2 ಪೂರ್ವಕಾಲ ವೃತ್ತಾಂತ 36:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಈ ಪ್ರಕಾರ ಯೆರೆಮೀಯನ ಮುಖಾಂತರ ಹೇಳಿಸಿದ ಯೆಹೋವನ ಮಾತು ನೆರವೇರಿತು; ದೇಶವು ತನ್ನ ಸಬ್ಬತ್ ಕಾಲವನ್ನು ಅನುಭವಿಸುವವರೆಗೂ ಸಮಾಧಾನವಾಗಿತ್ತಷ್ಟೇ. ದೇಶವು ಎಪ್ಪತ್ತು ವರ್ಷಗಳು ಪೂರ್ಣವಾಗುವವರೆಗೂ ಅದು ಶೂನ್ಯವಾಗಿದ್ದ ಸಬ್ಬತ್ತನ್ನು ಅನುಭವಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಈ ಪ್ರಕಾರ ಸರ್ವೇಶ್ವರ ಯೆರೆಮೀಯನ ಮುಖಾಂತರ ಹೇಳಿಸಿದ ಮಾತು ನೆರವೇರಿತು; ನಾಡು ತನ್ನ ಸಬ್ಬತ್‍ಕಾಲವನ್ನು ಅನುಭವಿಸುವುದಕ್ಕೆ ಮಾರ್ಗವಾಯಿತು. ಅದು ಎಪ್ಪತ್ತು ವರ್ಷ ಹಾಳುಬಿದ್ದು ಆ ಕಾಲಾವಧಿಯಲ್ಲಿ ವಿಶ್ರಾಂತಿಯನ್ನು ಅನುಭವಿಸುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಈ ಪ್ರಕಾರ ಯೆಹೋವನು ಯೆರೆಮೀಯನ ಮುಖಾಂತರ ಹೇಳಿಸಿದ ಮಾತು ನೆರವೇರಿ ದೇಶವು ತನ್ನ ಸಬ್ಬತ್‍ಕಾಲವನ್ನು ಅನುಭವಿಸುವದಕ್ಕೆ ಮಾರ್ಗವಾಯಿತು. ದೇಶವು ಎಪ್ಪತ್ತು ವರುಷ ಹಾಳುಬಿದ್ದು ಆ ಕಾಲದಲ್ಲೆಲ್ಲಾ ವಿಶ್ರಾಂತಿಯನ್ನು ಅನುಭವಿಸುತ್ತಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಹೀಗೆ ಯೆಹೋವನು ತನ್ನ ಪ್ರವಾದಿಯಾದ ಯೆರೆಮೀಯನ ಮೂಲಕ ಹೇಳಿಸಿದ ಮಾತುಗಳನ್ನು ನೆರವೇರಿಸಿದನು. “ಈ ಸ್ಥಳವು ಎಪ್ಪತ್ತು ವರ್ಷಗಳ ತನಕ ಪಾಳುಬೀಳುವದು. ಜನರು ಆಚರಿಸದೆಹೋದ ಸಬ್ಬತ್ ಹಬ್ಬಗಳಿಗೆ ಅದು ಪರಿಹಾರವಾಗಿರುವುದು” ಎಂದು ಯೆರೆಮೀಯನು ಹೇಳಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಹೀಗೆ ಯೆರೆಮೀಯನ ಮುಖಾಂತರವಾಗಿ ಹೇಳಿಸಿದ ಯೆಹೋವ ದೇವರ ವಾಕ್ಯವು ನೆರವೇರಿತು. ದೇಶವು ಅದರ ಸಬ್ಬತ್ ದಿನಗಳನ್ನು ಅನುಭವಿಸುವುದಕ್ಕೆ ಮಾರ್ಗವಾಯಿತು. ಅದು ಎಪ್ಪತ್ತು ವರ್ಷ ಹಾಳುಬಿದ್ದು, ಆ ಕಾಲಾವಧಿಯಲ್ಲಿ ವಿಶ್ರಾಂತಿಯನ್ನು ಅನುಭವಿಸುತ್ತಾ ಇತ್ತು. ಅಧ್ಯಾಯವನ್ನು ನೋಡಿ |