Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 35:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮೋಶೆಯಿಂದ ಪ್ರಕಟವಾದ ಯೆಹೋವನ ವಿಧಿಗನುಸಾರವಾಗಿ ನಿಮ್ಮ ಸಹೋದರರು ಪಸ್ಕಭೋಜನ ಮಾಡುವಂತೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಅವರಿಗಾಗಿ ಎಲ್ಲವನ್ನೂ ಸಿದ್ಧಮಾಡಿರಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಮೋಶೆಯಿಂದ ಪ್ರಕಟವಾದ ಸರ್ವೇಶ್ವರನ ವಿಧಿಗನುಸಾರ ನಿಮ್ಮ ಸಹೋದರರು ಪಾಸ್ಕಭೋಜನ ಮಾಡುವಂತೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಅವರಿಗಾಗಿ ಎಲ್ಲವನ್ನೂ ಸಿದ್ಧಮಾಡಿರಿ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮೋಶೆಯಿಂದ ಪ್ರಕಟವಾದ ಯೆಹೋವನ ವಿಧಿಗನುಸಾರವಾಗಿ ನಿಮ್ಮ ಸಹೋದರರು ಪಸ್ಕಭೋಜನ ಮಾಡುವಂತೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಅವರಿಗೋಸ್ಕರ ಎಲ್ಲವನ್ನೂ ಸಿದ್ಧಮಾಡಿರಿ ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಪಸ್ಕದ ಕುರಿಮರಿಯನ್ನು ವಧಿಸಿ ಯೆಹೋವನಿಗಾಗಿ ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ. ನಿಮ್ಮ ಸೋದರರಾದ ಇಸ್ರೇಲರಿಗೆ ಕುರಿಮರಿಯನ್ನು ಸಿದ್ಧಮಾಡಿರಿ. ಯೆಹೋವನು ನಮಗೆ ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸಿರಿ. ಆತನು ಮೋಶೆಯ ಮೂಲಕ ನಮಗೆ ಈ ವಿಧಿನಿಯಮಗಳನ್ನು ಅನುಗ್ರಹಿಸಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಪಸ್ಕದ ಕುರಿಮರಿಯನ್ನು ವಧಿಸಿ ನಿಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ಯೆಹೋವ ದೇವರು ಮೋಶೆಯ ಮುಖಾಂತರವಾಗಿ ಹೇಳಿದ ವಾಕ್ಯದ ಪ್ರಕಾರ ನಿಮ್ಮ ಸಹೋದರರು ಮಾಡುವ ಹಾಗೆ ಅವರನ್ನು ಸಿದ್ಧಮಾಡಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 35:6
21 ತಿಳಿವುಗಳ ಹೋಲಿಕೆ  

ಅವರಿಗೆ, “ಲೇವಿಯರೇ, ನನ್ನ ಮಾತನ್ನು ಕೇಳಿರಿ; ಈಗ ನಿಮ್ಮನ್ನು ಶುದ್ಧೀಕರಿಸಿಕೊಂಡು ನಿಮ್ಮ ಪೂರ್ವಿಕರ ದೇವರಾದ ಯೆಹೋವನ ಪವಿತ್ರಾಲಯದಲ್ಲಿರುವ ಹೊಲಸನ್ನೆಲ್ಲಾ ಹೊರಗೆ ಹಾಕಿ ಆಲಯವನ್ನು ಶುದ್ಧೀಕರಿಸಿರಿ.


ಎಂಬ ಲೇವಿಯರು ಎದ್ದು ತಮ್ಮ ಸಹೋದರರನ್ನು ಸೇರಿಕೊಂಡರು. ಅವರು ಅರಸನ ಆಜ್ಞಾನುಸಾರವಾಗಿ ಯೆಹೋವನ ಧರ್ಮಶಾಸ್ತ್ರ ವಿಧಿಯ ಮೇರೆಗೆ ತಮ್ಮನ್ನು ಶುದ್ಧೀಕರಿಸಿಕೊಂಡು ಯೆಹೋವನ ಆಲಯವನ್ನು ಶುದ್ಧೀಕರಿಸುವುದಕ್ಕೆ ಬಂದರು.


ಜನರನ್ನು ಒಟ್ಟುಗೂಡಿಸಿರಿ, ಪವಿತ್ರ ಸಭೆಯನ್ನು ಏರ್ಪಡಿಸಿರಿ. ಹಿರಿಯರನ್ನು ಕೂಡಿಸಿರಿ, ಮಕ್ಕಳನ್ನು ಸೇರಿಸಿರಿ, ಮೊಲೆಕೂಸುಗಳನ್ನು ಸೇರಿಸಿರಿ. ಮದುಮಗನು ತನ್ನ ಕೊಠಡಿಯಿಂದ ಹೊರಟುಬರಲಿ, ವಧುವು ತನ್ನ ಕಲ್ಯಾಣಗೃಹದಿಂದ ಹೊರಟುಬರಲಿ.


ಹಿಸ್ಸೋಪ್ ಗಿಡದ ಬರಲಿನಿಂದ ನೀರನ್ನು ಚಿಮಕಿಸಿಯೋ ಎಂಬಂತೆ ನನ್ನ ಅಶುದ್ಧತ್ವವನ್ನು ತೆಗೆದುಬಿಡು, ಆಗ ಶುದ್ಧನಾಗುವೆನು; ನನ್ನನ್ನು ತೊಳೆ, ಆಗ ಹಿಮಕ್ಕಿಂತಲೂ ಬೆಳ್ಳಗಾಗುವೆನು.


ಔತಣದ ಸರದಿ ತೀರಿದ ನಂತರ ಯೋಬನು, “ನನ್ನ ಮಕ್ಕಳು ಒಂದು ವೇಳೆ ಹೃದಯದಲ್ಲಿ ದೇವರನ್ನು ದೂಷಿಸಿ ಪಾಪ ಮಾಡಿರಬಹುದು” ಎಂದು ಅವರನ್ನು ಕರೆಯಿಸಿ ಶುದ್ಧಿಪಡಿಸಿ, ಬೆಳಿಗ್ಗೆ ಎದ್ದು ಅವರ ಸಂಖ್ಯೆಗೆ ತಕ್ಕಂತೆ ಹೋಮಗಳನ್ನು ಅರ್ಪಿಸುತ್ತಿದ್ದನು. ಹೀಗೆ ಯೋಬನು ಕ್ರಮವಾಗಿ ಮಾಡುವುದು ದೈನಂದಿನ ಕ್ರಮವಾಗಿತ್ತು.


ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಂಡಿದ್ದು, ಆ ದಿನದ ಸಂಜೆ ವೇಳೆಯಲ್ಲಿ ಇಸ್ರಾಯೇಲರ ಸಮೂಹದವರೆಲ್ಲರೂ ಒಟ್ಟಿಗೆ ಸೇರಿ ಅವುಗಳನ್ನು ವಧಿಸಬೇಕು.


ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ “ನಿಮ್ಮ ಮಧ್ಯಲ್ಲಿರುವ ಅನ್ಯ ದೇವರುಗಳನ್ನು ತೆಗೆದುಹಾಕಿ ನಿಮ್ಮನ್ನು ಶುದ್ಧಪಡಿಸಿಕೊಂಡು, ವಸ್ತ್ರಗಳನ್ನು ಬದಲಾಯಿಸಿರಿ,


ಯಾಕೆಂದರೆ ಯಾಜಕರಲ್ಲಿ ಸಾಕಷ್ಟು ಮಂದಿ ತಮ್ಮನ್ನು ಶುದ್ಧಿಪಡಿಸಿಕೊಂಡಿರಲಿಲ್ಲ. ಜನರು ಯೆರೂಸಲೇಮಿನಲ್ಲಿ ಇನ್ನೂ ಒಟ್ಟಾಗಿ ಸೇರಿ ಬಂದಿರಲಿಲ್ಲವಾದುದರಿಂದ ಕೂಡಲೆ ಪಸ್ಕಹಬ್ಬವನ್ನು ಆಚರಿಸಲು ಸಾಧ್ಯವಾಗುವುದಿಲ್ಲವೆಂದು ಅರಸನಿಗೂ ಅವನ ಸರದಾರರಿಗೂ ಯೆರೂಸಲೇಮಿನ ಸರ್ವಸಂಘದವರಿಗೂ ತಿಳಿದುಕೊಂಡರು.


ಯಾಜಕರು ಕೆಲವು ಮಂದಿಯಾದುದ್ದರಿಂದ ಸರ್ವಾಂಗಹೋಮದ ಪ್ರಾಣಿಗಳ ಚರ್ಮವನ್ನು ಸುಲಿಯುವುದು ಅವರಿಂದ ಆಗದೆ ಹೋಯಿತು. ಆದುದರಿಂದ ಮಿಕ್ಕ ಯಾಜಕರೂ ತಮ್ಮನ್ನು ಶುದ್ಧಿಪಡಿಸಿಕೊಳ್ಳುವವರೆಗೂ ಆ ಕೆಲಸವು ಮುಗಿಯುವ ತನಕ, ಅವರ ಬಂಧುಗಳಾದ ಲೇವಿಯರು ಅವರಿಗೆ ಸಹಾಯಮಾಡುತ್ತಿದ್ದರು. ತಮ್ಮನ್ನು ಶುದ್ಧಿಪಡಿಸಿಕೊಳ್ಳುವುದರಲ್ಲಿ ಯಾಜಕರಿಗಿಂತ ಲೇವಿಯರೇ ಹೆಚ್ಚು ಶ್ರದ್ಧೆಯುಳ್ಳವರಾಗಿದ್ದರು.


ಆಗ ಮೋಶೆ ಜನರಿಗೆ, “ಮೂರನೆಯ ದಿನದಲ್ಲಿ ಸಿದ್ಧವಾಗಿರಿ. ಯಾವ ಪುರುಷನೂ ಸ್ತ್ರೀಸಂಗ ಮಾಡಬಾರದು” ಎಂದು ಹೇಳಿದನು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಜನರ ಬಳಿಗೆ ಹೋಗಿ, ಈ ದಿನ ಮತ್ತು ನಾಳೆ ಅವರನ್ನು ಶುದ್ಧಗೊಳಿಸು. ನನ್ನ ಬರುವಿಕೆಗಾಗಿ ಅವರನ್ನು ಸಿದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು,


ನಿಮ್ಮ ಸಹೋದರರೂ ನಿಮ್ಮನ್ನು ಶುದ್ಧಿಪಡಿಸಿಕೊಂಡು, ಇಸ್ರಾಯೇಲರ ದೇವರಾದ ಯೆಹೋವನ ಮಂಜೂಷವನ್ನು ನಾನು ಸಿದ್ಧಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬನ್ನಿರಿ.


ಯೋಷೀಯನು ಯೆಹೋವನಿಗೋಸ್ಕರ ಯೆರೂಸಲೇಮಿನಲ್ಲಿ ಪಸ್ಕಹಬ್ಬವನ್ನು ಆಚರಿಸುವಂತೆ ಮಾಡಿದನು. ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕದ ಕುರಿಗಳನ್ನು ಕೊಯ್ದರು.


ಯೋಷೀಯನು ಹಬ್ಬಕ್ಕೆ ಬಂದ ಜನರಿಗೆ ಪಸ್ಕಯಜ್ಞಕ್ಕಾಗಿ ರಾಜಕೀಯ ಸೊತ್ತಿನಿಂದ ಮೂವತ್ತು ಸಾವಿರ ಆಡುಮರಿಗಳನ್ನೂ, ಕುರಿಮರಿಗಳನ್ನೂ, ಮೂರು ಸಾವಿರ ಹೋರಿಗಳನ್ನೂ ದಾನಮಾಡಿದನು.


ಲೇವಿಯರು ಪಸ್ಕದ ಪಶುಗಳನ್ನು ವಧಿಸಿದರು. ಯಾಜಕರು ಇವರ ಕೈಯಿಂದ ರಕ್ತವನ್ನು ತೆಗೆದುಕೊಂಡು ಪ್ರೋಕ್ಷಿಸಿದರು.


ಮಹಾ ಪರಿಶುದ್ಧ ಸ್ಥಳದಿಂದ ಯಾಜಕರು ಹೊರಗೆ ಬಂದರು. ಸಮಸ್ತ ಯಾಜಕರು ವರ್ಗವ್ಯತ್ಯಾಸವಿಲ್ಲದೆ ಎಲ್ಲರೂ ತಮ್ಮನ್ನು ಶುದ್ಧಮಾಡಿಕೊಂಡಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು