Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 6:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ ಅವನು ಬೇಡಿಕೊಂಡದ್ದನ್ನು ಅನುಗ್ರಹಿಸು. ಆಗ ಲೋಕದ ಎಲ್ಲಾ ಜನರೂ ನಿನ್ನ ನಾಮದ ಮಹತ್ವವನ್ನು ತಿಳಿದು, ನಿನ್ನ ಜನರಾದ ಇಸ್ರಾಯೇಲರಂತೆ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ ನಿನ್ನ ಹೆಸರಿನಲ್ಲಿ ಈ ಆಲಯವು ಕಟ್ಟಲ್ಪಟಿದ್ದೆಯೆಂದು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ ಅವನು ಬೇಡಿಕೊಂಡದ್ದನ್ನು ಅನುಗ್ರಹಿಸಿರಿ. ಆಗ ಲೋಕದ ಎಲ್ಲ ಜನರೂ ನಿಮ್ಮ ನಾಮಮಹತ್ತನ್ನು ತಿಳಿದು, ನಿಮ್ಮ ಜನರಾದ ಇಸ್ರಯೇಲರಂತೆ, ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿ ನಾನು ನಿಮ್ಮ ಹೆಸರಿಗಾಗಿ ಈ ಆಲಯವನ್ನು ಕಟ್ಟಿಸಿದ್ದೇನೆಂದು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ನಿನ್ನ ನಿವಾಸವಾಗಿರುವ ಪರಲೋಕದಿಂದ ಅವರ ಪ್ರಾರ್ಥನೆಯನ್ನು ಕೇಳಿ ಅವರು ಬೇಡಿಕೊಂಡದ್ದನ್ನು ಅನುಗ್ರಹಿಸು. ಆಗ ಲೋಕದ ಎಲ್ಲಾ ಜನರೂ ನಿನ್ನ ನಾಮಮಹತ್ತನ್ನು ತಿಳಿದು ನಿನ್ನ ಜನರಾದ ಇಸ್ರಾಯೇಲ್ಯರಂತೆ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ ನಾನು ಈ ಆಲಯವನ್ನು ನಿನ್ನ ಹೆಸರಿನದಾಗಿ ಕಟ್ಟಿಸಿದ್ದೇನೆಂದು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಪರಲೋಕದಲ್ಲಿ ವಾಸಿಸುವ ನೀನು ಆ ಪರದೇಶಿಯ ಪ್ರಾರ್ಥನೆಯನ್ನು ಕೇಳಿ ಉತ್ತರಿಸು. ಆಗ ಇಸ್ರೇಲ್ ಜನರಂತೆ ಈ ಲೋಕದಲ್ಲಿರುವ ಜನರೆಲ್ಲಾ ನಿನ್ನ ವಿಷಯ ಕೇಳಿ ನಿನ್ನನ್ನು ಗೌರವಿಸುವರು. ನಾನು ಕಟ್ಟಿದ ಈ ದೇವಾಲಯವು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದೆ ಎಂಬದು ಆಗ ಅವರಿಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ನೀವು ವಾಸಮಾಡುವ ಪರಲೋಕದಿಂದ ಕೇಳಿ, ಪರದೇಶಿಯು ಕೇಳಿದ್ದೆಲ್ಲವನ್ನು ನೆರವೇರಿಸಿರಿ. ಆಗ ಭೂಲೋಕದ ಎಲ್ಲಾ ಜನರೂ ನಿಮ್ಮ ನಾಮವನ್ನು ತಿಳಿದು, ನಿಮ್ಮ ಜನರಾದ ಇಸ್ರಾಯೇಲರಂತೆ ನಿಮಗೆ ಭಯಭಕ್ತಿಯುಳ್ಳವರಾಗಿ, ನಾನು ಕಟ್ಟಿಸಿದ ಈ ಆಲಯವು ನಿಮ್ಮ ಹೆಸರಿನಿಂದ ಕರೆಯಲಾಗಿದೆ ಎಂದು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 6:33
16 ತಿಳಿವುಗಳ ಹೋಲಿಕೆ  

ಈಗ ನನ್ನವರೆಂದು ಹೆಸರುಗೊಂಡಿರುವ ನನ್ನ ಪ್ರಜೆಗಳು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಕೆಟ್ಟ ನಡತೆಯನ್ನು ಬಿಟ್ಟು ನನ್ನ ಕಡೆಗೆ ತಿರುಗಿಕೊಂಡು, ನನ್ನನ್ನು ಕುರಿತು ಪ್ರಾರ್ಥಿಸಿ, ನನ್ನ ದರ್ಶನವನ್ನು ಬಯಸುವುದಾದರೆ, ನಾನು ಪರಲೋಕದಿಂದ ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ದೇಶಕ್ಕೆ ಆರೋಗ್ಯವನ್ನು ದಯಪಾಲಿಸುವೆನು.


ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.


ಜನಾಂಗಗಳ ಅರಸನೇ, ಯಾರು ನಿನಗೆ ಹೆದರದೆ ಇದ್ದಾರು? ಇದು ನಿನಗೆ ತಕ್ಕದ್ದು; ಜನಾಂಗಗಳ ಜ್ಞಾನಿಗಳಲ್ಲಿಯೂ, ರಾಜಪರಂಪರೆಯಲ್ಲಿಯೂ ನಿನಗೆ ಸಮಾನನು ಯಾರೂ ಇಲ್ಲವಷ್ಟೆ.


ಆತನು ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವೇ ಸರಿ. ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.”


ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಾಂತಿಯ ಸ್ಥಳವು ವೈಭವವುಳ್ಳದ್ದಾಗಿರುವುದು.


ಇದರಿಂದ ಭೂಲೋಕದಲ್ಲಿ ನಿನ್ನ ಪರಿಪಾಲನ ಮಾರ್ಗವೂ, ಎಲ್ಲಾ ಜನಾಂಗಗಳಲ್ಲಿ ನಿನ್ನ ರಕ್ಷಣೆಯೂ ಪ್ರಸಿದ್ಧವಾಗುವವು.


“ಕಾದಾಡುವುದನ್ನು ನಿಲ್ಲಿಸಿರಿ, ನಾನೇ ದೇವರು; ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿಯಿರಿ” ಎಂದು ಹೇಳಿದ್ದಾನೆ.


ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಯೆಹೋವನೇ, ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.


ಯೆಹೋವನೇ, ನಮ್ಮ ದೇವರೇ, ನೀನೊಬ್ಬನೇ ದೇವರೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು” ಎಂದು ಪ್ರಾರ್ಥಿಸಿದನು.


ಆತನು, ‘ನಾನು ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತದಿಂದ ಬರಮಾಡಿದಂದಿನಿಂದ ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಆಳುವುದಕ್ಕೋಸ್ಕರ ದಾವೀದನನ್ನು ಆರಿಸಿಕೊಂಡೆನೇ ಹೊರತು ನನ್ನ ನಾಮದ ನಿವಾಸಕ್ಕೋಸ್ಕರ ಆಲಯ ಸ್ಥಾನವನ್ನಾಗಿ ಇಸ್ರಾಯೇಲ್ ಕುಲಗಳ ಯಾವ ಪಟ್ಟಣವನ್ನೂ ಆರಿಸಿಕೊಳ್ಳಲಿಲ್ಲ’ ಎಂದು ಹೇಳಿದ್ದನು.


ಆತನು ಈ ಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಡುವನು. ನಾನು ನಿನ್ನನ್ನು ಕೊಂದು ನಿನ್ನ ತಲೆಯನ್ನು ಕಡಿದು ಹಾಕಿ ಫಿಲಿಷ್ಟಿಯ ಸೈನ್ಯದ ಶವಗಳನ್ನು ಮೃಗ ಪಕ್ಷಿಗಳಿಗೆ ಹಂಚಿಕೊಡುವೆನು. ಇದರಿಂದ ಇಸ್ರಾಯೇಲರೊಳಗೆ ದೇವರಿದ್ದಾನೆಂಬುದು ಭೂಲೋಕದವರಿಗೆಲ್ಲಾ ತಿಳಿದುಬರುವುದು.


ಹೀಗೆ ಅವರು ಇಸ್ರಾಯೇಲರನ್ನು ಕುರಿತು ನನ್ನ ಹೆಸರನ್ನು ಉಚ್ಚರಿಸುವಾಗ ನಾನು ಅವರನ್ನು ಆಶೀರ್ವದಿಸುವೆನು.”


“ನೀನು ನಿನ್ನ ಜನರನ್ನು ಶತ್ರುಗಳೊಡನೆ ಯುದ್ಧ ಮಾಡುವುದಕ್ಕಾಗಿ ಎಲ್ಲಿಗಾದರೂ ಕಳುಹಿಸಿದಾಗ, ಅವರು ಅಲ್ಲಿಂದ ನೀನು ಆರಿಸಿಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿನಲ್ಲಿ ಕಟ್ಟಿಸಿರುವ ಈ ಆಲಯದ ಕಡೆಗೂ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸಿದರೆ,


ಕರ್ತನೇ, ನಿನ್ನಿಂದುಂಟಾದ ಎಲ್ಲಾ ಜನಾಂಗಗಳು ಬಂದು, ನಿನಗೆ ಅಡ್ಡಬಿದ್ದು ನಿನ್ನ ನಾಮವನ್ನು ಘನಪಡಿಸುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು