Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 6:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆಗ ನಮ್ಮ ಪೂರ್ವಿಕರಿಗೆ ನೀನು ಕೊಟ್ಟ ದೇಶದಲ್ಲಿ ಅವರು ವಾಸಿಸುವ ಕಾಲವೆಲ್ಲಾ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ ನಿನ್ನ ಮಾರ್ಗಗಳಲ್ಲಿ ನಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆಗ ನಮ್ಮ ಪಿತೃಗಳಿಗೆ ನೀವು ಕೊಟ್ಟ ಈ ನಾಡಿನಲ್ಲಿ ಅವರು ವಾಸಿಸುವ ಕಾಲವೆಲ್ಲಾ ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿ ನಿಮ್ಮ ಮಾರ್ಗದಲ್ಲೇ ನಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆಗ ನಮ್ಮ ಪಿತೃಗಳಿಗೆ ನೀನು ಕೊಟ್ಟ ದೇಶದಲ್ಲಿ ಅವರು ವಾಸಿಸುವ ಕಾಲದಲ್ಲೆಲ್ಲಾ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ ನಿನ್ನ ಮಾರ್ಗಗಳಲ್ಲಿ ನಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆಗ, ನಮ್ಮ ಪೂರ್ವಿಕರಿಗೆ ನೀನು ಅನುಗ್ರಹಿಸಿದ ದೇಶದಲ್ಲಿರುವ ನಿನ್ನ ಜನರು ನಿನಗೆ ಭಯಭಕ್ತಿಯಿಂದ ಸೇವೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆಗ ನೀವು ನಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ಅವರು ವಾಸಿಸುವ ಕಾಲದಲ್ಲೆಲ್ಲಾ ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿ ನಿಮ್ಮ ಮಾರ್ಗಗಳಲ್ಲಿ ನಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 6:31
8 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ಯೂದಾಯ, ಗಲಿಲಾಯ, ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು, ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಬೆಳೆಯುತ್ತಾ ಬಂದಿತು.


ನೀನು ಪಾಪವನ್ನು ಕ್ಷಮಿಸುವವನಾದುದರಿಂದ, ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು.


ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು.


ಆಮೇಲೆ ಮನುಷ್ಯರಿಗೆ, ‘ಇಗೋ, ಕರ್ತನ ಭಯವೇ ಜ್ಞಾನ; ದುಷ್ಟತನವನ್ನು ತ್ಯಜಿಸುವುದೇ ವಿವೇಕ’” ಎಂದು ಹೇಳಿದನು.


ನೀವಾದರೋ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದು, ಆತನು ನಿಮಗೋಸ್ಕರವಾಗಿ ಮಾಡಿದ ಮಹತ್ಕಾರ್ಯಗಳನ್ನು ಸ್ಮರಿಸಿಕೊಂಡು, ಆತನನ್ನು ಸತ್ಯದಿಂದಲೂ, ಪೂರ್ಣಮನಸ್ಸಿನಿಂದಲೂ ಸೇವಿಸುತ್ತಾ ಬರಬೇಕು;


ಅದಕ್ಕೆ ಮೋಶೆಯು ಜನರಿಗೆ, “ಭಯಪಡಬೇಡಿರಿ, ದೇವರು ನಿಮ್ಮನ್ನು ಪರೀಕ್ಷಿಸುವುದಕ್ಕಾಗಿ, ನೀವು ಪಾಪ ಮಾಡದಂತೆ ಆತನ ಮೇಲಿನ ಭಯವು ನಿಮಗೆ ಇರಬೇಕೆಂತಲೂ ಇಳಿದು ಬಂದಿದ್ದಾನೆ” ಎಂದನು.


ಮನುಷ್ಯರ ಹೃದಯಗಳನ್ನು ಬಲ್ಲಂಥ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಅಲಿಸಿ ಅವರಿಗೆ ಪಾಪ ಕ್ಷಮೆಯನ್ನು ಅನುಗ್ರಹಿಸು. ನೀನೊಬ್ಬನೇ ಮನುಷ್ಯರ ಹೃದಯಗಳನ್ನು ಬಲ್ಲವನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡು.


“ನಿನ್ನ ಪ್ರಜೆಗಳಾದ ಇಸ್ರಾಯೇಲನಲ್ಲದೆ ಸೇರದಂಥ ಒಬ್ಬ ಅನ್ಯನೂ, ಪರದೇಶಿಯು ನಿನ್ನ ಮಹತ್ತಾದ ನಾಮ, ಭುಜಬಲ, ಶಿಕ್ಷಾಹಸ್ತ ಇವುಗಳ ವರ್ತಮಾನವನ್ನು ಕೇಳಿ ದೂರದೇಶದಿಂದ ಬಂದು, ಈ ಆಲಯದ ಮುಂದೆ ನಿಂತು, ನಿನ್ನನ್ನು ಪ್ರಾರ್ಥಿಸಿದರೆ ನಿನ್ನ ನಿವಾಸವಾಗಿರುವ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು