Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 36:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋಯಾಕೀಮನು ಅರಸನಾದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ಅವನು ತನ್ನ ದೇವರಾದ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಯೆಹೋಯಾಕೀಮನು ಅರಸನಾದಾಗ ಅವನಿಗೆ ಇಪ್ಪತ್ತೈದು ವರ್ಷ ವಯಸ್ಸು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನು ತನ್ನ ದೇವರಾದ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋಯಾಕೀಮನು ಅರಸನಾದಾಗ ಇಪ್ಪತ್ತೈದು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಹನ್ನೊಂದು ವರುಷ ಆಳಿದನು. ಅವನು ತನ್ನ ದೇವರಾದ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋಯಾಕೀಮನು ಯೆಹೂದ ದೇಶದ ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷ ಪ್ರಾಯದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಯೆಹೋಯಾಕೀಮನು ಯೆಹೋವನ ಚಿತ್ತಕ್ಕೆ ಒಳಗಾಗಲಿಲ್ಲ. ಅವನು ತನ್ನ ದೇವರಾದ ಯೆಹೋವನ ವಿರುದ್ಧವಾಗಿ ಪಾಪಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋಯಾಕೀಮನು ಅರಸನಾದಾಗ ಇಪ್ಪತ್ತೈದು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಆದರೆ ತನ್ನ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 36:5
11 ತಿಳಿವುಗಳ ಹೋಲಿಕೆ  

ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ ಯೆಹೋವನಿಂದ ಯೆರೆಮೀಯನಿಗೆ ಈ ಅಪ್ಪಣೆಯಾಯಿತು.


ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಯೆಹೋವನು ಯೆರೆಮೀಯನಿಗೆ,


ಯೋಷೀಯನ ಮಗನೂ, ಯೆಹೂದದ ಅರಸನೂ ಆದ ಯೆಹೋಯಾಕೀಮನ ಕಾಲದಲ್ಲಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ,


ಇದಲ್ಲದೆ ಯೆಹೂದದ ಅರಸನೂ, ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಯೆಹೂದದ ಅರಸನೂ, ಯೋಷೀಯನ ಮಗನೂ ಆದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರ್ಷದ ಐದನೆಯ ತಿಂಗಳಿನಲ್ಲಿ ಯೆರೂಸಲೇಮಿನವರು ಸೆರೆಹೋಗುವ ತನಕ ಅವನು ಯೆಹೋವನ ವಾಕ್ಯವನ್ನು ಹೊಂದುತ್ತಾ ಇದ್ದನು.


ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ನೇರೀಯನ ಮಗನಾದ ಬಾರೂಕನು ಯೆರೆಮೀಯನ ಮಾತುಗಳನ್ನು ಅವನ ಬಾಯಿಂದ ಬಂದ ಹಾಗೆಯೇ ಪುಸ್ತಕದಲ್ಲಿ ಬರೆದಾಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಅಪ್ಪಣೆಯ ಪ್ರಕಾರ ಈ ವಾಕ್ಯವನ್ನು ಅವನಿಗೆ ಹೇಳಿದನು.


ಯೆಹೂದದ ಅರಸನಾದ ಯೆಹೋಯಾಕೀಮನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬಾಬೆಲಿನ ರಾಜನಾದ ನೆಬೂಕದ್ನೆಚ್ಚರನು ಯೆರೂಸಲೇಮಿಗೆ ಬಂದು ಮುತ್ತಿಗೆ ಹಾಕಿದನು.


ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನೂ, ದೇವಾಲಯದ ಅನೇಕ ಪಾತ್ರೆಗಳನ್ನೂ ಅವನ ವಶಕ್ಕೆ ಕೊಡಲು ಅವನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ ತನ್ನ ದೇವರ ಮಂದಿರಕ್ಕೆ ತಂದು ಆ ದೇವರ ಭಂಡಾರದಲ್ಲಿ ಸೇರಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು