2 ಪೂರ್ವಕಾಲ ವೃತ್ತಾಂತ 4:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇದಲ್ಲದೆ ಅವನು ಹತ್ತು ಬೋಗುಣಿಗಳನ್ನು ಮಾಡಿಸಿ, ಅವುಗಳಲ್ಲಿ ಸರ್ವಾಂಗಹೋಮ ಸಮರ್ಪಣೆಯ ಸಾಮಾನುಗಳನ್ನು ತೊಳೆದು ಶುದ್ಧ ಮಾಡುವುದಕ್ಕಾಗಿ ಐದನ್ನು ಬಲಗಡೆಯಲ್ಲಿಯೂ, ಐದನ್ನು ಎಡಗಡೆಯಲ್ಲಿಯೂ ಇರಿಸಿದನು. ಆದರೆ ಆ ಕಡಲಿನೊಳಗಿನ ನೀರು ಯಾಜಕರ ಸ್ನಾನಮಾಡಿ ತಮ್ಮನ್ನು ಶುದ್ಧಮಾಡಿಕೊಳ್ಳುವುದಕ್ಕಾಗಿ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಇದಲ್ಲದೆ ಅವನು ಹತ್ತು ನೀರಿನ ಬಾನೆಗಳನ್ನು ಮಾಡಿಸಿ ದಹನಬಲಿ ಸಮರ್ಪಣೆಯ ಸಾಮಾನುಗಳನ್ನು ತೊಳೆದು ಶುದ್ಧಮಾಡುವುದಕ್ಕಾಗಿ ಐದನ್ನು ಬಲಗಡೆಯಲ್ಲಿಯೂ ಐದನ್ನು ಎಡಗಡೆಯಲ್ಲಿಯೂ ಇಡಿಸಿದನು; ಕಡಲು ಎನಿಸಿಕೊಳ್ಳುವ ಪಾತ್ರೆ ಯಾಜಕರ ಸ್ನಾನಕ್ಕಾಗಿ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇದಲ್ಲದೆ ಅವನು ಹತ್ತು ಗಂಗಾಳಗಳನ್ನು ಮಾಡಿಸಿ ಸರ್ವಾಂಗಹೋಮಸಮರ್ಪಣೆಯ ಸಾಮಾನು ತೊಳೆದು ಶುದ್ಧಮಾಡುವದಕ್ಕಾಗಿ ಐದನ್ನು ಬಲಗಡೆಯಲ್ಲಿಯೂ ಐದನ್ನು ಎಡಗಡೆಯಲ್ಲಿಯೂ ಇಡಿಸಿದನು; ಸಮುದ್ರವೆನಿಸಿಕೊಳ್ಳುವ ಪಾತ್ರೆಯು ಯಾಜಕರ ಸ್ನಾನಕ್ಕಾಗಿ ಇತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಸೊಲೊಮೋನನು ಹತ್ತು ಗಂಗಾಳಗಳನ್ನು ಮಾಡಿಸಿದನು. ಐದು ಗಂಗಾಳಗಳನ್ನು ತಾಮ್ರದ ನೀರಿನ ತೊಟ್ಟಿಯ ಬಲಗಡೆಯಲ್ಲಿಡಿಸಿದನು. ಉಳಿದ ಐದು ಗಂಗಾಳಗಳನ್ನು ಪಾತ್ರೆಯ ಎಡಗಡೆಯಲ್ಲಿಡಿಸಿದನು. ಈ ಗಂಗಾಳಗಳ ನೀರನ್ನು ಯಜ್ಞ ಮಾಡಲಿಕ್ಕಿರುವ ಪದಾರ್ಥಗಳನ್ನು ತೊಳೆಯುವದಕ್ಕಾಗಿ ಉಪಯೋಗಿಸಿದರು. ಯಾಜಕರು ಯಜ್ಞಗಳನ್ನು ಅರ್ಪಿಸುವ ಮೊದಲು ತಮ್ಮನ್ನು ಶುದ್ಧ ಮಾಡಿಕೊಳ್ಳುವದಕ್ಕಾಗಿ ದೊಡ್ಡ ತಾಮ್ರದ ಪಾತ್ರೆಯ ನೀರನ್ನು ಉಪಯೋಗಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಇದಲ್ಲದೆ ಹತ್ತು ತೊಟ್ಟಿಗಳನ್ನು ಮಾಡಿಸಿ, ಅವುಗಳಲ್ಲಿ ತೊಳೆಯುವ ನಿಮಿತ್ತವಾಗಿ ಬಲಗಡೆಯಲ್ಲಿ ಐದನ್ನೂ, ಎಡಗಡೆಯಲ್ಲಿ ಐದನ್ನೂ ಇರಿಸಿದನು. ದಹನಬಲಿಗೋಸ್ಕರ ಅರ್ಪಿಸುವವುಗಳನ್ನು ಅವುಗಳಲ್ಲಿ ತೊಳೆಯುತ್ತಿದ್ದರು. ಆದರೆ ಆ ಕೊಳವು ಯಾಜಕರು ತೊಳೆದುಕೊಳ್ಳುವುದಕ್ಕೆ ಇತ್ತು. ಅಧ್ಯಾಯವನ್ನು ನೋಡಿ |