Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 4:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವನು ಬಂಗಾರದ ಹತ್ತು ದೀಪಸ್ತಂಭಗಳನ್ನು ಮಾಡಿಸಿ ಐದನ್ನು ದೇವಾಲಯದೊಳಗೆ ಬಲಗಡೆಯಲ್ಲಿ, ಐದನ್ನು, ಎಡಗಡೆಯಲ್ಲಿಯೂ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅದೂ ಅಲ್ಲದೆ ನೇಮಕವಾದ ಮಾದರಿಯಂತೆ ಬಂಗಾರದ ಹತ್ತು ದೀಪಸ್ತಂಭಗಳನ್ನು ಮಾಡಿಸಿ, ಐದನ್ನು ದೇವಾಲಯದೊಳಗೆ ಬಲಗಡೆಯಲ್ಲೂ ಐದನ್ನು ಎಡಗಡೆಯಲ್ಲೂ ಇಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಮತ್ತು ನೇಮಕವಾದ ಮಾದರಿಯಂತೆ ಬಂಗಾರದ ಹತ್ತು ದೀಪಸ್ತಂಭಗಳನ್ನು ಮಾಡಿಸಿ ಐದನ್ನು ದೇವಾಲಯದೊಳಗೆ ಬಲಗಡೆಯಲ್ಲಿಯೂ ಐದನ್ನು ಎಡಗಡೆಯಲ್ಲಿಯೂ ಇಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸೊಲೊಮೋನನು ಹತ್ತು ದೀಪಸ್ತಂಭಗಳನ್ನು ಬಂಗಾರದಿಂದ ಮಾಡಿಸಿದನು. ಮೊದಲೇ ತೋರಿಸಿದ ಮಾದರಿಯ ಮೇರೆಗೆ ದೀಪಸ್ತಂಭಗಳನ್ನು ಮಾಡಿಸಿದನು. ಇವುಗಳಲ್ಲಿ ಐದನ್ನು ದೇವಾಲಯದೊಳಗೆ ಬಲಗಡೆಯಲ್ಲಿಯೂ ಐದನ್ನು ಎಡಗಡೆಯಲ್ಲಿಯೂ ಇಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವುಗಳ ಮಾದರಿಯ ಪ್ರಕಾರವಾಗಿ ಹತ್ತು ಬಂಗಾರದ ದೀಪಸ್ತಂಭಗಳನ್ನು ಮಾಡಿಸಿ, ಮಂದಿರದಲ್ಲಿ ಬಲಗಡೆ ಐದನ್ನೂ, ಎಡಗಡೆ ಐದನ್ನೂ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 4:7
13 ತಿಳಿವುಗಳ ಹೋಲಿಕೆ  

ಮಹಾಪರಿಶುದ್ಧಸ್ಥಳದ ಎದುರಿಗೆ ಎಡಗಡೆಯಲ್ಲಿಯೂ, ಬಲಗಡೆಯಲ್ಲಿಯೂ ಇಡುವುದಕ್ಕಾಗಿ ಐದೈದರಂತೆ ಇಡುವುದಕ್ಕೋಸ್ಕರ ಚೊಕ್ಕ ಬಂಗಾರದಿಂದ ಮಾಡಿದ ಪುಷ್ಪಾಲಂಕಾರವುಳ್ಳ ಹತ್ತು ದೀಪಸ್ತಂಭಗಳು, ಬಂಗಾರದ ಹಣತೆ, ಇಕ್ಕಳಗಳು, ಚೊಕ್ಕ ಬಂಗಾರದ ಬಟ್ಟಲುಗಳು,


ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, “ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ, ಆದರೆ ಅವನು ಜೀವದ ಬೆಳಕನ್ನು ಹೊಂದಿರುವನು” ಎಂದು ಹೇಳಿದನು.


ಇವನು ಯೆಹೋವನ ಆಲಯದ ಅಂಗಳಗಳು, ಸುತ್ತಣ ಕೋಣೆಗಳು, ದೇವಾಲಯದ ಭಂಡಾರಗಳು, ಪ್ರತಿಷ್ಠಿತ ವಸ್ತುಗಳು, ಭಂಡಾರಗಳು ಇವುಗಳ ವಿಷಯವಾಗಿಯೂ,


ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಗೂಢಾರ್ಥವನ್ನು ವಿವರಿಸುತ್ತೇನೆ. ಆ ಏಳು ನಕ್ಷತ್ರಗಳು ಅಂದರೆ ಏಳು ಸಭೆಗಳ ದೂತರು, ಆ ಏಳು ದೀಪಸ್ತಂಭಗಳು ಅಂದರೆ ಆ ಏಳು ಸಭೆಗಳು.”


ಮೋಶೆಯು ಗುಡಾರವನ್ನು ಕಟ್ಟುವುದಕ್ಕಿದ್ದಾಗ, “ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇಕು” ಎಂದು ದೇವರಿಂದ ಎಚ್ಚರಿಸಲ್ಪಟ್ಟಂತೆಯೇ ಪರಲೋಕದಲ್ಲಿರುವವುಗಳ ಪ್ರತಿರೂಪವೂ, ಛಾಯೆಯೂ ಆಗಿರುವ ಆಲಯದಲ್ಲಿ ಅವರು ಸೇವೆ ಸಲ್ಲಿಸುತ್ತಿದ್ದಾರೆ.


ಆ ನಕ್ಷೆಯಲ್ಲಿ ಸೂಚಿಸಿದ ಎಲ್ಲಾ ಕೆಲಸಗಳ ವಿವರವಾದ ಜ್ಞಾನವು ತನಗೆ ಯೆಹೋವನು ಸೂಚಿಸಿದಂತೆ ಪ್ರಾಪ್ತವಾಯಿತೆಂದು ಹೇಳಿದನು.


ಇದಲ್ಲದೆ ಆರಾಧನೆಯ ಆಯಾ ಆಚಾರಗಳಲ್ಲಿ ಉಪಯೋಗವಾಗಬೇಕಾದ ಎಲ್ಲಾ ಸಾಮಾನುಗಳ ಬೆಳ್ಳಿ ಬಂಗಾರದ ತೂಕ, ಅಂದರೆ ಬಂಗಾರದ ಹಣತೆಗಳಿರುವ ಬಂಗಾರದ ಪ್ರತಿಯೊಂದು ದೀಪಸ್ತಂಭದ ತೂಕ, ಬೇರೆ ಬೇರೆ ಕೆಲಸಗಳಿಗೆ ಉಪಯೋಗವಾಗುವ ಪ್ರತಿಯೊಂದು ಬೆಳ್ಳಿಯ ದೀಪಸ್ತಂಭದ ಮತ್ತು ಅದರ ಹಣತೆಗಳ ತೂಕ,


ಐದು ಪೀಠಗಳನ್ನು ದೇವಾಲಯದ ಬಲಗಡೆಯಲ್ಲಿಯೂ, ಐದು ಪೀಠಗಳನ್ನು ಎಡಗಡೆಯಲ್ಲಿಯೂ ಇಟ್ಟನು. ಸಮುದ್ರವೆನಿಸಿಕೊಳ್ಳುವ ಪಾತ್ರೆಯನ್ನು ದೇವಾಲಯದ ಬಲಗಡೆಯಲ್ಲಿ ಅಂದರೆ ಪ್ರಾಕಾರದ ಆಗ್ನೇಯ ದಿಕ್ಕಿನಲ್ಲಿರಿಸಿದನು.


ಇವುಗಳ ವಿಷಯವಾಗಿ ಪವಿತ್ರಾತ್ಮನು ತನ್ನ ಮನಸ್ಸಿನಲ್ಲಿ ಕೊಟ್ಟಿದ್ದ ಯೋಜನೆಗಳನ್ನು ವಿವರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು