Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 4:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಸೊಲೊಮೋನನು ಒಂದು ಕಂಚಿನ ಕಡಲು ಎಂಬ ಪಾತ್ರೆಯನ್ನು ಮಾಡಿಸಿದನು. ಅದು ಚಕ್ರಾಕಾರವಾಗಿ ಅಂಚಿನಿಂದ ಅಂಚಿಗೆ ಹತ್ತು ಮೊಳವಾಗಿಯೂ ಇತ್ತು. ಅದರ ಎತ್ತರವು ಐದು ಮೊಳವಾಗಿಯೂ, ಸುತ್ತಳತೆ ಮೂವತ್ತು ಮೊಳ ನೂಲಳತೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅನಂತರ ಅವನು ‘ಕಂಚಿನ ಕಡಲು’ ಎನಿಸಿಕೊಳ್ಳುವ ಎರಕದ ಒಂದು ದೊಡ್ಡ ಪಾತ್ರೆಯನ್ನು ಮಾಡಿಸಿದನು. ಅದರ ಬಾಯಿ ಚಕ್ರಾಕಾರವಾಗಿಯೂ ಅಂಚಿನಿಂದ ಅಂಚಿಗೆ 4:4 ಮೀಟರ್ ಇತ್ತು. ಅದರ ಎತ್ತರ 2:2 ಮೀಟರ್, ಸುತ್ತಳತೆ 13:2 ಮೀಟರ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅನಂತರ ಅವನು ಸಮುದ್ರವೆನಿಸಿಕೊಳ್ಳುವ ಒಂದು ಎರಕದ ಪಾತ್ರೆಯನ್ನು ಮಾಡಿಸಿದನು. ಅದರ ಬಾಯಿ ಚಕ್ರಾಕಾರವಾಗಿಯೂ ಅಂಚಿನಿಂದ ಅಂಚಿಗೆ ಹತ್ತು ಮೊಳವಾಗಿಯೂ ಇತ್ತು. ಅದರ ಎತ್ತರ ಐದು ಮೊಳ, ಸುತ್ತಳತೆ ಮೂವತ್ತು ಮೊಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವನು ಎರಕಹೊಯ್ದ ದೊಡ್ಡ ಗಾತ್ರದ ನೀರಿನ ಪಾತ್ರೆಯನ್ನು ಮಾಡಿಸಿದನು. ಇದು ದುಂಡಾಕಾರವಾಗಿದ್ದು ಅದರ ಬಾಯಿಯ ಅಂಚಿನಿಂದ ಅಂಚಿಗೆ ಹತ್ತು ಮೊಳ ಅಗಲವಿತ್ತು; ಅದರ ಸುತ್ತಳತೆ ಮೂವತ್ತು ಮೊಳ; ಎತ್ತರ ಐದು ಮೊಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅನಂತರ ಅವನು ಸಮುದ್ರಪಾತ್ರೆ ಎಂದು ಕರೆಯಲಾಗುವ ಎರಕದ ದೊಡ್ಡ ಪಾತ್ರೆಯನ್ನು ಮಾಡಿಸಿದನು; ಅದು ಚಕ್ರಾಕಾರವಾಗಿ ಅಂಚಿನಿಂದ ಅಂಚಿಗೆ ಸುಮಾರು ನಾಲ್ಕು ಮೀಟರ್; ಅದರ ಎತ್ತರ ಸುಮಾರು ಎರಡು ಮೀಟರ್; ಸುತ್ತಳತೆ ಸುಮಾರು ಹದಿನಾಲ್ಕು ಮೀಟರಾಗಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 4:2
10 ತಿಳಿವುಗಳ ಹೋಲಿಕೆ  

ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.


ನಾವು ಮಾಡಿದ ಪುಣ್ಯಕಾರ್ಯಗಳ ನಿಮಿತ್ತದಿಂದಲ್ಲ ಪುನರ್ಜನ್ಮವನ್ನು ಸೂಚಿಸುವ ದೀಕ್ಷಾಸ್ನಾನದ ಮೂಲಕವಾಗಿಯೂ, ಪವಿತ್ರಾತ್ಮನ ನವೀಕರಣದ ಮೂಲಕವಾಗಿಯೂ ಆತನು ತನ್ನ ಕರುಣೆಯಿಂದಲೇ ನಮ್ಮನ್ನು ರಕ್ಷಿಸಿದನು.


ಆ ದಿನದಲ್ಲಿ ಪಾಪವನ್ನೂ, ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ, ಯೆರೂಸಲೇಮಿನವರಿಗೂ ತೆರೆದಿರುವುದು.


ಕಸ್ದೀಯರು ಯೆಹೋವನ ಆಲಯದಲ್ಲಿದ್ದ ತಾಮ್ರದ ಕಂಬಗಳನ್ನು, ಪೀಠಗಳನ್ನೂ, ಕಡಲಿನ ಆಕಾರದ ಪಾತ್ರೆಯನ್ನೂ ಒಡೆದು ಅವುಗಳ ತಾಮ್ರವನ್ನೂ ಬಾಬಿಲೋನಿಗೆ ತೆಗೆದುಕೊಂಡು ಹೋದರು.


ಅದರ ಕೆಳಭಾಗದಲ್ಲಿ ಅದರ ಸುತ್ತಲೂ ಎತ್ತುಗಳ ರೂಪಗಳಿದ್ದವು. ಅವು ಒಂದೊಂದು ಮೊಳಕ್ಕೆ ಹತ್ತರಂತೆ ಆ ಕೊಳದ ಪಾತ್ರೆಯ ಸುತ್ತಲೂ ಇದ್ದವು. ಇದು ಎರಕ ಹೊಯ್ಯಲ್ಪಡುವಾಗ ಎತ್ತುಗಳ ರೂಪ ಎರಡು ಸಾಲಾಗಿ ಎರಕ ಹೊಯ್ಯಲ್ಪಟ್ಟಿದ್ದವು.


ಯಜ್ಞವೇದಿಯ ಉಪಕರಣಗಳನ್ನೆಲ್ಲಾ ಅಂದರೆ ಅದರ ಬಟ್ಟಲುಗಳು, ಸಲಿಕೆಗಳು, ತೊಟ್ಟಿಗಳು, ಮುಳ್ಳುಚಮಚಗಳು, ಅಗ್ಗಿಷ್ಟಿಕೆಗಳು ಇವುಗಳನ್ನೆಲ್ಲಾ ತಾಮ್ರದಿಂದ ಮಾಡಿದನು.


ದೇವದರ್ಶನದ ಗುಡಾರದ ಬಾಗಿಲಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರು ಕೊಟ್ಟ ದರ್ಪಣಗಳಿಂದ ತಾಮ್ರದ ತೊಟ್ಟಿಯನ್ನೂ, ಅದರ ಪೀಠವನ್ನೂ ಮಾಡಿಸಿದನು.


ಇದಲ್ಲದೆ ದಾವೀದನು ಹದರೆಜರನ ಟಿಭತ್ ಮತ್ತು ಕೂನ್ ಎಂಬ ಪಟ್ಟಣಗಳಿಂದ ಬಹಳ ತಾಮ್ರವನ್ನು ತೆಗೆದುಕೊಂಡು ಹೋದನು. ಸೊಲೊಮೋನನು ಆ ತಾಮ್ರದಿಂದ ಕಂಚಿನ ಕಡಲೆಂಬ ಪಾತ್ರೆಯನ್ನೂ, ಕಂಬಗಳನ್ನೂ ಮತ್ತು ಬೇರೆ ಸಾಮಾನುಗಳನ್ನು ಇದೇ ತಾಮ್ರದಿಂದ ಮಾಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು