2 ಪೂರ್ವಕಾಲ ವೃತ್ತಾಂತ 36:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆತನು ಕಸ್ದೀಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ, ಕನ್ಯೆಯರನ್ನೂ, ಮುದುಕರನ್ನೂ, ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಸರ್ವೇಶ್ವರಸ್ವಾಮಿ ಬಾಬಿಲೋನಿಯದ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೊಪ್ಪಿಸಿದರು. ಅವನು ಅವರ ಯುವ ಯೋಧರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿದನು. ಯುವಕರನ್ನು, ಕನ್ಯೆಯರನ್ನು, ವೃದ್ಧರನ್ನು ಹಾಗು ಅತಿವೃದ್ಧರನ್ನು ಕನಿಕರಿಸದೆ ಎಲ್ಲರನ್ನು ಕೊಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆತನು ಕಸ್ದೀಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ ಕನ್ಯೆಯರನ್ನೂ ಮುದುಕರನ್ನೂ ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ನಾಶಮಾಡಲು ಬಾಬಿಲೋನಿನ ಅರಸನನ್ನು ಕಳುಹಿಸಿದನು. ಬಾಬಿಲೋನಿನ ಅರಸನು ದೇವಾಲಯದೊಳಗಿದ್ದ ಯುವಜನರನ್ನು ಕೊಂದುಹಾಕಿದನು. ಅವನಿಗೆ ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಕರುಣೆಯೇ ಇರಲಿಲ್ಲ. ಅವನು ಚಿಕ್ಕವರನ್ನೂ ದೊಡ್ಡವರನ್ನೂ ಗಂಡಸರನ್ನೂ ಹೆಂಗಸರನ್ನೂ ಬಿಡದೆ ಸಂಹರಿಸಿದನು. ರೋಗಿಗಳನ್ನೂ ಆರೋಗ್ಯವಂತರನ್ನೂ ಸಂಹರಿಸಿದನು; ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಶಿಕ್ಷಿಸಲು ದೇವರು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದ್ದರಿಂದ ದೇವರು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದರು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಖಡ್ಗದಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ, ಕನ್ಯಾಸ್ತ್ರೀಯ ಮೇಲಾದರೂ, ಅತಿವೃದ್ಧನ ಮೇಲಾದರೂ ಕನಿಕರಪಡಲಿಲ್ಲ. ದೇವರು ಸಮಸ್ತ ಜನರನ್ನು ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸಿದರು. ಅಧ್ಯಾಯವನ್ನು ನೋಡಿ |