಿದ್ದಾನೆ. ದೇವರು ನಿನ್ನೊಂದಿಗಿದ್ದಾನೆ. ಆದ್ದರಿಂದ ನನಗೆ ತೊಂದರೆ ಕೊಡಬೇಡ. ನೀನು ನನ್ನ ಮೇಲೆ ಯುದ್ಧ ಮಾಡಿದರೆ ದೇವರು ನಿನ್ನನ್ನು ನಾಶಮಾಡುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದರೆ ಇವನು ಯೋಷೀಯನ ಬಳಿಗೆ ಸೇವಕರನ್ನು ಕಳುಹಿಸಿ, “ಯೆಹೂದದ ಅರಸನೇ, ನನಗೆ ನೀನು ಏನು? ಈ ಹೊತ್ತು ನಿನ್ನ ಮೇಲೆ ಅಲ್ಲ. ನಾನು ಯುದ್ಧಮಾಡುವ ವೈರಿಯ ಮೇಲೆಯೇ ದಾಳಿಮಾಡುತ್ತೇನೆ. ತ್ವರೆಮಾಡು ಎಂದು ದೇವರು ನನಗೆ ಹೇಳಿದ್ದಾರೆ. ನನ್ನ ಸಂಗಡ ಇರುವ ದೇವರು ನಿನ್ನನ್ನು ನಾಶಮಾಡದ ಹಾಗೆ ನೀನು ದೇವರ ಮುಂದೆ ಸುಮ್ಮನಿರು.” ಅಧ್ಯಾಯವನ್ನು ನೋಡಿ |