2 ಪೂರ್ವಕಾಲ ವೃತ್ತಾಂತ 35:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೋಷೀಯನು ಹಬ್ಬಕ್ಕೆ ಬಂದ ಜನರಿಗೆ ಪಸ್ಕಯಜ್ಞಕ್ಕಾಗಿ ರಾಜಕೀಯ ಸೊತ್ತಿನಿಂದ ಮೂವತ್ತು ಸಾವಿರ ಆಡುಮರಿಗಳನ್ನೂ, ಕುರಿಮರಿಗಳನ್ನೂ, ಮೂರು ಸಾವಿರ ಹೋರಿಗಳನ್ನೂ ದಾನಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಯೋಷೀಯನು, ಹಬ್ಬಕ್ಕೆ ಬಂದ ಜನರಿಗೆ ಪಾಸ್ಕ ಬಲಿಗಾಗಿ ಆಸ್ಥಾನದ ಸೊತ್ತಿನಿಂದ ಮೂವತ್ತು ಸಾವಿರ ಆಡುಮರಿಗಳನ್ನೂ ಕುರಿಮರಿಗಳನ್ನೂ ಮೂರು ಸಾವಿರ ಹೋರಿಗಳನ್ನೂ ದಾನಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯೋಷೀಯನು ಹಬ್ಬಕ್ಕೆ ಬಂದ ಜನರಿಗೆ ಪಸ್ಕ ಯಜ್ಞಕ್ಕಾಗಿ ರಾಜಕೀಯ ಸೊತ್ತಿನಿಂದ ಮೂವತ್ತು ಸಾವಿರ ಆಡುಮರಿಗಳನ್ನೂ ಕುರಿಮರಿಗಳನ್ನೂ ಮೂರು ಸಾವಿರ ಹೋರಿಗಳನ್ನೂ ದಾನಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಇಸ್ರೇಲರಿಗೆ ಅರಸನಾದ ಯೋಷೀಯನು ಪಸ್ಕಹಬ್ಬದ ಯಜ್ಞಗಳಿಗಾಗಿ ಮೂವತ್ತು ಸಾವಿರ ಕುರಿಮರಿಗಳನ್ನು ಕೊಟ್ಟನು. ಇದರ ಮೇಲೆ ಮೂರು ಸಾವಿರ ಪಶುಗಳನ್ನು ಅವನು ಜನರಿಗೆ ಕೊಟ್ಟನು. ಈ ಪ್ರಾಣಿಗಳೆಲ್ಲಾ ಅರಸನಾದ ಯೋಷೀಯನದೇ ಆಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆಗ ಯೋಷೀಯನು ಸಿದ್ಧವಾಗಿದ್ದ ಸಮಸ್ತ ಸಾಮಾನ್ಯ ಜನರಿಗೆ ಪಸ್ಕದ ಆಡುಮರಿಗೋಸ್ಕರ ಮಂದೆಯಿಂದ ಮೂವತ್ತು ಸಾವಿರ ಕುರಿಮರಿಗಳನ್ನೂ, ಮೇಕೆಯ ಮರಿಗಳನ್ನೂ ಕೊಟ್ಟನು. ಇದಲ್ಲದೆ ಮೂರು ಸಾವಿರ ಎತ್ತುಗಳನ್ನೂ ಕೊಟ್ಟನು. ಇವೆಲ್ಲಾ ಅರಸನ ಸ್ವಂತ ಸೊತ್ತಿನಿಂದಲೇ ಕೊಟ್ಟನು. ಅಧ್ಯಾಯವನ್ನು ನೋಡಿ |
ಉತ್ಸವಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ ಇಸ್ರಾಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲಿಯೂ ಸರ್ವಾಂಗಹೋಮ ಪಶು, ಧಾನನೈವೇದ್ಯ ಪಾನನೈವೇದ್ಯ, ಇವುಗಳನ್ನು ಒದಗಿಸುವುದು ಅರಸನ ಕರ್ತವ್ಯವಾಗಿದೆ; ಇಸ್ರಾಯೇಲ್ ವಂಶದ ದೋಷ ನಿವಾರಣೆಗಾಗಿ ಅವನು ದೋಷಪರಿಹಾರಕ ಯಜ್ಞಪಶು, ಧಾನ್ಯನೈವೇದ್ಯ, ಸರ್ವಾಂಗಹೋಮ ಪಶು, ಸಮಾಧಾನ ಯಜ್ಞಪಶು, ಇವುಗಳನ್ನು ಒಪ್ಪಿಸತಕ್ಕದ್ದು.