Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 36:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆದರೂ ಅವರು ದೇವಸಂದೇಶಕರನ್ನು ಗೇಲಿಮಾಡಿದರು. ದೇವರ ಮಾತುಗಳನ್ನು ತುಚ್ಛೀಕರಿಸಿ ಅವರ ಪ್ರವಾದಿಗಳನ್ನು ಹೀಯಾಳಿಸಿದರು. ಆದ್ದರಿಂದ ದೇವಕೋಪಾಗ್ನಿ ಅವರ ಪ್ರಜೆಯ ಮೇಲೆ ಉರಿಯತೊಡಗಿತು. ಅದರ ತಾಪ ಆರಿಹೋಗಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವರು ದೇವಪ್ರೇಷಿತರನ್ನು ಗೇಲಿಮಾಡಿ ಆತನ ಮಾತುಗಳನ್ನು ತುಚ್ಫೀಕರಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ ಆತನ ಕೋಪಾಗ್ನಿಯು ಆತನ ಪ್ರಜೆಯ ಮೇಲೆ ಉರಿಯಹತ್ತಿತು, ಅದರ ತಾಪವು ಆರಿಹೋಗಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದರೆ ಆತನ ಜನರು ಪ್ರವಾದಿಗಳನ್ನು ಹಾಸ್ಯಮಾಡಿದರು; ಅವರ ಮಾತುಗಳನ್ನು ಕೇಳಲು ನಿರಾಕರಿಸಿದರು; ದೇವರ ಸಂದೇಶವನ್ನು ದ್ವೇಷಿಸಿದರು. ಆಗ ದೇವರ ಕೋಪವು ಅವರ ಮೇಲೆ ಉರಿಯತೊಡಗಿತು. ಅದನ್ನು ನಿಲ್ಲಿಸಲು ಯಾರಿಗೂ ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ಯೆಹೋವ ದೇವರ ಕೋಪವು ತಮ್ಮ ಜನರಿಗೆ ವಿರೋಧವಾಗಿ ಏಳುವವರೆಗೂ, ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ, ದೇವರ ವಾಕ್ಯಗಳನ್ನು ತಿರಸ್ಕರಿಸಿ, ದೇವರ ಪ್ರವಾದಿಗಳಿಗೆ ಅಪಹಾಸ್ಯ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 36:16
44 ತಿಳಿವುಗಳ ಹೋಲಿಕೆ  

ದೂತರು ಎಫ್ರಾಯೀಮ್, ಮನಸ್ಸೆ, ಜೆಬುಲೂನ್ ಪ್ರಾಂತ್ಯಗಳಲ್ಲಿ, ಪಟ್ಟಣದಿಂದ ಪಟ್ಟಣಕ್ಕೆ ಹೋದರು. ಜನರು ಅವರನ್ನು ಕಂಡು ನಕ್ಕು ಗೇಲಿಮಾಡಿದರು.


ಹೀಗಿರಲು ಈ ಮಾತನ್ನು ತಿರಸ್ಕರಿಸುವವನು ಮನುಷ್ಯರನ್ನು ಮಾತ್ರವಲ್ಲದೆ, ನಿಮಗೆ ಪವಿತ್ರಾತ್ಮವರವನ್ನು ದಯಪಾಲಿಸುವ ದೇವರನ್ನೂ ತಿರಸ್ಕರಿಸುವವನಾಗಿದ್ದಾನೆ.


ಯೆಹೂದದ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ನೀನು ಪ್ರವಾದನೆ ಮಾಡುತ್ತಾ, ‘ಯೆಹೋವನು ಇಂತೆನ್ನುತ್ತಾನೆ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರಮಿಸುವನು.


ಆದಕಾರಣ ಅವನಿಗೆ ತಟ್ಟನೆ ವಿಪತ್ತು ಸಂಭವಿಸುವುದು, ಏಳದ ಹಾಗೆ ಫಕ್ಕನೆ ಮುರಿಯಲ್ಪಡುವನು.


ದೇವರೇ, ನೀನು ನಮ್ಮನ್ನು ಸಂಪೂರ್ಣವಾಗಿ ತಳ್ಳಿಬಿಟ್ಟಿದ್ದೇಕೆ? ನೀನು ಪಾಲಿಸುವ ಹಿಂಡಿನ ಮೇಲೆ ನಿನ್ನ ಕೋಪಾಗ್ನಿಯ ಹೊಗೆ ಏರುವುದೇಕೆ?


ಬಹಳವಾಗಿ ಗದರಿಸಿದರೂ ತಗ್ಗದವನು, ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.


ಆಹಾರಕ್ಕೋಸ್ಕರ ಪರಿಹಾಸ್ಯಮಾಡುವ ಮೂರ್ಖರ ಸಂಗಡ, ನನ್ನ ಮೇಲೆ ಹಲ್ಲುಕಡಿಯುತ್ತಾರೆ.


ಆದರೆ ನಮ್ಮ ಪೂರ್ವಿಕರು ಪರಲೋಕದೇವರನ್ನು ರೇಗಿಸಿದ್ದರಿಂದ ಆತನು ಅವರನ್ನು ಬಾಬಿಲೋನಿನ ಕಸ್ದೀಯ ರಾಜನಾದ ನೆಬೂಕದ್ನೆಚ್ಚರನ ಕೈಗೆ ಒಪ್ಪಿಸಿಕೊಟ್ಟನು. ಅವನು ಈ ಆಲಯವನ್ನು ಹಾಳುಮಾಡಿ ಜನರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ದನು.


ಬೇರೆ ಕೆಲವರು ಅಪಹಾಸ್ಯ, ಕೊರಡೆಯ ಪೆಟ್ಟು, ಬೇಡಿ, ಸೆರೆಮನೆವಾಸಗಳನ್ನು ಅನುಭವಿಸಿದರು.


ಸತ್ತವರು ಎದ್ದುಬರುವ ವಿಷಯವನ್ನು ಕೇಳಿದಾಗ ಕೆಲವರು ಪೌಲನನ್ನು ಅಪಹಾಸ್ಯಮಾಡಿದರು, ಬೇರೆ ಕೆಲವರು; “ನೀನು ಈ ವಿಷಯದಲ್ಲಿ ಹೇಳುವುದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ” ಅಂದರು.


“‘ಎಲೈ, ತಿರಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿಹೋಗಿರಿ. ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಸ್ವಲ್ಪವೂ ನಂಬುವುದಿಲ್ಲ’” ಎಂಬುದೇ ಎಂದು ಹೇಳಿದನು.


ಪ್ರವಾದಿಗಳಲ್ಲಿ ನಿಮ್ಮ ಪೂರ್ವಿಕರು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ.


ಆದರೆ ಬೇರೆ ಕೆಲವರು, “ಇವರು ಮದ್ಯಪಾನ ಮಾಡಿ ಮತ್ತರಾಗಿದ್ದಾರೆಂದು ಹಾಸ್ಯ” ಮಾಡಿದರು.


ಸಿಪಾಯಿಗಳೂ ಆತನನ್ನು ಪರಿಹಾಸ್ಯ ಮಾಡಿದರು. ಅವರು ಯೇಸುವಿನ ಹತ್ತಿರ ಬಂದು ಹುಳಿಮದ್ಯವನ್ನು ನೀಡಿ,


ಕಡೆಗೆ ಹೆರೋದನು ತನ್ನ ಸಿಪಾಯಿಗಳನ್ನು ಕೂಡಿಕೊಂಡು ಯೇಸುವನ್ನು ಅವಮಾನಗೊಳಿಸಿ, ಅಪಹಾಸ್ಯ ಮಾಡಿ ಶೋಭಾಯಮಾನವಾದ ಉಡುಪನ್ನು ಹಾಕಿಸಿ ಪಿಲಾತನ ಬಳಿಗೆ ತಿರುಗಿ ಕಳುಹಿಸಿಕೊಟ್ಟನು.


ಹೇಗೆಂದರೆ, ಅವನನ್ನು ಅನ್ಯಜನರ ಕೈಗೆ ಒಪ್ಪಿಸುವರು, ಅವರು ಅವನನ್ನು ಅಪಹಾಸ್ಯ ಮಾಡುವರು, ಬೈಯುವರು, ಉಗುಳುವರು,


ಫರಿಸಾಯರು ಹಣದಾಸೆಯುಳ್ಳವರಾಗಿದ್ದರಿಂದ ಈ ಮಾತುಗಳನ್ನೆಲ್ಲಾ ಕೇಳಿ ಆತನನ್ನು ಹಾಸ್ಯ ಮಾಡಿದರು.


ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಅವರು ಹೀಗೆಯೇ ಹಿಂಸೆಪಡಿಸಿದರಲ್ಲಾ.


ಆಗ ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದಿಳಿಸಿ ಹಾಕಿಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು; ಅದರೊಳಗೆ ಯೆರೆಮೀಯನು ಸಿಕ್ಕಿಕೊಂಡನು.


ಯೆಹೋವನೇ, ನೀನು ನನ್ನನ್ನು ಮರುಳುಗೊಳಿಸಿದಿ, ನಾನು ಮರುಳಾದೆನು; ನೀನು ನನಗಿಂತ ಬಲಿಷ್ಠನಾಗಿ ಗೆದ್ದುಕೊಂಡಿ; ನಾನು ಹಗಲೆಲ್ಲಾ ಗೇಲಿಗೆ ಗುರಿಯಾಗಿದ್ದೇನೆ, ಎಲ್ಲರೂ ನನ್ನನ್ನು ಅಣಕಿಸುತ್ತಾರೆ.


ಆದುದರಿಂದ, ನಿಮ್ಮ ಬಂಧನಗಳು ಇನ್ನೂ ಬಿಗಿಯಾಗದಂತೆ ಧರ್ಮನಿಂದೆಯನ್ನು ಬಿಡಿರಿ; ಭೂಮಂಡಲದಲ್ಲೆಲ್ಲಾ ನಿಶ್ಚಿತಪ್ರಳಯವಾಗಲಿ ಎಂದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ನುಡಿಯುವುದನ್ನು ಕೇಳಿದ್ದೇನೆ.


ಆದುದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ನೀವು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಚಾಟಿಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.


ಆ ದಿನದಲ್ಲಿ ಸಂತೋಷಿಸಿ, ಕುಣಿದಾಡುವಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು ಎಂದು ತಿಳಿದುಕೊಳ್ಳಿರಿ. ಈ ಜನರ ಪೂರ್ವಿಕರು ಪ್ರವಾದಿಗಳಿಗೂ ಹಾಗೆಯೇ ಮಾಡಿದರು.


ಎಲೀಷನು ಅಲ್ಲಿಂದ ಬೇತೇಲಿಗೆ ಹೊರಟು ಅಲ್ಲಿನ ಗುಡ್ಡವನ್ನು ಹತ್ತುತ್ತಿರುವಾಗ, ಆ ಊರಿನ ಹುಡುಗರು ಹೊರಗೆ ಬಂದು, “ಬೋಳು ಮಂಡೆಯವನೇ ಏರಿ ಬಾ, ಬೋಳು ಮಂಡೆಯವನೇ ಏರಿ ಬಾ” ಎಂದು ಕೂಗಿ ಅವನನ್ನು ಪರಿಹಾಸ್ಯ ಮಾಡಿದರು.


ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವುದಕ್ಕೂ ನಿನ್ನ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದು ಹಾಕಿ ನಿನ್ನನ್ನು ಅಸಡ್ಡೆಮಾಡಿದರು.


ನೀನು ಅನೇಕ ವರ್ಷಗಳ ತನಕ ಅವರ ವಿಷಯದಲ್ಲಿ ತಾಳ್ಮೆಯುಳ್ಳವನಾಗಿ ಪ್ರವಾದಿಗಳ ಮುಖಾಂತರ ಮಾತನಾಡುತ್ತಿದ್ದ ನಿನ್ನ ಆತ್ಮನಿಂದ ಅವರನ್ನು ಎಷ್ಟು ಎಚ್ಚರಿಸುತ್ತಿದ್ದರೂ ಅವರು ಕಿವಿಗೊಡದೆ ಹೋದ ಮೇಲೆ ನೀನು ಅವರನ್ನು ಅನ್ಯದೇಶಗಳವರ ಕೈಗೆ ಒಪ್ಪಿಸಿಬಿಟ್ಟೆ.


ನನ್ನ ದ್ರಾಕ್ಷಿಯ ತೋಟದಲ್ಲಿ ಹಿಂದೆ ನಾನು ಮಾಡಿದ್ದಕ್ಕಿಂತಲೂ ಇನ್ನೂ ಹೆಚ್ಚಾಗಿ ಇನ್ನೇನು ಮಾಡಬೇಕಾಗಿತ್ತು? ಅದು ಒಳ್ಳೆಯ ದ್ರಾಕ್ಷಿಯ ಫಲವನ್ನು ಕೊಡುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಏಕೆ ಕೊಟ್ಟಿತು?


ನೀವೆಲ್ಲರೂ ಕತ್ತಿಗೆ ಬೀಳುವಿರಿ, ನೀವೆಲ್ಲರೂ ಕೊಲೆಗೊಳಗಾಗಿ ಬೀಳುವಿರಿ, ಏಕೆಂದರೆ ನಾನು ಕೂಗಲು ನೀವು ಉತ್ತರಕೊಡಲಿಲ್ಲ. ನಾನು ಹೇಳಿದರೂ ನೀವು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡೆಸಿ, ನನಗೆ ಇಷ್ಟವಿಲ್ಲದ್ದನ್ನು ಆರಿಸಿಕೊಂಡಿರಿ.”


ನನ್ನ ಮಾತುಗಳನ್ನು ಕೇಳದೆ ತಮ್ಮ ಹೃದಯದ ಹಟದಂತೆ ನಡೆದು, ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ ಪೂಜಿಸುತ್ತಿರುವ ಈ ದುಷ್ಟ ಜನರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಮಾನವಾಗಿರುವರು.


ನಾನು ಮಾತನಾಡುವುದೆಲ್ಲಾ ಅರಚಾಟವೇ. “ಬಲಾತ್ಕಾರ, ಕೊಳ್ಳೆ” ಎಂದೇ ಕೂಗಿಕೊಳ್ಳುತ್ತೇನೆ. ನಾನು ಸಾರುವ ಯೆಹೋವನ ವಾಕ್ಯವು ನನ್ನನ್ನು ಜನರ ದೂಷಣೆಗೂ ಪರಿಹಾಸ್ಯಕ್ಕೂ ಗುರಿಮಾಡಿದೆ.


ಯೆಹೋವನು ಇಂತೆನ್ನುತ್ತಾನೆ, “ನಿನ್ನ ಗಾಯವು ಗುಣಹೊಂದುವುದಿಲ್ಲ, ನಿನ್ನ ಬಾಸುಂಡೆಯು ಘೋರವಾಗಿದೆ.


ಅವರು ನನಗೆ ಮುಖಕೊಡದೆ ಬೆನ್ನುಮಾಡಿದ್ದಾರೆ; ನಾನು ಎಡೆಬಿಡದೆ ಅವರಿಗೆ ಬೋಧಿಸುತ್ತಾ ಬಂದರೂ ಅವರು ಉಪದೇಶವನ್ನು ಹೊಂದಲಿಲ್ಲ ಮತ್ತು ನನಗೆ ಕಿವಿಗೊಡಲೇ ಇಲ್ಲ.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನನ್ನ ಉಗ್ರರೋಷಾಗ್ನಿಯು ಯೆರೂಸಲೇಮಿನವರ ಮೇಲೆ ಹೇಗೆ ಸುರಿಯಿತೋ ಹಾಗೆಯೇ ನೀವು ಐಗುಪ್ತದಲ್ಲಿ ಕಾಲಿಟ್ಟ ಕೂಡಲೆ ನನ್ನ ರೋಷಾಗ್ನಿಯು ನಿಮ್ಮ ಮೇಲೆಯೂ ಸುರಿಯುವುದು; ನೀವು ಅಪವಾದ, ವಿಸ್ಮಯ, ಶಾಪ ಮತ್ತು ದೂಷಣೆಗಳಿಗೆ ಗುರಿಯಾಗುವಿರಿ; ಈ ಸ್ಥಳವು ಮತ್ತೆ ನಿಮ್ಮ ಕಣ್ಣಿಗೆ ಬೀಳದು.’”


ನಮ್ಮ ಅರಸರು, ಪ್ರಧಾನರು, ಹಿರಿಯರು, ಸಾಮಾನ್ಯ ಜನರು, ಇವರಿಗೆಲ್ಲ ನಿನ್ನ ಹೆಸರಿನ ನಿಮಿತ್ತ ನುಡಿದ ನಿನ್ನ ಸೇವಕರಾದ ಪ್ರವಾದಿಗಳ ಕಡೆಗೆ ಕಿವಿಗೊಡಲೇ ಇಲ್ಲ.


ನನ್ನ ನಿಯಮಗಳನ್ನು ಬೇಡವೆಂದು ನನ್ನ ವಿಧಿಗಳನ್ನು ತಳ್ಳಿಬಿಟ್ಟರೆ ನೀವು ನನ್ನ ಆಜ್ಞೆಗಳನ್ನು ಅನುಸರಿಸದೆ ನನ್ನ ನಿಬಂಧನೆಯನ್ನು ಮೀರಿ ನಡೆದರೆ,


ಇಸ್ರಾಯೇಲರು ಅವರ ಮಾತನ್ನೂ ಕೇಳದೆ ಅನ್ಯದೇವರುಗಳನ್ನು ಪೂಜಿಸಿ, ಅವುಗಳಿಗೆ ಅಡ್ಡಬಿದ್ದು ದೈವದ್ರೋಹಿಗಳಾದರು. ಯೆಹೋವನ ಆಜ್ಞೆಗಳನ್ನು ಕೈಕೊಳ್ಳುತ್ತಿದ್ದ ತಮ್ಮ ಪೂರ್ವಿಕರ ಮಾರ್ಗವನ್ನು ಬೇಗನೆ ಬಿಟ್ಟುಬಿಟ್ಟರು. ಅವರಂತೆ ನಡೆಯಲೇ ಇಲ್ಲ.


ಆದುದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿಸಿ, ಗಡ್ಡದ ಅರ್ಧ ಭಾಗವನ್ನು ಬೋಳಿಸಿ, ಅವರ ಸೊಂಟದ ಕೆಳಭಾಗದ ನಿಲುವಂಗಿಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು.


ಯೆಹೋವನು ಅವರನ್ನು ತನ್ನ ಕಡೆಗೆ ತಿರುಗಿಸಿಕೊಳ್ಳುವುದಕ್ಕಾಗಿ ಅವರ ಬಳಿಗೆ ಪ್ರವಾದಿಗಳನ್ನು ಕಳುಹಿಸಿದರು. ಅವರ ಮುಖಾಂತರವಾಗಿ ಎಷ್ಟು ಎಚ್ಚರಿಸಿದರೂ ಅವರು ಕಿವಿಗೊಡಲಿಲ್ಲ.


ಯಾರನ್ನು ಗೇಲಿಮಾಡಿ ವಿನೋದಪಡುತ್ತೀರಿ? ಯಾರನ್ನು ನೋಡಿ ಬಾಯಿದೆರೆದು ನಾಲಿಗೆಯನ್ನು ಚಾಚುತ್ತೀರಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು