2 ಪೂರ್ವಕಾಲ ವೃತ್ತಾಂತ 35:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆದರೆ ಯೋಷೀಯನು ಅವನನ್ನು ಬಿಟ್ಟು ಹಿಂದಿರುಗಲಿಲ್ಲ. ದೈವೋಕ್ತಿಯಾಗಿದ್ದ ನೆಕೋವಿನ ಮಾತಿಗೆ ಕಿವಿಗೊಡದೆ, ವೇಷಹಾಕಿಕೊಂಡು ಅವನೊಡನೆ ಕಾದಾಡುವುದಕ್ಕೆ ಮೆಗಿದ್ದೋ ಬಯಲಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆದರೆ ಯೋಷೀಯನು ಅವನನ್ನು ಬಿಟ್ಟು ಹಿಂದಿರುಗಲಿಲ್ಲ. ದೇವೋಕ್ತಿಯಾಗಿದ್ದ ನೆಕೋವಿನ ಮಾತಿಗೆ ಕಿವಿಗೊಡದೆ, ವೇಷಹಾಕಿಕೊಂಡು ಅವನೊಡನೆ ಕಾದಾಡುವುದಕ್ಕೆ ಮೆಗಿದ್ದೋ ಬಯಲಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆದರೆ ಯೋಷೀಯನು ಅವನನ್ನು ಬಿಟ್ಟು ಹಿಂದಿರುಗಲಿಲ್ಲ. ದೇವೋಕ್ತಿಯಾಗಿದ್ದ ನೆಕೋವಿನ ಮಾತಿಗೆ ಕಿವಿಗೊಡದೆ ವೇಷಹಾಕಿಕೊಂಡು ಅವನೊಡನೆ ಕಾದುವದಕ್ಕೆ ಮೆಗಿದ್ದೋ ಬೈಲಿಗೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆದರೆ ಅರಸನಾದ ಯೋಷೀಯನು ಹಿಂದಕ್ಕೆ ಹೋಗಲಿಲ್ಲ. ಅವನು ನೆಕೋನನ್ನು ಎದುರಿಸಲು ನಿರ್ಧರಿಸಿದನು. ತನ್ನ ವೇಷ ಬದಲಾಯಿಸಿ ಯುದ್ಧಕ್ಕೆ ಹೋದನು. ದೇವರ ಅಪ್ಪಣೆಯ ಬಗ್ಗೆ ನೆಕೋ ಹೇಳಿದ್ದನ್ನು ಕೇಳಲು ಯೋಷೀಯನು ನಿರಾಕರಿಸಿ ಮೆಗಿದ್ದೋ ಕಣಿವೆಯಲ್ಲಿ ಯುದ್ಧಕ್ಕೆ ಹೊರಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆದಾಗ್ಯೂ ಯೋಷೀಯನು ತನ್ನ ಮುಖವನ್ನು ಅವನ ಕಡೆಯಿಂದ ತಿರುಗಿಸದೆ, ಅವನ ಸಂಗಡ ಯುದ್ಧಮಾಡಲು ತನ್ನ ವೇಷ ಮರೆಸಿಕೊಂಡು ಹೋದನು. ಯೋಷೀಯನು ದೇವರ ಬಾಯಿಂದ ಬಂದ ನೆಕೋ ಎಂಬವನ ಮಾತುಗಳನ್ನು ಕೇಳದೆ ಮೆಗಿದ್ದೋ ತಗ್ಗಿನಲ್ಲಿ ಯುದ್ಧಮಾಡಲು ಬಂದನು. ಅಧ್ಯಾಯವನ್ನು ನೋಡಿ |
ಯೋಷೀಯನು ಅವನಿಗೆ ವಿರುದ್ಧವಾಗಿ ಹೊರಡಲು ನೆಕೋವನು ಅವನ ಬಳಿಗೆ ದೂತರನ್ನು ಕಳುಹಿಸಿ, “ಯೆಹೂದದ ಅರಸನೇ, ನನ್ನ ಗೊಡವೆ ನಿನಗೇಕೆ? ನಾನು ಈ ಸಾರಿ ಯುದ್ಧಕ್ಕೆ ಹೊರಟದ್ದು ನಿನಗೆ ವಿರುದ್ಧವಾಗಿ ಅಲ್ಲ. ನನ್ನ ಶತ್ರುವಂಶಕ್ಕೆ ವಿರುದ್ಧವಾಗಿ, ನಾನು ಮುನ್ನುಗ್ಗಬೇಕೆಂದು ದೇವರ ಅಪ್ಪಣೆಯಾಗಿದೆ. ನನ್ನೊಂದಿಗಿರುವ ದೇವರಿಗೆ ವಿರುದ್ಧ ಕೈಯೆತ್ತುವುದನ್ನು ಬಿಡು. ಇಲ್ಲವಾದರೆ ಆತನು ನಿನ್ನನ್ನು ನಾಶಮಾಡುವನು” ಎಂದು ಹೇಳಿಸಿದನು.