Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 36:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಪಾರಸಿಯ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪಾರಸಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಪರ್ಷಿಯದ ಅರಸ ಸೈರಸನ ಮೊದಲನೆಯ ವರ್ಷದಲ್ಲಿ ಸರ್ವೇಶ್ವರಸ್ವಾಮಿ ತಾವು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ಕಾರ್ಯಗತ ಮಾಡಿದರು: ಆ ಪರ್ಷಿಯದ ರಾಜ ಕೋರೆಷನ ಮನಸ್ಸನ್ನು ಪ್ರೇರಿಸಿದರು; ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ ಪತ್ರಗಳಿಂದಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಪಾರಸಿಯ ಅರಸನಾದ ಕೋರೆಷನ ಮೊದಲನೆಯ ವರುಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವದಕ್ಕಾಗಿ ಆ ಪಾರಸಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ ಪತ್ರಗಳಿಂದಲೂ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಪಾರಸಿ ರಾಜನಾದ ಕೋರೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಯೆಹೋವನು ಅವನಿಂದ ಒಂದು ವಿಶೇಷ ಪ್ರಕಟನೆಯನ್ನು ಹೊರಡಿಸಿದನು. ಯೆರೆಮೀಯನು ಹೇಳಿದ ಮಾತು ನೆರವೇರುವಂತೆ ಇದಾಯಿತು. ಕೊರೇಷನು ತನ್ನ ಸಾಮ್ರಾಜ್ಯದ ಮೂಲೆಮೂಲೆಗಳಿಗೆ ಜನರನ್ನು ಕಳುಹಿಸಿ ಈ ಸಂದೇಶವನ್ನು ಕೊಟ್ಟನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದರೆ ಪಾರಸಿಯ ಅರಸ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವ ದೇವರು ಯೆರೆಮೀಯನ ಮುಂಖಾತರ ಹೇಳಿದ ವಾಕ್ಯವು ಈಡೇರುವ ಹಾಗೆ ಯೆಹೋವ ದೇವರು ಪಾರಸಿಯ ಅರಸ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ, ಅವನು ತನ್ನ ಸಮಸ್ತ ರಾಜ್ಯದಲ್ಲಿ ಡಂಗುರದಿಂದಲೂ, ಪತ್ರಗಳಿಂದಲೂ ಸಾರಿ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 36:22
24 ತಿಳಿವುಗಳ ಹೋಲಿಕೆ  

ಎಪ್ಪತ್ತು ವರ್ಷಗಳ ತರುವಾಯ ನಾನು ಬಾಬೆಲಿನ ಅರಸನನ್ನೂ, ಕಸ್ದೀಯರ ದೇಶವನ್ನೂ, ಆ ಜನಾಂಗದವರನ್ನೂ ಅವರ ದ್ರೋಹಕ್ಕಾಗಿ ದಂಡಿಸಿ, ಆ ದೇಶವನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ಇದು ಯೆಹೋವನ ನುಡಿ.


ಯೆಹೋವನು ಇಂತೆನ್ನುತ್ತಾನೆ, “ಬಾಬೆಲ್ ರಾಜ್ಯವು ಎಪ್ಪತ್ತು ವರ್ಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಕಟಾಕ್ಷಿಸಿ, ಈ ಸ್ಥಳಕ್ಕೆ ತಿರುಗಿ ಬರಮಾಡುವೆನೆಂಬ ನನ್ನ ಶುಭವಾಕ್ಯವನ್ನು ನಿಮಗಾಗಿ ನೆರವೇರಿಸುವೆನು.


ಕೋರೆಷನ ವಿಷಯವಾಗಿ, ‘ಅವನು ನನ್ನ ಮಂದೆಯನ್ನು ಕಾಯುವವನು, ಯೆರೂಸಲೇಮು ಕಟ್ಟಲ್ಪಡಲಿ, ದೇವಸ್ಥಾನದ ಅಸ್ತಿವಾರವು ಹಾಕಲ್ಪಡಲಿ’ ಎಂದು ಹೇಳಿ, ‘ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸತಕ್ಕವನು’” ಎಂಬುದಾಗಿ ಮಾತನಾಡುವವನು ನಾನೇ.


ಈ ಪ್ರಕಾರ ಯೆರೆಮೀಯನ ಮುಖಾಂತರ ಹೇಳಿಸಿದ ಯೆಹೋವನ ಮಾತು ನೆರವೇರಿತು; ದೇಶವು ತನ್ನ ಸಬ್ಬತ್ ಕಾಲವನ್ನು ಅನುಭವಿಸುವವರೆಗೂ ಸಮಾಧಾನವಾಗಿತ್ತಷ್ಟೇ. ದೇಶವು ಎಪ್ಪತ್ತು ವರ್ಷಗಳು ಪೂರ್ಣವಾಗುವವರೆಗೂ ಅದು ಶೂನ್ಯವಾಗಿದ್ದ ಸಬ್ಬತ್ತನ್ನು ಅನುಭವಿಸಿತು.


ಪಾರಸಿಯ ರಾಜನಾದ ಕೋರೆಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು; ಅದು ಮಹಾಹೊರಾಟದ ಸಂಗತಿ ಸತ್ಯವಾದ ಸಂಗತಿ; ಅವನು ಕಂಡ ಕನಸನ್ನು ಗಮನಿಸಿ ಆ ಸಂಗತಿಯನ್ನು ಮನದಟ್ಟು ಮಾಡಿಕೊಂಡನು.


ಆಗ ಯೆಹೂದ ಮತ್ತು ಬೆನ್ಯಾಮೀನ್ ಗೋತ್ರ ಪ್ರಧಾನರಲ್ಲಿಯೂ, ಯಾಜಕರಲ್ಲಿಯೂ ಮತ್ತು ಲೇವಿಯರಲ್ಲಿಯೂ ದೇವಪ್ರೇರಣೆಗೆ ಒಳಗಾದವರೆಲ್ಲರೂ ಯೆರೂಸಲೇಮಿನಲ್ಲಿ ಯೆಹೋವನಿಗೋಸ್ಕರ ಆಲಯವನ್ನು ಕಟ್ಟುವುದಕ್ಕಾಗಿ ಹೊರಟುಹೋದರು.


ನಾವು ನಮ್ಮ ನಿರೀಕ್ಷೆಯನ್ನು ಕುರಿತು ಮಾಡಿದ ಅರಿಕೆಯನ್ನು ನಿಶ್ಚಂಚಲದಿಂದ ಬಿಗಿಯಾಗಿ ಹಿಡಿಯೋಣ, ಯಾಕೆಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು.


ಕೂಡಲೇ ಶೆಯಲ್ತೀಯೇಲನು ಮಗನೂ, ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಮತ್ತು ಸಮಸ್ತ ಜನರೆಲ್ಲರ ಮನಸ್ಸುಗಳನ್ನು ಸೇನಾಧೀಶ್ವರನಾದ ಯೆಹೋವನು ಪ್ರೇರೇಪಿಸಲು,


ಅನೇಕ ಜನಾಂಗಗಳೂ ಮತ್ತು ಮಹಾರಾಜರೂ ಅವರನ್ನೇ ಅಡಿಯಾಳಾಗಿ ಮಾಡಿಕೊಳ್ಳುವರು; ಅವರ ಕೃತ್ಯಗಳಿಗೂ ಮತ್ತು ಕೈಕೆಲಸಗಳಿಗೂ ತಕ್ಕಂತೆ ಅವರಿಗೆ ಮುಯ್ಯಿತೀರಿಸುವೆನು” ಎಂಬುದೇ.


ಅವರು, “ಸರ್ವಜನರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಬರಬೇಕು” ಎಂಬುದಾಗಿ ಬೇರ್ಷೆಬದಿಂದ ದಾನ್ ವರೆಗೂ ವಾಸಮಾಡುತ್ತಿದ್ದ ಇಸ್ರಾಯೇಲರೊಳಗೆ ಡಂಗುರ ಹೊಡಿಸಬೇಕೆಂದು ನಿರ್ಣಯಿಸಿದರು. ಜನರಲ್ಲಿ ಹೆಚ್ಚು ಮಂದಿ ಆ ವರೆಗೂ ಧರ್ಮಶಾಸ್ತ್ರವಿಧಿಯ ಪ್ರಕಾರ ಪಸ್ಕಹಬ್ಬವನ್ನು ಆಚರಿಸಿರಲಿಲ್ಲ.


ದೇವರ ಸೇವಕನಾದ ಮೋಶೆಯು ಅರಣ್ಯದಲ್ಲಿ ವಿಧಿಸಿದಂತೆ, ಇಸ್ರಾಯೇಲರು ಯೆಹೋವನಿಗೋಸ್ಕರ ಕೊಡಬೇಕಾದ ಕಾಣಿಕೆಯನ್ನು ತಂದು ಕೊಡಬೇಕು ಎಂಬುದಾಗಿ ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ ಪ್ರಕಟಿಸಿದನು.


ಯೆಹೋವನು ಫಿಲಿಷ್ಟಿಯರನ್ನೂ, ಕೂಷ್ಯರ ನೆರೆಯವರಾದ ಅರಬಿಯರನ್ನೂ ಯೆಹೋರಾಮನಿಗೆ ವಿರೋಧಿಗಳಾಗುವಂತೆ ಪ್ರಚೋದಿಸಿದನು.


ಆದುದರಿಂದ ಅಶ್ಶೂರದ ಅರಸನಾದ ಪೂಲ್, ತಿಗ್ಲತ್ಪಿಲೆಸರ್ ಎಂಬವರು ಇಸ್ರಾಯೇಲ್ ದೇವರ ಪ್ರೇರಣೆಯಿಂದ ಬಂದು ರೂಬೇನ್ಯರು, ಗಾದ್ಯರು, ಮನಸ್ಸೆ ಕುಲದ ಅರ್ಧ ಜನರು ಇವರನ್ನು ಹಲಹ, ಹಾಬೋರ್, ಹಾರ ಎಂಬ ಪ್ರಾಂತ್ಯಗಳಿಗೂ, ಗೋಜಾನ್ ನದಿಯ ಪ್ರದೇಶಗಳಿಗೂ ಸೆರೆ ಹಿಡಿದು ಕರೆದೊಯ್ದರು. ಅವರು ಇಂದಿನವರೆಗೂ ಅಲ್ಲಿಯೇ ನೆಲೆಸುವಂತೆ ದೇವರು ಮಾಡಿದ್ದಾನೆ .


ದೇವರು ಸೊಲೊಮೋನನಿಗೆ ವಿರೋಧವಾಗಿ ಎಬ್ಬಿಸಿದ ಎರಡನೆಯ ವೈರಿಯು ಎಲ್ಯಾದಾವನ ಮಗನಾದ ರೆಜೋನ್ ಎಂಬುವನು.


ಯೆಹೋವನು ಎದೋಮ್ಯನೂ, ರಾಜಪುತ್ರನೂ ಆದ ಹದದನನ್ನು ಸೊಲೊಮೋನನಿಗೆ ವಿರುದ್ಧವಾಗಿ ಎಬ್ಬಿಸಿದನು.


ಯಾವ ಪಾಪಕ್ಕೆ ಕೈಹಾಕಿದೆನು? ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ, ಆತನಿಗೆ ಘಮಘಮಿಸುವ ನೈವೇದ್ಯವನ್ನು ಅಂಗೀಕರಿಸಬೇಕು. ಮನುಷ್ಯರಾಗಿದ್ದರೆ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ ಯಾಕೆಂದರೆ ಯೆಹೋವನ ಸ್ವತ್ತಿನಲ್ಲಿ ನನಗೆ ಪಾಲು ಸಿಕ್ಕದಂತೆ ‘ಹೋಗಿ ಅನ್ಯದೇವತೆಗಳನ್ನು ಸೇವಿಸು’ ಎಂದು ನನ್ನನ್ನು ತಳ್ಳಿಬಿಟ್ಟರು.


ಪಾರಸಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ, “ಪರಲೋಕದ ದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನು ಒಪ್ಪಿಸಿ, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಬೇಕೆಂದು ಆಜ್ಞಾಪಿಸಿದ್ದಾನೆ. ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ ಅವರು ಸ್ವದೇಶಕ್ಕೆ ಪ್ರಯಾಣ ಬೆಳೆಸಲಿ; ಅವರ ದೇವರಾದ ಯೆಹೋವನು ಅವರ ಸಂಗಡ ಇರುವನು” ಎಂದು ಪ್ರಕಟಿಸಿದನು.


ನಾನು ಕೋರೆಷನನ್ನು ಧರ್ಮೋದ್ದೇಶದಿಂದ ಉನ್ನತಿಗೆ ತಂದು ನೇಮಿಸಿದ್ದೇನೆ. ಅವನ ಮಾರ್ಗಗಳನ್ನೆಲ್ಲಾ ಸರಾಗಮಾಡುವೆನು. ಅವನು ನನ್ನ ಪಟ್ಟಣವನ್ನು ತಿರುಗಿ ಕಟ್ಟಿ ಕ್ರಯವನ್ನಾಗಲೀ, ಬಹುಮಾನವನ್ನಾಗಲೀ ಕೇಳಿಕೊಳ್ಳದೆ ಸೆರೆಯಾದ ನನ್ನ ಜನರನ್ನು ಬಿಡುಗಡೆ ಮಾಡುವೆನು’” ಎಂದು ಸೇನಾಧೀಶ್ವರನಾದ ಯೆಹೋವನು ಹೇಳುತ್ತಾನೆ.


ಈ ದಾನಿಯೇಲನು ದಾರ್ಯಾವೆಷನ ಆಳ್ವಿಕೆಯಲ್ಲಿಯೂ, ಪಾರಸಿಯನಾದ ಕೋರೆಷನ ಆಳ್ವಿಕೆಯಲ್ಲಿಯೂ ಸನ್ಮಾನ, ಗೌರವಗಳಿಂದ ಬಾಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು