Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 6:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನೆರೆಯವನಿಗೆ ವಿರೋಧವಾಗಿ ಪಾಪ ಮಾಡಿ, ಶಾಪಕ್ಕೆ ಗುರಿಯಾದ ಮನುಷ್ಯನು ತಾನು ನಿರ್ದೋಷಿಯೆಂದು ಪ್ರಮಾಣ ಮಾಡುವಾಗ, ಅವನು ಈ ಆಲಯಕ್ಕೆ ಬಂದು ನಿನ್ನ ಯಜ್ಞವೇದಿಯ ಮುಂದೆ ನಿಂತು ಪ್ರಮಾಣ ಮಾಡಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ನೆರೆಯವನಿಗೆ ವಿರುದ್ಧ ತಪ್ಪುಮಾಡಿದವನು ಎಂಬ ಸಂಶಯಕ್ಕೆ ಗುರಿಯಾದ ಒಬ್ಬ ವ್ಯಕ್ತಿ ತಾನು ನಿರ್ದೋಷಿಯೆಂದು ಪ್ರಮಾಣಮಾಡಬೇಕಾದಾಗ, ಅವನು ಈ ಆಲಯಕ್ಕೆ ಬಂದು, ನಿಮ್ಮ ಪೀಠದ ಮುಂದೆ ನಿಂತು ಪ್ರಮಾಣಮಾಡಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನೆರೆಯವನಿಗೆ ವಿರೋಧವಾಗಿ ತಪ್ಪುಮಾಡಿದವನೆಂಬ ಸಂಶಯಕ್ಕೆ ಗುರಿಯಾದ ಮನುಷ್ಯನು ತಾನು ನಿರ್ದೋಷಿಯೆಂದು ಪ್ರಮಾಣಮಾಡಬೇಕಾದಾಗ ಅವನು ಈ ಆಲಯಕ್ಕೆ ಬಂದು ನಿನ್ನ ವೇದಿಯ ಮುಂದೆ ನಿಂತು ಪ್ರಮಾಣಮಾಡುವದಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಒಬ್ಬನು ಇನ್ನೊಬ್ಬನಿಗೆ ವಿರುದ್ಧವಾಗಿ ದುಷ್ಕೃತ್ಯ ನಡೆಸಿದ್ದರೂ ನಿನ್ನ ಯಜ್ಞವೇದಿಕೆಯ ಮುಂದೆ ಬಂದು ತಾನು ಮಾಡಿಲ್ಲವೆಂದು ನಿನ್ನ ಹೆಸರಿನಲ್ಲಿ ಪ್ರಮಾಣ ಮಾಡಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ತನ್ನ ನೆರೆಯವನಿಗೆ ವಿರೋಧವಾಗಿ ತಪ್ಪುಮಾಡಿದವನೆಂಬ ಸಂಶಯಕ್ಕೆ ಗುರಿಯಾದ ಒಬ್ಬ ವ್ಯಕ್ತಿ, ತಾನು ನಿರ್ದೋಷಿಯೆಂದು ಪ್ರಮಾಣಮಾಡಬೇಕಾದಾಗ, ಅಂಥವನು ಈ ಆಲಯಕ್ಕೆ ಬಂದು, ನಿಮ್ಮ ಪೀಠದ ಮುಂದೆ ನಿಂತು ಪ್ರಮಾಣಮಾಡಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 6:22
8 ತಿಳಿವುಗಳ ಹೋಲಿಕೆ  

ಆ ಮನುಷ್ಯನು ತಾನೇ ಆ ಸೊತ್ತಿನ ವಿಷಯದಲ್ಲಿ ಮೋಸಮಾಡಲಿಲ್ಲ ಎಂಬುದನ್ನು ದೃಢಪಡಿಸುವುದಕ್ಕಾಗಿ ಯೆಹೋವನ ಮೇಲೆ ಪ್ರಮಾಣಮಾಡಬೇಕು. ಆಗ ಪಶುವಿನ ಒಡೆಯನು ಆ ಪ್ರಮಾಣವಾಕ್ಯವನ್ನು ನಂಬಬೇಕು. ಪ್ರಮಾಣಮಾಡಿದವನು ಅದಕ್ಕೆ ಈಡುಕೊಡಬೇಕಾದ ಅಗತ್ಯವಿರುವುದಿಲ್ಲ.


ಮತ್ತು ‘ಒಬ್ಬನು ಯಜ್ಞವೇದಿಯ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ, ಆದರೆ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು’ ಎಂದು ಹೇಳುತ್ತೀರಿ.


ಹಾಗಾಗದೆ ಹೊಟ್ಟೆತುಂಬಿದವನಾದರೆ, “ಯೆಹೋವನು ಯಾರೋ?” ಎಂದು ನಿನ್ನನ್ನು ತಿರಸ್ಕರಿಸೇನು, ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರನ್ನು ಅಯೋಗ್ಯವಾಗಿ ಎತ್ತೆನು.


“‘ನ್ಯಾಯಾಧಿಕಾರಿಯು ತಿಳಿಸಬೇಕೆಂದು ಆಣೆ ಇಟ್ಟರೂ, ಯಾವನಾದರೂ ತಾನು ಕಂಡು ಕೇಳಿದ್ದನ್ನು ತಿಳಿಸದೆಹೋದರೆ ಅವನು ಪಾಪಕ್ಕೆ ಗುರಿಯಾಗುವನು.


ಇದಲ್ಲದೆ, ನೀನು ನಿನ್ನ ಸೇವಕನ ಹಾಗೂ ನಿನ್ನ ಪ್ರಜೆಗಳಾದ ಇಸ್ರಾಯೇಲರ ವಿಜ್ಞಾಪನೆಯನ್ನು ಲಾಲಿಸು. ಅವರು ಈ ಸ್ಥಳದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವಾಗ ನಿನ್ನ ನಿವಾಸವಾಗಿರುವ ಪರಲೋಕದಿಂದ ನಮ್ಮ ವಿಜ್ಞಾಪನೆಯನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸು.


ಆಗ ನೀನು ಪರಲೋಕದಿಂದ ಅದನ್ನು ಕೇಳಿ ನಿನ್ನ ಸೇವಕರ ವ್ಯಾಜ್ಯವನ್ನು ತೀರಿಸು; ದುಷ್ಟನಿಗೆ ಅವನ ದುಷ್ಟತ್ವವನ್ನು ಅವನ ತಲೆಯ ಮೇಲೆಯೇ ಬರಮಾಡಿ ಮುಯ್ಯಿತೀರಿಸು; ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದು ತೋರಿಸಿಕೊಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು