2 ಪೂರ್ವಕಾಲ ವೃತ್ತಾಂತ 6:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ನಿನ್ನ ಕಡೆಗೆ ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ತಿರುಗಿ, ನೀನು ಅವರ ಪೂರ್ವಿಕರಿಗೆ ಕೊಟ್ಟ ತಮ್ಮ ದೇಶದ ಕಡೆಗೂ, ನೀನು ಆರಿಸಿಕೊಂಡ ಪಟ್ಟಣದ ಕಡೆಗೂ ನಿನ್ನ ಹೆಸರಿಗೋಸ್ಕರ ನಾನು ಕಟ್ಟಿಸಿರುವ ಈ ಆಲಯದ ಕಡೆಗೂ ಅವರು ತಿರುಗಿಕೊಂಡು ನಿನಗೆ ಪ್ರಾರ್ಥನೆಯನ್ನು ಮಾಡಿದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ತಮ್ಮ ಪಿತೃಗಳಿಗೆ ದೊರಕಿದ ನಾಡಿನ ಕಡೆಗೆ, ನೀವು ಆರಿಸಿಕೊಂಡ ಪಟ್ಟಣದ ಕಡೆಗೆ, ನಾನು ನಿಮ್ಮ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೆ ತಿರುಗಿಕೊಂಡು, ‘ನಾವು ನಿಮ್ಮ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು’ ಎಂದು ಒಪ್ಪಿಕೊಂಡು ಪೂರ್ಣಮನಸ್ಸಿನಿಂದ ಹಾಗೂ ಪೂರ್ಣಪ್ರಾಣದಿಂದ ನಿಮ್ಮನ್ನು ಪ್ರಾರ್ಥಿಸಿದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ನಿನ್ನ ಅನುಗ್ರಹದಿಂದ ತಮ್ಮ ಪಿತೃಗಳಿಗೆ ದೊರಕಿದ ದೇಶದ ಕಡೆಗೂ ನೀನು ಆರಿಸಿಕೊಂಡ ಪಟ್ಟಣದ ಕಡೆಗೂ ನಾನು ನಿನ್ನ ಹೆಸರಿಗೋಸ್ಕರ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು - ನಾವು ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು ಎಂದು ಒಪ್ಪಿ ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನಿನ್ನನ್ನು ಪ್ರಾರ್ಥಿಸುವದಾದರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ತಮ್ಮ ಹೃದಯಪೂರ್ವಕವಾಗಿ ತಮ್ಮ ದೇಶದ ಕಡೆಗೆ, ಅಂದರೆ ನೀನು ಅವರ ಪೂರ್ವಿಕರಿಗೆ ಕೊಟ್ಟ ಈ ದೇಶದ ಕಡೆಗೂ ನೀನು ಆರಿಸಿಕೊಂಡ ಪಟ್ಟಣದ ಕಡೆಗೂ ನಿನ್ನ ಹೆಸರಿಗಾಗಿ ನಾನು ಕಟ್ಟಿಸಿದ ಈ ದೇವಾಲಯದ ಕಡೆಗೂ ಮುಖಮಾಡಿಕೊಂಡು ಪ್ರಾರ್ಥಿಸುವಾಗ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ತಮ್ಮ ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ನಿಮ್ಮ ಕಡೆಗೆ ತಿರುಗಿಕೊಂಡು, ನೀವು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಕಡೆಗೂ, ನೀವು ಆಯ್ದುಕೊಂಡ ಪಟ್ಟಣದ ಕಡೆಗೂ ನಿಮ್ಮ ನಾಮಕ್ಕೋಸ್ಕರ ನಾನು ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು, ಅವರು ನಿಮಗೆ ಪ್ರಾರ್ಥನೆಮಾಡಿದರೆ, ಅಧ್ಯಾಯವನ್ನು ನೋಡಿ |