Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 6:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹೀಗೆ ಪ್ರಾರ್ಥಿಸಿದನು, “ಇಸ್ರಾಯೇಲರ ದೇವರಾದ ಯೆಹೋವನೇ, ಭೂಲೋಕದಲ್ಲಿಯೂ ಪರಲೋಕದಲ್ಲಿಯೂ ನಿನಗೆ ಸಮಾನನಾದ ದೇವರು ಯಾರೂ ಇಲ್ಲ; ಪೂರ್ಣಮನಸ್ಸಿನಿಂದ ನಿನಗೆ ಪ್ರಾಮಾಣಿಕರಾಗಿ ನಡೆದುಕೊಳ್ಳುವಂಥ ಸೇವಕರ ವಿಷಯದಲ್ಲಿ ನೀನು ನಿನ್ನ ಒಡಂಬಡಿಕೆಯನ್ನು ನೆರವೇರಿಸಿ ದಯೆಯನ್ನೂ, ಕೃಪೆಯನ್ನೂ ತೋರಿಸಬಲ್ಲ ದೇವರು ಒಬ್ಬರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಇಸ್ರಯೇಲ್ ದೇವರಾದ ಸರ್ವೇಶ್ವರಾ, ಭೂಲೋಕದಲ್ಲೂ ಪರಲೋಕದಲ್ಲೂ ನಿಮಗೆ ಸಮಾನರಾದ ದೇವರಿಲ್ಲ; ಪೂರ್ಣಮನಸ್ಸಿನಿಂದ ನಿಮಗೆ ಪ್ರಾಮಾಣಿಕರಾಗಿ ನಡೆದುಕೊಳ್ಳುವಂಥ ಭಕ್ತರ ಬಗ್ಗೆ ನೀವು ನಿಮ್ಮ ಒಡಂಬಡಿಕೆಯನ್ನು ನೆರವೇರಿಸಿ ಕೃಪೆಯನ್ನು ತೋರಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇಸ್ರಾಯೇಲ್‍ದೇವರಾದ ಯೆಹೋವನೇ, ಭೂಲೋಕದಲ್ಲಿಯೂ ಪರಲೋಕದಲ್ಲಿಯೂ ನಿನಗೆ ಸಮಾನನಾದ ದೇವರಿಲ್ಲ; ಪೂರ್ಣಮನಸ್ಸಿನಿಂದ ನಿನಗೆ ನಡೆದುಕೊಳ್ಳುವಂಥ ಸೇವಕರ ವಿಷಯದಲ್ಲಿ ನೀನು ನಿನ್ನ ಒಡಂಬಡಿಕೆಯನ್ನೂ ಕೃಪೆಯನ್ನೂ ನೆರವೇರಿಸುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಇಸ್ರೇಲರ ದೇವರಾದ ಯೆಹೋವನೇ, ಭೂಪರಲೋಕಗಳಲ್ಲಿ ನಿನಗೆ ಸಮಾನರಾದ ಬೇರೆ ದೇವರುಗಳಿಲ್ಲ. ನೀನು ನಿನ್ನ ಪ್ರೀತಿ ಕರುಣೆಯಿಂದೊಡಗೂಡಿದ ವಾಗ್ದಾನಗಳನ್ನು ನೆರವೇರಿಸುವೆ. ನಿನ್ನ ಸೇವಕರು ಹೃದಯಪೂರ್ವಕವಾಗಿ ನಿನಗೆ ಯೋಗ್ಯರಾಗಿ ನಡೆದು, ನಿನ್ನ ಆಜ್ಞೆಗಳಿಗೆ ವಿಧೇಯರಾಗುವದಾದರೆ ಅವರ ವಿಷಯದಲ್ಲಿ ನಿನ್ನ ವಾಗ್ದಾನವನ್ನು ನೆರವೇರಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಹೀಗೆ ಪ್ರಾರ್ಥಿಸಿದನು. “ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ಆಕಾಶದಲ್ಲಾದರೂ, ಭೂಮಿಯಲ್ಲಾದರೂ ನಿಮ್ಮ ಹಾಗೆ ದೇವರು ಯಾರೂ ಇಲ್ಲ. ಸಂಪೂರ್ಣ ಹೃದಯದಿಂದ ನಿಮಗೆ ನಡೆದುಕೊಳ್ಳುವಂಥ ಸೇವಕರ ಬಗ್ಗೆ ನೀವು ನಿಮ್ಮ ಒಡಂಬಡಿಕೆಯನ್ನು ನೆರವೇರಿಸಿ ಕೃಪೆಯನ್ನು ತೋರಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 6:14
34 ತಿಳಿವುಗಳ ಹೋಲಿಕೆ  

ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು? ನಿನ್ನ ಹಾಗೆ ಪರಿಶುದ್ಧತ್ವದಲ್ಲಿ ಸರ್ವೋತ್ತಮನು ಮಹಿಮೆ ಹೊಂದಿದವನು, ಭಯಂಕರನೂ, ಅದ್ಭುತ ಕೃತ್ಯಗಳನ್ನು ನಡಿಸುವವನೂ ಆಗಿರುವ ನಿನಗೆ ಸಮಾನರು ಯಾರಿದ್ದಾರೆ?


ಆದುದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ದೇವರೆಂದು ತಿಳಿದುಕೊಳ್ಳಬೇಕು. ಆತನು ನಂಬಿಗಸ್ತನಾದ ದೇವರು; ತನ್ನನ್ನು ಪ್ರೀತಿಸಿ ತನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ತಾನು ಮಾಡಿದ ವಾಗ್ದಾನವನ್ನೂ ಮತ್ತು ಕೃಪೆಯನ್ನೂ ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ನೆರವೇರಿಸುವವನಾಗಿಯೂ ಮತ್ತು


ಧೈರ್ಯಪಡಿಸುತ್ತಾ ತನ್ನ ರಾಜ್ಯದಲ್ಲಿ ಮತ್ತು ಆತನ ಮಹಿಮೆಯಲ್ಲಿ ಪಾಲುಗಾರರಾಗುವುದಕ್ಕಾಗಿ ಕರೆಯುವ ದೇವರಿಗೆ ತಕ್ಕಹಾಗೆ ಯೋಗ್ಯರಾಗಿ ನೀವು ಜೀವಿಸಬೇಕೆಂದು ವಿಧಿಸಿದೆವೆಂಬುದು ನಿಮಗೇ ತಿಳಿದಿದೆ.


ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ದಯೆಯು ತಲತಲಾಂತರದ ವರೆಗೂ ಇರುವುದು.


ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ, ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡೆದುಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.


ಯೆಹೋವನೇ, ನಿನ್ನ ಸಮಾನನು ಯಾರು ಇಲ್ಲ; ನೀನು ಮಹೋನ್ನತನು, ನಿನ್ನ ನಾಮವು ಸಾಮರ್ಥ್ಯದಿಂದ ಕೂಡಿ ಮಹೋನ್ನತವಾಗಿದೆ.


ನನ್ನ ಕೃಪೆಯು ಅವನಲ್ಲಿ ಶಾಶ್ವತವಾಗಿ ಇರುವುದು; ನನ್ನ ಒಡಂಬಡಿಕೆಯು ಅವನಲ್ಲಿ ಸ್ಥಿರವಾಗಿರುವುದು.


ಯೆಹೋವನೇ, ಸೇನಾಧೀಶ್ವರನಾದ ದೇವರೇ, ನಿನಗೆ ಸಮಾನರು ಯಾರು? ಯಾಹುವೇ, ನೀನು ಶಕ್ತನು, ಸತ್ಯತೆಯಿಂದ ಆವರಿಸಲ್ಪಟ್ಟವನು.


ಮೇಘಮಂಡಲದಲ್ಲಿ ಯೆಹೋವನಿಗೆ ಸಮಾನರು ಯಾರು? ದೇವದೂತರಲ್ಲಿ ಯೆಹೋವನಿಗೆ ಸರಿಯಾದವರು ಯಾರು?


ಆ ವಿಜ್ಞಾಪನೆಗಳಲ್ಲಿ ನಾನು, “ಯೆಹೋವನೇ, ಮಹೋನ್ನತನೂ, ಭಯಭಕ್ತಿಗೂ ಪಾತ್ರನಾಗಿರುವ ಪರಲೋಕದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವನೇ,


ತರುವಾಯ ದಾವೀದನು ನೆರೆದ ಸಭೆಯವರಿಗೆಲ್ಲಾ, “ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ” ಎಂದು ಹೇಳಲು ಸಮೂಹದವರೆಲ್ಲರೂ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಸ್ತುತಿಸುತ್ತಾ ತಲೆಬಾಗಿ ದೇವರಿಗೂ ಮತ್ತು ಅರಸನಿಗೂ ನಮಸ್ಕರಿಸಿದರು.


ಸಂಧ್ಯಾನೈವೇದ್ಯದ ಹೊತ್ತಿಗೆ ಪ್ರವಾದಿಯಾದ ಎಲೀಯನು ಯಜ್ಞವೇದಿಯ ಹತ್ತಿರ ಬಂದು, “ಅಬ್ರಹಾಮ, ಇಸಾಕ ಇಸ್ರಾಯೇಲರ ದೇವರೇ, ಯೆಹೋವನೇ, ನೀನೊಬ್ಬನೇ ಇಸ್ರಾಯೇಲರ ದೇವರಾಗಿರುತ್ತೀ ಎಂಬುದನ್ನೂ, ನಾನು ನಿನ್ನ ಸೇವಕನಾಗಿರುತ್ತೇನೆ ಎಂಬುದನ್ನೂ ಮತ್ತು ಇದನ್ನೆಲ್ಲಾ ನಿನ್ನ ಅಪ್ಪಣೆಯ ಮೇರೆಗೆ ಮಾಡಿದೆನೆಂಬುದನ್ನೂ ಈ ಹೊತ್ತು ತೋರಿಸಿಕೊಡು.


“ಇಸ್ರಾಯೇಲ್ ದೇವರಾದ ಯೆಹೋವನೇ, ಭೂಲೋಕದಲ್ಲಿಯೂ, ಪರಲೋಕದಲ್ಲಿಯೂ ನಿನಗೆ ಸಮಾನನಾದ ದೇವರಿಲ್ಲ. ಪೂರ್ಣಮನಸ್ಸಿನಿಂದ ನಿನಗೆ ನಡೆದುಕೊಳ್ಳುವಂಥ ಸೇವಕರ ವಿಷಯದಲ್ಲಿ ನೀನು ನಿನ್ನ ಒಡಂಬಡಿಕೆಯನ್ನೂ, ಕೃಪೆಯನ್ನೂ ನೆರವೇರಿಸುವವನು.


“ನೀನು ಈಗ ಒಂದು ಆಲಯವನ್ನು ಕಟ್ಟಿಸುತ್ತಿರುವಿಯಷ್ಟೆ. ನೀನು ನನ್ನ ನಿಯಮ ವಿಧಿಗಳನ್ನು ಅನುಸರಿಸಿ, ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವುದಾದರೆ, ನಾನು ನಿನ್ನನ್ನು ಕುರಿತು ನಿನ್ನ ತಂದೆಯಾದ ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು.


“ನಿನಗೆ ನಂಬಿಗಸ್ತನಾಗಿಯೂ, ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ ನೀನು ಮಹಾ ಕೃಪೆಯನ್ನು ತೋರಿಸಿದ್ದೀ. ಅವನ ಮೇಲೆ ಬಹಳವಾಗಿ ಕೃಪೆಯಿಟ್ಟು ಈಹೊತ್ತು ಅವನ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿದ್ದರಲ್ಲಿ ಅದನ್ನು ಸಂಪೂರ್ಣಗೊಳಿಸಿರುವೆ.


ನೀವು ಇದನ್ನೆಲ್ಲಾ ಆಲೋಚಿಸಿ ಆಕಾಶದಲ್ಲಿಯೂ ಮತ್ತು ಭೂಮಿಯಲ್ಲಿಯೂ ಯೆಹೋವನೊಬ್ಬನೇ ದೇವರು, ಬೇರೆ ಯಾವ ದೇವರೂ ಇಲ್ಲವೆಂಬುವುದನ್ನು ಈಗ ಗ್ರಹಿಸಿಕೊಂಡು ಜ್ಞಾಪಕದಲ್ಲಿಡಬೇಕು.


ಅಲ್ಲಿ ಯಾಕೋಬನು ಯೆಹೋವನ ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ “ಏಲ್ ಎಲೋಹೆ ಇಸ್ರಾಯೇಲ್” ಎಂದು ಹೆಸರಿಟ್ಟನು.


ಅಬ್ರಾಮನು ತೊಂಭತೊಂಭತ್ತು ವರ್ಷದವನಾದಾಗ ಯೆಹೋವನು ಅವನಿಗೆ ದರ್ಶನದಲ್ಲಿ, “ನಾನು ಸರ್ವಶಕ್ತನಾದ ದೇವರು; ನನ್ನೆದುರಿನಲ್ಲಿ ದೋಷ ಇಲ್ಲದವನಾಗಿ ನಡೆದುಕೊ.


ಹನೋಕನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಇರುವಾಗ ದೇವರು ಅವನನ್ನು ಕರೆದುಕೊಂಡ ಕಾರಣ ಕಣ್ಮರೆಯಾಗಿ ಕಾಣದೆ ಹೋದನು.


ಆತನು ನಮ್ಮ ಪೂರ್ವಿಕರಿಗೆ ದಯೆಯನ್ನು ತೋರಿಸುವುದರ ಮೂಲಕ ನಮ್ಮ ಮೂಲಪಿತೃವಾದ ಅಬ್ರಹಾಮನಿಗೆ ಪ್ರಮಾಣಮಾಡಿ ಕೊಟ್ಟ ತನ್ನ ಪರಿಶುದ್ಧವಾದ ಒಡಂಬಡಿಕೆಯನ್ನು ನೆನಪಿಸಿಕೊಳ್ಳುವವನಾಗಿದ್ದಾನೆ.


ನನ್ನ ದೇವರಾದ ಯೆಹೋವನಿಗೆ ಹೀಗೆ ಪಾಪವನ್ನು ಅರಿಕೆ ಮಾಡಿ ಬಿನ್ನವಿಸಿದೆನು, “ಓ ಕರ್ತನೇ, ಮಹೋನ್ನತನೂ, ಭಯಂಕರನೂ ಆದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾ ವಾಗ್ದಾನಗಳನ್ನು ನೆರವೇರಿಸುವವನೇ,


ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು. ಇಸ್ರಾಯೇಲ್ ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬುದು ಆತನ ನಾಮಧೇಯ.


ಕರ್ತನೇ, ದೇವರುಗಳಲ್ಲಿ ನಿನಗೆ ಸಮಾನನೇ ಇಲ್ಲ; ನಿನ್ನ ಕೃತ್ಯಗಳಿಗೆ ಸರಿಯಾದದ್ದು ಇನ್ನೊಂದಿಲ್ಲ.


ಅನಂತರ ದಾವೀದನು ನೆರೆದ ಸಭೆಯ ಮುಂದೆ ಯೆಹೋವನನ್ನು ಸ್ತುತಿಸಿ ಹೇಳಿದ್ದೇನೆಂದರೆ, “ನಮ್ಮ ಪಿತೃವಾದ ಇಸ್ರಾಯೇಲಿನ ದೇವರೇ. ಯೆಹೋವನೇ, ಯುಗಯುಗಾಂತರಗಳಲ್ಲಿ ನಿನಗೆ ಕೊಂಡಾಟವಾಗಲಿ.


ದೇವರೇ, ಯೆಹೋವನೇ! ನೀನೇ ಮಹೋನ್ನತನು. ನಿನ್ನ ಸಮಾನರು ಯಾರೂ ಇಲ್ಲ. ನಾವು ಕೇಳಿದವುಗಳನ್ನೆಲ್ಲಾ ನೀನು ನಮಗೆ ನೀಡಿದ್ದೆಲ್ಲವನ್ನು ಆಲೋಚಿಸಿ ನೋಡಿದರೆ ನಿನ್ನ ಹೊರತು ದೇವರೇ ಇಲ್ಲವೆಂಬುದು ನಿಶ್ಚಯ.


ದೇವರು ಪುನಃ ಮೋಶೆಗೆ ಹೇಳಿದ್ದೇನೆಂದರೆ, “ನೀನು ಇಸ್ರಾಯೇಲರಿಗೆ, ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರ ದೇವರಾಗಿರುವ ಯೆಹೋವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ” ಎಂದು ಹೇಳಬೇಕು. ಇದು ಸದಾಕಾಲಕ್ಕೂ ಇರುವ ನನ್ನ ಹೆಸರು. ಇದು ತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ನಾಮ.


ದೇವರು ಅವನಿಗೆ, “ಈಗ ನಿನಗೆ ಯಾಕೋಬನೆಂದು ಹೆಸರಿರುವುದು. ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಿಸಿಕೊಳ್ಳದೆ ‘ಇಸ್ರಾಯೇಲ್’ ಎಂದು ಕರೆಯಿಸಿಕೊಳ್ಳುವೆ” ಎಂದು ಹೇಳಿ ಅವನಿಗೆ ಇಸ್ರಾಯೇಲ್ ಎಂದು ಹೆಸರಿಟ್ಟನು.


ನೀನು ನಡಿಸುವ ಈ ಮಹತ್ಕಾರ್ಯಗಳಿಗೆ ಸಮಾನವಾದ ಕಾರ್ಯಗಳನ್ನು ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ ಬೇರೆ ಯಾವ ದೇವರು ನಡೆಸಲಾರನು?


ಆರೋನನು ಐಗುಪ್ತ ದೇಶದಲ್ಲಿ ನೀರಿರುವ ಎಲ್ಲಾ ಸ್ಥಳಗಳ ಮೇಲೆ ತನ್ನ ಕೈಚಾಚಲು ಕಪ್ಪೆಗಳು ಹೊರಟು ಬಂದು ದೇಶವನ್ನೆಲ್ಲಾ ತುಂಬಿಕೊಂಡವು.


ಈಗ ಇಸ್ರಾಯೇಲರ ದೇವರಾದ ಯೆಹೋವನೇ, ನೀನು ನಿನ್ನ ಸೇವಕನಾದ ದಾವೀದನಿಗೆ ನುಡಿದಿದ್ದೆಲ್ಲವೂ ಸ್ಥಿರವಾಗಿರಲಿ.


“ಯೆಹೋವನೇ, ನಮ್ಮ ಪೂರ್ವಿಕರ ದೇವರೇ, ಪರಲೋಕದಲ್ಲಿ ದೇವರಾಗಿ ಇರುವಾತನು ನೀನಲ್ಲವೋ? ನೀನು ಜನಾಂಗಗಳನ್ನೂ, ಎಲ್ಲಾ ರಾಜ್ಯಗಳನ್ನು ಆಳುವವನಾಗಿರುವೆ. ಬಲ, ಪರಾಕ್ರಮಗಳು ನಿನ್ನ ಕೈಗಳಲ್ಲಿ ಇರುತ್ತವೆ: ನಿನ್ನೆದುರಿನಲ್ಲಿ ನಿಲ್ಲುವವರು ಯಾರಿದ್ದಾರೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು