Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 36:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇದಲ್ಲದೆ, ಅರಸನಾದ ನೆಬೂಕದ್ನೆಚ್ಚರನಿಗೆ ಅಧೀನನಾಗಿರುತ್ತೇನೆ ಎಂದು ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿಸಿದ್ದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದದ್ದಲ್ಲದೆ ಇಸ್ರಾಯೇಲ್ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳದೆ ಹಠಮಾರಿಯಾಗಿ ತನ್ನ ಮನಸ್ಸನ್ನು ಕಠಿಣ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇದಲ್ಲದೆ, ನೆಬೂಕದ್ನೆಚ್ಚರನಿಗೆ ಒಳಗಾಗುತ್ತೇನೆಂದು, ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದ್ದರೂ, ಅವನಿಗೆ ವಿರುದ್ಧ ದಂಗೆ ಎದ್ದನು. ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಅಭಿಮುಖನಾಗಲೊಲ್ಲದೆ, ಹಟಹಿಡಿದು ಮನಸ್ಸನ್ನು ಕಠಿಣಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇದಲ್ಲದೆ ನೆಬೂಕದ್ನೆಚ್ಚರನಿಗೆ ಒಳಗಾಗುತ್ತೇನೆಂದು ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದ್ದರೂ ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು ಇಸ್ರಾಯೇಲ್‍ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಲೊಲ್ಲದೆ ಹಟಹಿಡಿದು ಮನಸ್ಸನ್ನು ಕಠಿನಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಚಿದ್ಕೀಯನು ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ದಂಗೆ ಎದ್ದನು. ನೆಬೂಕದ್ನೆಚ್ಚರನು ತನಗೆ ವಿಧೇಯನಾಗಿರುವಂತೆ ಚಿದ್ಕೀಯನಿಂದ ಪ್ರಮಾಣ ಮಾಡಿಸಿಕೊಂಡಿದ್ದನು. ಚಿದ್ಕೀಯನು ದೇವರ ಹೆಸರಿನಲ್ಲಿ ಆಣೆಯಿಟ್ಟು ತಾನು ನೆಬೂಕದ್ನೆಚ್ಚರನಿಗೆ ನಂಬಿಗಸ್ತನಾಗಿರುವುದಾಗಿ ಪ್ರಮಾಣಮಾಡಿದ್ದನು. ಆದರೆ ಚಿದ್ಕೀಯನು ಮನಸ್ಸನ್ನು ಕಠಿಣಮಾಡಿಕೊಂಡು ಇಸ್ರೇಲಿನ ದೇವರಾದ ಯೆಹೋವನಿಗೆ ವಿಧೇಯನಾಗಲು ನಿರಾಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿಬಿದ್ದನು. ಹೇಗೆಂದರೆ ಅವನು ಇಸ್ರಾಯೇಲಿನ ಯೆಹೋವ ದೇವರ ಕಡೆಗೆ ತಿರುಗದೆ, ಹಟಮಾರಿಯಾಗಿ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 36:13
27 ತಿಳಿವುಗಳ ಹೋಲಿಕೆ  

ಈಗ ನೀವು ನಿಮ್ಮ ಪೂರ್ವಿಕರಂತೆ ರಾಜಾಜ್ಞೆಗೆ ಮಣಿಯದವರಾಗಿರಬೇಡಿರಿ, ಯೆಹೋವನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಯೆಹೋವನು ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡಿರುವ ಪವಿತ್ರಾಲಯಕ್ಕೆ ಬಂದು ಆತನನ್ನು ಆರಾಧಿಸಿರಿ. ಆಗ ನಿಮ್ಮ ಮೇಲಿರುವ ಆತನ ಉಗ್ರಕೋಪವು ತೊಲಗಿಹೋಗುವುದು.


ನಿಮ್ಮಲ್ಲಿ ಒಬ್ಬರಾದರೂ ಪಾಪದಲ್ಲಿ ಸಿಕ್ಕಿ ಮೋಸಹೋಗಿ ಕಠಿಣರಾಗದಂತೆ, ‘ಇಂದು’ ಎಂದು ಕರೆಯಲ್ಪಡುವ ಅವಕಾಶ ಇನ್ನೂ ಇರುವಾಗಲೇ, ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.


ಇಸ್ರಾಯೇಲ್ಯರು ಅರಣ್ಯದಲ್ಲಿ, ದೇವರನ್ನು ಪರೀಕ್ಷಿಸಿದ ದಿನದಲ್ಲಿ ಹಠಮಾರಿಗಳಾದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ.


ಏಕೆಂದರೆ ನೀನು ಹಟವಾದಿ ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ತಾಮ್ರ ಎಂದು ನಾನು ತಿಳಿದುಕೊಂಡೆನು.


ನಿನ್ನ ಧರ್ಮೋಪದೇಶಕ್ಕೆ ಪುನಃ ಮನಗೊಟ್ಟು ಬನ್ನಿರಿ ಎಂದು ಎಷ್ಟೋ ಖಂಡಿತವಾಗಿ ಅವರನ್ನು ಎಚ್ಚರಿಸಿದೆ. ಆದರೂ ಅವರು ಲಾಲಿಸದೆ ಗರ್ವಿಗಳೂ, ನಿನ್ನ ಆಜ್ಞೆಗಳಿಗೆ ಅವಿಧೇಯರೂ ಆದರು. ಕೈಕೊಳ್ಳುವ ಮನುಷ್ಯನಿಗೆ ಜೀವಾಧಾರವಾಗಿರುವ ನಿನ್ನ ವಿಧಿನ್ಯಾಯಗಳನ್ನು ಮೀರಿ ಪಾಪಮಾಡಿ ಮೊಂಡು ಬಿದ್ದು ನಿನ್ನ ಮಾತುಗಳನ್ನು ಕೇಳದೆ ಹೋದರು.


ಯೆಹೋವನು ಯೆರೂಸಲೇಮಿನವರ ಮೇಲೆಯೂ ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ ಕೊನೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ನಾಶಮಾಡುವಷ್ಟು ರೋಷವುಳ್ಳವನಾಗಿದ್ದನು. ಆದರೆ ಚಿದ್ಕೀಯನು ಬಾಬೆಲಿನ ಅರಸನಿಗೆ ವಿರುದ್ಧವಾಗಿ ತಿರುಗಿಬಿದ್ದನು.


ಕೆಲವು ವರ್ಷಗಳಾದ ನಂತರ ಅರಸನಾದ ಹೋಶೇಯನು ಪ್ರತಿವರ್ಷವೂ ಕೊಡಬೇಕಾದ ಕಪ್ಪವನ್ನು ಕೊಡದೆಹೋದುದರಿಂದಲೂ, ಐಗುಪ್ತದ ಅರಸನಾದ ಸೋ ಎಂಬುವವನ ಬಳಿಗೆ ರಾಯಭಾರಿಗಳನ್ನು ಕಳುಹಿಸಿದ್ದರಿಂದಲೂ ಅಶ್ಶೂರದ ಅರಸನು ಇವನನ್ನು ದ್ರೋಹಿಯೆಂದು ತಿಳಿದು ಬಂಧಿಸಿ ಸೆರೆಯಲ್ಲಿಟ್ಟನು.


ಗಿಬ್ಯೋನ್ಯರು ಇಸ್ರಾಯೇಲ್ಯರ ಕುಲಕ್ಕೆ ಸೇರಿದವರಲ್ಲ. ಸಂಹೃತರಾಗದೆ ಉಳಿದ ಅಮೋರಿಯರಷ್ಟೆ. ಇಸ್ರಾಯೇಲ್ಯರು ತಾವು ಇವರನ್ನು ಕೊಲ್ಲುವುದಿಲ್ಲವೆಂದು ಪ್ರಮಾಣಮಾಡಿದ್ದರು. ಆದರೂ ಸೌಲನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳ ಮೇಲೆ ತನಗಿದ್ದ ಅಭಿಮಾನದ ನಿಮಿತ್ತ ಇವರನ್ನು ನಿರ್ನಾಮಗೊಳಿಸಬೇಕೆಂದಿದ್ದನು.


ಯೆಹೋಶುವನು ಅವರೊಡನೆ “ನಿಮ್ಮ ಜೀವವನ್ನು ಕಾಪಾಡುತ್ತೇವೆ” ಎಂದು ಶಾಂತಿ ಸಂಧಾನ ಮಾಡಿಕೊಂಡನು. ಸಭೆಯ ನಾಯಕರೂ ಹಾಗೆಯೇ ಪ್ರಮಾಣ ಮಾಡಿದರು. ಜನರ ಪ್ರಧಾನರೂ ಪ್ರಮಾಣಮಾಡಿದರು.


ನೀನು ನನ್ನ ಜನರನ್ನು ಇನ್ನೂ ಹೋಗಗೊಡಿಸದೆ ಅವರ ಮುಂದೆ, ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯಾ?


ಆದರೂ ಫರೋಹನು ತನ್ನ ಹೃದಯವನ್ನು ಕಠಿಣಮಾಡಿಕೊಂಡು ಜನರಿಗೆ ಹೋಗುವುದಕ್ಕೆ ಅಪ್ಪಣೆ ಕೊಡಲಿಲ್ಲ.


ಆದರೆ ಫರೋಹನು ಕಪ್ಪೆಗಳ ಕಾಟವು ತೀರಿತೆಂದು ತಿಳಿದುಕೊಂಡಾಗ, ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು. ಯೆಹೋವನು ಹೇಳಿದಂತೆಯೇ ಅವನು, ಮೋಶೆ ಮತ್ತು ಆರೋನನ ಮಾತನ್ನು ಕೇಳದೆ ಹೋದನು.


ಅದಕ್ಕೆ ಜನರು, ‘ಈ ದೇಶದವರ ಪೂರ್ವಿಕರ ದೇವರಾದ ಯೆಹೋವನು ಅವರನ್ನು ಐಗುಪ್ತದೇಶದಿಂದ ಬಿಡಿಸಿದ ಮೇಲೆ ಅವರೊಡನೆ ಮಾಡಿದ ಒಡಂಬಡಿಕೆಯನ್ನು ಅವರು ಉಲ್ಲಂಘಿಸಿದರು.


ಪ್ರಧಾನಯಾಜಕರೂ, ಪ್ರಜೆಗಳೂ ಕೂಡ ಮಹಾ ದ್ರೋಹಿಗಳಾಗಿ, ಅನ್ಯಜನಾಂಗಗಳ ಅಸಹ್ಯ ಕೃತ್ಯಗಳನ್ನು ಅನುಸರಿಸಿ, ಯೆಹೋವನು ತನಗೆ ಪ್ರತಿಷ್ಠಿಸಿಕೊಂಡಿದ್ದ ಯೆರೂಸಲೇಮಿನ ದೇವಾಲಯವನ್ನು ಹೊಲೆಮಾಡಿದರು.


ನಿನ್ನ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮನ್ನು ಸೇರಿ ರಾಜಕಂಟಕವಾದ ಆ ಕೆಟ್ಟ ಪಟ್ಟಣವನ್ನೂ, ಅದರ ಪೌಳಿಗೋಡೆಯನ್ನೂ ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿ ಪೌಳಿಗೋಡೆಯ ಅಸ್ತಿವಾರವನ್ನು ಜೀರ್ಣೋದ್ಧಾರಮಾಡಿದ್ದಾರೆ ಎಂಬುದಾಗಿ ನಾವು ತಮಗೆ ಅರಿಕೆಮಾಡಿಕೊಳ್ಳುತ್ತೇವೆ.


ಆಮೇಲೆ ಹೋಷಾಯನ ಮಗನಾದ ಅಜರ್ಯನೂ, ಕಾರೇಹನ ಮಗನಾದ ಯೋಹಾನಾನನೂ, ಸೊಕ್ಕೇರಿದವರೆಲ್ಲರೂ ಅವನಿಗೆ, “ನಿನ್ನ ಮಾತು ಸುಳ್ಳು, ‘ಐಗುಪ್ತಕ್ಕೆ ಹೋಗಿ ವಾಸಮಾಡಬಾರದು’ ಎಂದು ತಿಳಿಸುವಂತೆ ನಮ್ಮ ದೇವರಾದ ಯೆಹೋವನು ನಿನ್ನನ್ನು ಕಳುಹಿಸಲಿಲ್ಲ.


“ಹೀಗೆ ಅವನ ಹೃದಯವು ಉಬ್ಬಿ, ಅವನ ಸ್ವಭಾವವು ಕಠಿಣವಾಗಿ ಅವನಿಗೆ ಸೊಕ್ಕೇರಲು ಅವನನ್ನು ರಾಜಾಸನದಿಂದ ತಳ್ಳಿ, ಮಾನವನ್ನು ತೆಗೆದುಬಿಟ್ಟರು.


ಧರ್ಮೋಪದೇಶವನ್ನೂ, ಸೇನಾಧೀಶ್ವರ ಯೆಹೋವನು ಪೂರ್ವಕಾಲದ ಪ್ರವಾದಿಗಳ ಮೂಲಕ ತನ್ನ ಆತ್ಮನಿಂದ ಹೇಳಿಸಿದ ಮಾತುಗಳನ್ನೂ ಕೇಳಬಾರದೆಂದು ತಮ್ಮ ಹೃದಯಗಳನ್ನು ವಜ್ರದಷ್ಟು ಕಠಿಣಪಡಿಸಿಕೊಂಡರು. ಆದಕಾರಣ ಸೇನಾಧೀಶ್ವರ ಯೆಹೋವನ ಕೋಪಕ್ಕೆ ಗುರಿಯಾದರು.


ಯೆಹೋವನು ಮೊದಲು ಹೇಳಿದಂತೆಯೇ ಫರೋಹನ ಹೃದಯವು ಕಠಿಣವಾಯಿತು. ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.


“ಸ್ತ್ರೀಯು ಕನ್ಯಾವಸ್ಥೆಯಲ್ಲಿ ತಂದೆಯ ಮನೆಯಲ್ಲಿದ್ದು ಯೆಹೋವನಿಗೆ ಹರಕೆಯನ್ನು ಮಾಡಿದಾಗ ಇಲ್ಲವೆ ಯಾವುದಾದರೂ ಒಂದನ್ನು ಮುಟ್ಟದೆ ಇರುವೆನೆಂದು ಪ್ರತಿಜ್ಞೆಯನ್ನು ಮಾಡಿಕೊಂಡಾಗ


ಯೆಹೋವನು ಅವರನ್ನು ತನ್ನ ಕಡೆಗೆ ತಿರುಗಿಸಿಕೊಳ್ಳುವುದಕ್ಕಾಗಿ ಅವರ ಬಳಿಗೆ ಪ್ರವಾದಿಗಳನ್ನು ಕಳುಹಿಸಿದರು. ಅವರ ಮುಖಾಂತರವಾಗಿ ಎಷ್ಟು ಎಚ್ಚರಿಸಿದರೂ ಅವರು ಕಿವಿಗೊಡಲಿಲ್ಲ.


ಅವನು ಭ್ರಷ್ಟರನ್ನು ಬಿಟ್ಟುಬಿಟ್ಟವನೂ, ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ, ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು