Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 6:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇಸ್ರಾಯೇಲರ ದೇವರಾದ ಯೆಹೋವನೇ, ನೀನು ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ, ‘ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಕಟ್ಟಳೆಯನ್ನು ಅನುಸರಿಸಿ ನಡೆದುಕೊಳ್ಳುವುದಾದರೆ ಅವರು ತಪ್ಪದೆ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು ಎಂಬುದಾಗಿ ವಾಗ್ದಾನ ಮಾಡಿರುವೆಯಲ್ಲಾ, ಅದನ್ನು ನೆರವೇರಿಸು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇಸ್ರಯೇಲ್ ದೇವರಾದ ಸರ್ವೇಶ್ವರಾ, ನೀವು ನನ್ನ ತಂದೆ ದಾವೀದನಿಗೆ, ‘ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಕಟ್ಟಳೆಯನ್ನು ಅನುಸರಿಸಿ ನನ್ನ ಮಾರ್ಗದಲ್ಲಿ ನಡೆದುಕೊಂಡರೆ ಅವರು ಇಸ್ರಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದು ತಪ್ಪದು’ ಎಂಬುದಾಗಿ ವಾಗ್ದಾನ ಮಾಡಿದ್ದೀರಿ; ಅದನ್ನು ನೆರವೇರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇಸ್ರಾಯೇಲ್‍ದೇವರಾದ ಯೆಹೋವನೇ, ನೀನು ನನ್ನ ತಂದೆಯಾದ ದಾವೀದನಿಗೆ - ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಕಟ್ಟಳೆಯನ್ನು ಅನುಸರಿಸಿ ನಡೆದುಕೊಳ್ಳುವದಾದರೆ ಅವರು ತಪ್ಪದೆ ಇಸ್ರಾಯೇಲ್ ಸಿಂಹಾಸನದ ಮೇಲೆ ಕೂತುಕೊಳ್ಳುವಂತೆ ಮಾಡುವೆನು ಎಂಬದಾಗಿ ವಾಗ್ದಾನಮಾಡಿದಿಯಲ್ಲಾ, ಅದನ್ನು ನೆರವೇರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಇಸ್ರೇಲರ ದೇವರಾದ ಯೆಹೋವನೇ, ನೀನು ನನ್ನ ತಂದೆಯಾದ ದಾವೀದನಿಗೆ, ‘ನಿನ್ನ ಸಂತಾನದವರು ನಿನ್ನಂತೆ ನನ್ನ ಆಜ್ಞೆಗಳಿಗೆ ವಿಧೇಯರಾಗಿದ್ದರೆ, ನಿನ್ನ ಸಂತಾನದವರೇ ಇಸ್ರೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು.’ ಎಂದು ವಾಗ್ದಾನ ಮಾಡಿದೆಯಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಆದಕಾರಣ, ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ‘ನಿಮ್ಮ ಸಂತಾನದವರು, ನಿನ್ನಂತೆ ಜಾಗ್ರತೆಯಾಗಿದ್ದು, ನನ್ನ ನಿಯಮದ ಪ್ರಕಾರ ನಡೆದುಕೊಳ್ಳುವದಾದರೆ, ಅವರು ತಪ್ಪದೆ ಇಸ್ರಾಯೇಲಿನ ಸಿಂಹಾಸನದ ಮೇಲೆ ನನ್ನ ಸಮ್ಮುಖದಲ್ಲಿ ಕುಳಿತುಕೊಳ್ಳುವರು,’ ಎಂದು ನೀವು ನನ್ನ ತಂದೆಯಾದ ನಿಮ್ಮ ಸೇವಕನಾದ ದಾವೀದನಿಗೆ ವಾಗ್ದಾನ ಮಾಡಿದ್ದನ್ನು ನೆರವೇರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 6:16
16 ತಿಳಿವುಗಳ ಹೋಲಿಕೆ  

ಮತ್ತು ಯೆಹೋವನು, ‘ನಿನ್ನ ಸಂತಾನದವರು ನಂಬಿಗಸ್ತರಾಗಿ, ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನನಗೆ ನಡೆದುಕೊಳ್ಳುವುದರಲ್ಲಿ ಜಾಗರೂಕರಾಗಿರುವುದಾದರೆ, ಅವರು ತಪ್ಪದೆ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು’ ಎಂಬುದಾಗಿ ತಾನು ನನಗೆ ಮಾಡಿದ ವಾಗ್ದಾನವನ್ನು ಸ್ಥಿರಪಡಿಸುವನು,


ನಿನ್ನ ಮಕ್ಕಳು ನನ್ನ ನಿಬಂಧನೆಯನ್ನೂ, ನಾನು ಆಜ್ಞಾಪಿಸಿದ ಕಟ್ಟಳೆಗಳನ್ನೂ ಕೈಕೊಂಡು ನಡೆಯುವುದಾದರೆ, ಅವರ ಮಕ್ಕಳು ನಿನ್ನ ಸಿಂಹಾಸನದಲ್ಲಿ ಸದಾಕಾಲ ಕುಳಿತುಕೊಳ್ಳುವರು.”


ನಿನ್ನ ರಾಜ್ಯಸಿಂಹಾಸನವನ್ನು ಸ್ಥಿರಪಡಿಸುವೆನು; ಅಲ್ಲದೆ ಇಸ್ರಾಯೇಲರಲ್ಲಿ ನಿನ್ನ ಸಂತಾನದವರು ತಪ್ಪದೆ ಸದಾಕಾಲ ರಾಜ್ಯಾಭಾರ ನಡಿಸುವರು ಎಂಬುದಾಗಿ ನಿನ್ನ ತಂದೆಯಾದ ದಾವೀದನಿಗೆ ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಇನ್ನೊಂದು ವಿಷಯದಲ್ಲಿ ಇಸ್ರಾಯೇಲ್ ವಂಶದವರ ವಿಜ್ಞಾಪನೆಯನ್ನು ಲಾಲಿಸಿ ನೆರವೇರಿಸುವೆನು; ಅಂದರೆ ಅವರ ಜನಸಂಖ್ಯೆಯನ್ನು ಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು.


ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸಿ, ಸದಾಚಾರಿಗಳಾಗಿ ನಡೆಯುವವರು ಧನ್ಯರು.


ನಿನ್ನ ಶಾಶ್ವತವಾದ ಪ್ರೀತಿಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡಿದ್ದೇನೆ; ನಿನಗೆ ನಂಬಿಗಸ್ತನಾಗಿ ನಡೆದುಕೊಂಡಿದ್ದೇನೆ.


“ನೀನು ಈಗ ಒಂದು ಆಲಯವನ್ನು ಕಟ್ಟಿಸುತ್ತಿರುವಿಯಷ್ಟೆ. ನೀನು ನನ್ನ ನಿಯಮ ವಿಧಿಗಳನ್ನು ಅನುಸರಿಸಿ, ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವುದಾದರೆ, ನಾನು ನಿನ್ನನ್ನು ಕುರಿತು ನಿನ್ನ ತಂದೆಯಾದ ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು.


ಈಗ ಇಸ್ರಾಯೇಲರ ದೇವರಾದ ಯೆಹೋವನೇ, ನೀನು ನಿನ್ನ ಸೇವಕನಾದ ದಾವೀದನಿಗೆ ನುಡಿದಿದ್ದೆಲ್ಲವೂ ಸ್ಥಿರವಾಗಿರಲಿ.


ಯೌವನಸ್ಥನು ತನ್ನ ನಡತೆಯನ್ನು ಶುದ್ಧಪಡಿಸಿಕೊಳ್ಳುವುದು ಯಾವುದರಿಂದ? ನಿನ್ನ ವಾಕ್ಯವನ್ನು ಗಮನಿಸಿ ನಡೆಯುವುದರಿಂದಲೇ.


ಯೆಹೋವನು ದಾವೀದನಿಗೆ ಮಾಡಿದ ಪ್ರಮಾಣವು ಸ್ಥಿರವಾಗಿದೆ; ಆತನು ಅದನ್ನು ಬದಲಿಸುವುದಿಲ್ಲ. “ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು;


ನೀನು ನಿನ್ನ ತಂದೆಯಾದ ದಾವೀದನಂತೆ ನನಗೆ ವಿಧೇಯನಾಗಿ ನಡೆದುಕೊಂಡು ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಕೊಳ್ಳುವುದಾದರೆ,


ಯೆಹೋವನು ಉಪ್ಪಿನ ಒಡಂಬಡಿಕೆಯಿಂದ ದಾವೀದನಿಗೂ ಅವನ ಸಂತಾನದವರಿಗೂ ಇಸ್ರಾಯೇಲರ ಮೇಲೆ ಶಾಶ್ವತವಾದ ಅರಸುತನವನ್ನು ಕೊಟ್ಟಿದ್ದಾನೆಂದು ನಿಮಗೆ ಗೊತ್ತಿಲ್ಲವೋ?


ಆದರೂ ಯೆಹೋವನು ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ” ಎಂದು ಒಡಂಬಡಿಕೆ ಮಾಡಿ ಹೇಳಿದ್ದರಿಂದ ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.


ಹೀಗೆ ಕೂಡಿ ಬಂದವರೆಲ್ಲರೂ ದೇವಾಲಯದಲ್ಲಿ ಅರಸನೊಂದಿಗೆ ಒಪ್ಪಂದ ಮಾಡಿಕೊಂಡರು. ಯೆಹೋಯಾದನು ಅವರಿಗೆ, “ಇಗೋ, ರಾಜಪುತ್ರನು, ಯೆಹೋವನು ದಾವೀದನ ಸಂತಾನದವರಿಗೆ ಮಾಡಿದ ವಾಗ್ದಾನಕ್ಕೆ ಅನುಸಾರವಾಗಿ ಅರಸನಾಗತಕ್ಕವನು ಇವನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು