Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 5:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದಕೂಡಲೆ ಏಕ ಸ್ವರದಿಂದ ಸ್ವರವೆತ್ತಿ ಯೆಹೋವನನ್ನು ಕೀರ್ತಿಸುವುದಕ್ಕಾಗಿ ತುತ್ತೂರಿ ಊದುವವರೂ ಗಾಯನ ಮಾಡುವವರೂ ಅಲ್ಲಿ ನಿಂತಿದ್ದರು. ತುತ್ತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿಯೊಡನೆ ಹೀಗೆ ಹಾಡಿದರು, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿರುವುದು” ಎಂದು ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡುವವರ ಸ್ವರವೂ ಕೇಳಿಸಿದೊಡನೆ, ಮೇಘವು ಯೆಹೋವನ ಆಲಯದಲ್ಲಿ ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದ ಕೂಡಲೆ ಒಕ್ಕೊರಲಿನಿಂದ ಸ್ವರವೆತ್ತಿ ಸರ್ವೇಶ್ವರನನ್ನು ಕೀರ್ತಿಸುವುದಕ್ಕಾಗಿ, ತುತೂರಿ ಊದುವವರೂ ಗಾಯನಮಾಡುವವರೂ ಅಲ್ಲಿ ನಿಂತಿದ್ದರು. ತುತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿ ಹಾಗೂ ‘ಸರ್ವೇಶ್ವರ ಒಳ್ಳೆಯವರು, ಅವರ ಅಚಲ ಪ್ರೀತಿ ಶಾಶ್ವತವಾದುದು’ ಎಂದು ಕೃತಜ್ಞತಾಸ್ತುತಿ ಮಾಡುವವರ ಸ್ವರ ಕೇಳಿಸಿದೊಡನೆ ಮೇಘವೊಂದು ಸರ್ವೇಶ್ವರನ ಆಲಯದಲ್ಲಿ ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 [ಮಂಜೂಷವನ್ನು ಒಳಗಿಟ್ಟ] ಯಾಜಕರು ದೇವಾಲಯದಿಂದ ಹೊರಗೆ ಬಂದಕೂಡಲೆ ಒಬ್ಬನೋ ಎಂಬಂತೆ ಸ್ವರವೆತ್ತಿ ಯೆಹೋವನನ್ನು ಕೀರ್ತಿಸುವದಕ್ಕಾಗಿ ತುತೂರಿ ಊದುವವರೂ ಗಾಯನ ಮಾಡುವವರೂ ಅಲ್ಲಿ ನಿಂತಿದ್ದರು. ತುತೂರಿ ತಾಳ ಮೊದಲಾದ ವಾದ್ಯಗಳ ಧ್ವನಿಯೂ ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿರುವದು ಎಂದು ಕೃತಜ್ಞತಾಸ್ತುತಿ ಮಾಡುವವರ ಸ್ವರವೂ ಕೇಳಿಸಿದೊಡನೆ ಮೇಘವು ಯೆಹೋವನ ಆಲಯದಲ್ಲಿ ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಗಾಯಕರ ಸ್ವರವೂ ತುತ್ತೂರಿಗಳ ಶಬ್ದವೂ ಒಬ್ಬನದೆಯೋ ಎಂಬಂತೆ ತೋರಿಬಂತು. ಅವರು ದೇವರನ್ನು ಸ್ತುತಿಸಿ ಕೊಂಡಾಡಿದಾಗ ಒಂದೇ ಶಬ್ದವು ಹೊರಟಿತ್ತು. ಅವರು ತಮ್ಮ ತಾಳ, ತಂತಿವಾದ್ಯಗಳನ್ನು ಗಟ್ಟಿಯಾಗಿ ಬಾರಿಸಿದರು. “ಯೆಹೋವನಿಗೆ ಸ್ತೋತ್ರವಾಗಲಿ; ಆತನು ಒಳ್ಳೆಯವನು; ಆತನ ಪ್ರೀತಿಯು ಶಾಶ್ವತವಾದದ್ದು” ಎಂದು ಗಾಯಕರು ಹಾಡಿದರು. ಆಗ ದೇವಾಲಯವು ಯೆಹೋವನ ತೇಜಸ್ಸಿನಿಂದ ಕೂಡಿದ ಮೋಡದಿಂದ ತುಂಬಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ತುತೂರಿ ಊದುವವರೂ, ಸಂಗೀತಗಾರರೂ ಯೆಹೋವ ದೇವರನ್ನು ಕೊಂಡಾಡುತ್ತಾ, ಹೊಗಳುತ್ತಾ ಧ್ವನಿ ಎತ್ತಿ ಸ್ತೋತ್ರ ಮಾಡುವಂತೆ ತುತೂರಿಗಳೂ, ತಾಳಗಳೂ ಮೊದಲಾದ ಗೀತ ವಾದ್ಯಗಳಿಂದ ಕೀರ್ತಿಸಿದರು: “ಯೆಹೋವ ದೇವರು ಒಳ್ಳೆಯವರು, ಅವರ ಕೃಪೆಯು ಯುಗಯುಗಕ್ಕೆ ಇರುವುದು,” ಎಂದು ಯೆಹೋವ ದೇವರನ್ನು ಹೊಗಳುತ್ತಿದ್ದ ಹಾಗೆ, ಯೆಹೋವ ದೇವರ ಆಲಯವು ಮೇಘದಿಂದ ತುಂಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 5:13
32 ತಿಳಿವುಗಳ ಹೋಲಿಕೆ  

ಅವರು ಪರಸ್ಪರ ಹಾಡುತ್ತಾ, ಯೆಹೋವನನ್ನು ಸಂಕೀರ್ತಿಸುತ್ತಾ, “ಆತನು ಒಳ್ಳೆಯವನು; ಆತನ ಕೃಪೆಯು ಇಸ್ರಾಯೇಲರೊಂದಿಗೆ ಶಾಶ್ವತವಾಗಿರುತ್ತದೆ” ಎಂದು ಕೃತಜ್ಞತಾಸ್ತುತಿಮಾಡಿದರು. ಯೆಹೋವನ ಕೀರ್ತನೆ ಕೇಳಿಸಿದ ಕೂಡಲೆ ಯೆಹೋವನ ಆಲಯದ ಅಸ್ತಿವಾರವು ಹಾಕಲ್ಪಟ್ಟಿರುತ್ತದೆಂದು ಜನರೆಲ್ಲರೂ ಉತ್ಸಾಹಧ್ವನಿಯಿಂದ ಜಯಘೋಷ ಮಾಡಿದರು.


ಹರ್ಷಧ್ವನಿ, ಉಲ್ಲಾಸ ಕೋಲಾಹಲ, ವಧೂವರರ ಸ್ವರ ಇವುಗಳು ಕೇಳಿಬರುವವು.”


ಇಸ್ರಾಯೇಲರೆಲ್ಲರೂ ಆಕಾಶದಿಂದ ಬೆಂಕಿ ಕೆಳಗೆ ಇಳಿದು ಬರುವುದನ್ನೂ ಮತ್ತು ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿರುವುದನ್ನು ನೋಡಿದಾಗ, ಜನರು ನೆಲದವರೆಗೆ ಸಾಷ್ಟಾಂಗವೆರಗಿ ಯೆಹೋವನನ್ನು ಆರಾಧಿಸಿ, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾದದ್ದು” ಎಂದು ಕೃತಜ್ಞತಾಸ್ತುತಿ ನಮನ ಮಾಡಿದರು.


ಇಗೋ, ನಿನ್ನ ಕಾವಲುಗಾರರ ಕೂಗು! ಸ್ವರವೆತ್ತಿ ಒಟ್ಟಿಗೆ ಹರ್ಷಧ್ವನಿಗೈಯುತ್ತಾರೆ. ಯೆಹೋವನು ಚೀಯೋನಿಗೆ ತಿರುಗಿ ಬರುವುದನ್ನು ಪ್ರತ್ಯಕ್ಷವಾಗಿ ನೋಡುವರು.


ಯೆಹೋವನು ಒಳ್ಳೆಯವನು; ಆತನ ಕೃಪೆಯು ಯುಗಯುಗಕ್ಕೂ, ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.


ಆ ನಂತರ ಅವನು ಜನರೊಂದಿಗೆ ಸಮಾಲೋಚನೆ ಮಾಡಿ ಯೆಹೋವನನ್ನು ಸ್ತುತಿಸಿ ಹಾಡುವುದಕ್ಕಾಗಿ ಕೆಲವರನ್ನು ಆರಿಸಿಕೊಂಡು ಅವರಿಗೆ, “ಪರಿಶುದ್ಧವಸ್ತ್ರ ಅಲಂಕಾರ ಭೂಷಣದೊಡನೆ ಭಟರ ಮುಂದೆ ಹೋಗುತ್ತಾ, ‘ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ, ಆತನ ಕೃಪೆಯು ಶಾಶ್ವತವಾದದ್ದು’ ಎಂದು ಭಜಿಸಿರಿ” ಎಂಬುದಾಗಿ ಆಜ್ಞಾಪಿಸಿದನು.


ಹೀಗೆ ನೀವು ಏಕಮನಸ್ಸಿನಿಂದ ಒಕ್ಕೊರಳಿನಿಂದ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಕೊಂಡಾಡುವಿರಿ.


ಕ್ರಿಸ್ತನನ್ನು ನಂಬಿದವರ ಹೃದಯವೂ, ಪ್ರಾಣವೂ ಒಂದೇ ಆಗಿತ್ತು. ಯಾರೂ ತಮ್ಮ ಸ್ವತ್ತನ್ನು ತನ್ನದು ಎಂದು ಭಾವಿಸದೆ ಎಲ್ಲರೂ ಅದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು.


ನಾನು ಅವರ ಹಿತವನ್ನೂ, ಅವರ ತರುವಾಯ ಅವರ ಮಕ್ಕಳ ಹಿತವನ್ನೂ ಬಯಸುತ್ತಾ ಅವರು ಸದಾ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರುವಂತೆ ಎಲ್ಲರಿಗೂ ಒಂದೇ ಮನಸ್ಸನ್ನೂ, ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು.


ದೇವರ ಮಹಿಮೆಯಿಂದಲೂ, ಆತನ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ಆ ಆಲಯ ತುಂಬಿತ್ತು. ಆ ಏಳು ಮಂದಿ ದೇವದೂತರ ಕೈಯಲ್ಲಿದ್ದ ಏಳು ಉಪದ್ರವಗಳು ತೀರುವ ತನಕ ಆ ಆಲಯವನ್ನು ಪ್ರವೇಶಿಸುವುದಕ್ಕೆ ಯಾರಿಂದಲೂ ಸಾಧ್ಯವಾಗಲಿಲ್ಲ.


ಯೆಹೋವನಿಗೆ ಸ್ತೋತ್ರ! ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವುದು.


ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವುದು.


ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿದೆ.


ಅಲ್ಲಿಯೇ ನಾನು ಇಸ್ರಾಯೇಲರಿಗೆ ದರ್ಶನವನ್ನು ಕೊಡುವೆನು. ಅಲ್ಲಿ ಕಾಣಿಸುವ ನನ್ನ ತೇಜಸ್ಸಿನಿಂದ ಆ ಸ್ಥಳವು ಪರಿಶುದ್ಧವಾಗಿರುವುದು.


ಯೆಹೋವನ ಮಂಜೂಷದ ಮುಂದೆ ದೇವರಾಧನೆ ನಡಿಸುವುದಕ್ಕೋಸ್ಕರ ದಾವೀದನು ಕೆಲವು ಲೇವಿಯರನ್ನು ನೇಮಿಸಿದನು. ಇಸ್ರಾಯೇಲಿನ ದೇವರಾದ ಯೆಹೋವನನ್ನು ಸ್ತುತಿಸುವುದೂ, ಹಾಡಿ ಹರಸುವುದೂ ಅವರ ಕರ್ತವ್ಯವಾಗಿತ್ತು.


ಸೊಲೊಮೋನನು ಪ್ರಾರ್ಥಿಸುವುದನ್ನು ಮುಗಿಸಿದ ಕೂಡಲೆ, ಆಕಾಶದಿಂದ ಬೆಂಕಿಯು ಬಿದ್ದು ಸರ್ವಾಂಗಹೋಮಗಳನ್ನೂ, ಯಜ್ಞಮಾಂಸವನ್ನೂ ದಹಿಸಿ ಬಿಟ್ಟಿತು, ಯೆಹೋವನ ತೇಜಸ್ಸು ಆಲಯದ ತುಂಬಾ ತುಂಬಿಕೊಂಡಿತು.


ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿದ್ದರಿಂದ ಯಾಜಕರು ಒಳಗೆ ಪ್ರವೇಶಿಸಲಾರದೆ ಹೋದರು.


ಪ್ರತಿಯೊಬ್ಬ ಯಾಜಕನು ತನ್ನ ಸೇವೆಗನುಸಾರವಾಗಿ ನಿಂತರು. ಲೇವಿಯರೂ ಮತ್ತು ದಾವೀದ ರಾಜನು ಯೆಹೋವನ ಗಾಯನ ಸೇವೆಗೋಸ್ಕರ ಮಾಡಿಸಿದ ವಾದ್ಯಗಳನ್ನು ತಮ್ಮ ಕೈಗಳಲ್ಲಿ ಹಿಡಿದುಕೊಂಡು, ದೇವಾರಾಧನೆ ಮಾಡುತ್ತಾ, “ಆತನ ಕೃಪೆಯು ಶಾಶ್ವತವಾದದ್ದು” ಎಂಬುದಾಗಿ ಸ್ತುತಿ ಸಲ್ಲಿಸಿದರು. ಎಲ್ಲಾ ಯಾಜಕರು ಅವರ ಮುಂದೆ ತುತ್ತೂರಿಗಳನ್ನು ಊದಿದರು. ಸಮಸ್ತ ಇಸ್ರಾಯೇಲ್ಯರು ಎದ್ದು ನಿಂತಿದ್ದರು.


ಅವರು ಉತ್ಸಾಹ ಧ್ವನಿಯಿಂದ ಕೀರ್ತಿಸುವುದಕ್ಕೆ ಪ್ರಾರಂಭಿಸಿದರು. ಆಗ ಯೆಹೋವನು ಯೆಹೂದ್ಯರಿಗೆ ವಿರುದ್ಧವಾಗಿ ಬಂದ ಅಮ್ಮೋನಿಯರನ್ನೂ, ಮೋವಾಬ್ಯರನ್ನೂ, ಸೇಯೀರ್ ಪರ್ವತದವರನ್ನೂ ನಾಶಮಾಡುವುದಕ್ಕಾಗಿ ಹೊಂಚು ಹಾಕುವವರನ್ನು ಬರಮಾಡಿದನು.


ಯೆರೂಸಲೇಮಿನ ಪೌಳಿಗೋಡೆಯನ್ನು ಪ್ರತಿಷ್ಠಿಸುವ ಸಮಯ ಬಂದಾಗ ಆಯಾ ಸ್ಥಳಗಳಲ್ಲಿದ್ದ ಲೇವಿಯರನ್ನು, ಕೀರ್ತನೆ ಗಾಯನಗಳಿಂದಲೂ ತಾಳ, ಸ್ವರಮಂಡಲ ಹಾಗು ಕಿನ್ನರಿ ಇವುಗಳಿಂದಲೂ ಪ್ರತಿಷ್ಠೆಯ ಉತ್ಸವವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಕರೆಸಿಕೊಂಡರು.


ನಮ್ಮ ಪೂರ್ವಿಕರು ನಿನ್ನಲ್ಲಿ ಭರವಸವಿಟ್ಟರು; ನಿನ್ನನ್ನು ನಂಬಿ ಉದ್ಧಾರವಾದರು.


ರಾಗವನ್ನು ಎತ್ತಿರಿ; ದಮ್ಮಡಿಯನ್ನು ಬಡಿಯಿರಿ; ಇಂಪಾದ ಕಿನ್ನರಿಯನ್ನೂ, ಸ್ವರಮಂಡಲವನ್ನೂ ಬಾರಿಸಿರಿ.


ಕೊಂಬೂದುತ್ತಾ ಆತನನ್ನು ಸ್ತುತಿಸಿರಿ; ಸ್ವರಮಂಡಲ, ಕಿನ್ನರಿಗಳಿಂದ ಆತನನ್ನು ಸ್ತುತಿಸಿರಿ.


ತಾಳದಿಂದ ಆತನನ್ನು ಸ್ತುತಿಸಿರಿ; ಝಲ್ಲರಿಯಿಂದ ಆತನನ್ನು ಸ್ತುತಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು