Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 6:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆತನು ಹೇಳಿದ್ದೇನೆಂದರೆ, ‘ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಬರಮಾಡಿದ ದಿನ ಮೊದಲುಗೊಂಡು ನನ್ನ ಹೆಸರು ಅದರಲ್ಲಿ ಇರುವ ಹಾಗೆ ಆಲಯವನ್ನು ಕಟ್ಟುವುದಕ್ಕಾಗಿ ಇಸ್ರಾಯೇಲರ ಕುಲಗಳಲ್ಲಿ ಯಾವ ಪಟ್ಟಣವನ್ನೂ, ನನ್ನ ಆಲಯ ಸ್ಥಾನವನ್ನಾಗಿ ಆರಿಸಿಕೊಳ್ಳಲಿಲ್ಲ; ನನ್ನ ಪ್ರಜೆಗಳಾದ ಇಸ್ರಾಯೇಲರ ಪ್ರಭುವಾಗಿರುವುದಕ್ಕಾಗಿ ಯಾವ ವ್ಯಕ್ತಿಯನ್ನು ಆರಿಸಿಕೊಂಡದ್ದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವರು, ‘ನನ್ನ ಜನರಾದ ಇಸ್ರಯೇಲರನ್ನು ಈಜಿಪ್ಟಿನಿಂದ ಬರಮಾಡಿದಂದಿನಿಂದ ನನ್ನ ನಾಮದ ನಿವಾಸಕ್ಕಾಗಿ ಇಸ್ರಯೇಲ್ ಕುಲಗಳಲ್ಲಿ ಯಾವ ಪಟ್ಟಣವನ್ನೂ ಆಲಯಸ್ಥಾನವನ್ನಾಗಿ ಆರಿಸಿಕೊಳ್ಳಲಿಲ್ಲ; ನನ್ನ ಪ್ರಜೆ ಇಸ್ರಯೇಲರನ್ನು ಆಳುವುದಕ್ಕೆ ಯಾವ ವ್ಯಕ್ತಿಯನ್ನು ಆರಿಸಿಕೊಂಡದ್ದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆತನು - ನನ್ನ ಜನರಾದ ಇಸ್ರಾಯೇಲ್ಯರನ್ನು ಐಗುಪ್ತದೇಶದಿಂದ ನಾನು ಬರಮಾಡಿದ್ದು ಮೊದಲುಗೊಂಡು ಇಸ್ರಾಯೇಲ್ ಕುಲಗಳಲ್ಲಿ ಯಾವ ಪಟ್ಟಣವನ್ನೂ ನನ್ನ ನಾಮದ ನಿವಾಸಕ್ಕೋಸ್ಕರ ಆಲಯಸ್ಥಾನವನ್ನಾಗಿ ಆರಿಸಿಕೊಂಡಿರಲಿಲ್ಲ; ನನ್ನ ಪ್ರಜೆಯಾದ ಇಸ್ರಾಯೇಲ್ಯರ ಪ್ರಭುವಾಗುವದಕ್ಕಾಗಿ ಯಾವನೊಬ್ಬ ಪುರುಷನನ್ನು ಆರಿಸಿಕೊಂಡದ್ದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ‘ಈಜಿಪ್ಟಿನಿಂದ ನನ್ನ ಜನರನ್ನು ಬಿಡಿಸಿ ಹೊರ ತಂದಂದಿನಿಂದ ನನ್ನ ಆಲಯಕೋಸ್ಕರ ಇಸ್ರೇಲರ ಕುಲಗಳ ಯಾವ ಪಟ್ಟಣವನ್ನೂ ನಾನು ಆರಿಸಿಕೊಳ್ಳಲಿಲ್ಲ. ಇಸ್ರೇಲರನ್ನು ನಡಿಸುವುದಕ್ಕಾಗಿ ಒಬ್ಬ ನಾಯಕನನ್ನೂ ನಾನು ಆರಿಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದೇವರು ತಮ್ಮ ಬಾಯಿಂದ, ‘ನನ್ನ ಜನರಾದ ಇಸ್ರಾಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದ ದಿನ ಮೊದಲುಗೊಂಡು, ನನ್ನ ನಾಮವು ಅದರಲ್ಲಿರುವ ಹಾಗೆ ಆಲಯವನ್ನು ಕಟ್ಟುವುದಕ್ಕೆ, ಇಸ್ರಾಯೇಲಿನ ಸಮಸ್ತ ಗೋತ್ರಗಳೊಳಗಿಂದ ಪಟ್ಟಣವನ್ನು ಆರಿಸಿಕೊಳ್ಳಲಿಲ್ಲ. ನನ್ನ ಜನರಾದ ಇಸ್ರಾಯೇಲರ ಮೇಲೆ ಆಳುವವನಾಗಿರಲು ನಾನು ಒಬ್ಬನನ್ನಾದರೂ ಆಯ್ದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 6:5
25 ತಿಳಿವುಗಳ ಹೋಲಿಕೆ  

ಸ್ವಾಮೀ, ಕೇಳು! ಸ್ವಾಮೀ, ಕ್ಷಮಿಸು! ಸ್ವಾಮೀ, ಲಾಲಿಸು, ಕಾರ್ಯವನ್ನು ಸಾಧಿಸು! ತಡಮಾಡಬೇಡ! ನನ್ನ ದೇವರೇ, ನಿನ್ನ ಜನವೂ, ಪಟ್ಟಣವೂ ನಿನ್ನ ಹೆಸರಿನವುಗಳಾದ ಕಾರಣ ನಿನ್ನ ಹೆಸರನ್ನು ಕಾಪಾಡಿಕೋ!”


ಆತನು, ‘ನಾನು ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತದಿಂದ ಬರಮಾಡಿದಂದಿನಿಂದ ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಆಳುವುದಕ್ಕೋಸ್ಕರ ದಾವೀದನನ್ನು ಆರಿಸಿಕೊಂಡೆನೇ ಹೊರತು ನನ್ನ ನಾಮದ ನಿವಾಸಕ್ಕೋಸ್ಕರ ಆಲಯ ಸ್ಥಾನವನ್ನಾಗಿ ಇಸ್ರಾಯೇಲ್ ಕುಲಗಳ ಯಾವ ಪಟ್ಟಣವನ್ನೂ ಆರಿಸಿಕೊಳ್ಳಲಿಲ್ಲ’ ಎಂದು ಹೇಳಿದ್ದನು.


ಅವಿಧೇಯತ್ವವು ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವುದು. ಹಟವು ಮಿಥ್ಯಾಭಕ್ತಿಗೂ, ವಿಗ್ರಹಾರಾಧನೆಗೂ ಸಮಾನವಾಗಿರುವುದು. ನೀನು ಯೆಹೋವನ ಮಾತಿನಂತೆ ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಅರಸುತನದಿಂದ ನಿವಾರಿಸಿಬಿಟ್ಟಿದ್ದಾನೆ” ಎಂದು ಹೇಳಿದನು.


ಆಗ ಸಮುವೇಲನು ಎಲ್ಲಾ ಜನರಿಗೆ, “ನೋಡಿದಿರಾ, ಯೆಹೋವನಿಂದ ಆರಿಸಲ್ಪಟ್ಟವನು ಇವನೇ; ಸರ್ವಜನರಲ್ಲಿ ಇವನಿಗೆ ಸಮಾನರು ಇಲ್ಲವೇ ಇಲ್ಲ” ಎನ್ನಲು ಜನರೆಲ್ಲರೂ, “ಅರಸನು ಚಿರಂಜೀವಿಯಾಗಿರಲಿ” ಎಂದು ಘೋಷಣೆಗಳನ್ನು ಕೂಗಿದರು.


ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ ಸರ್ವಾಂಗಹೋಮಗಳೇ ಮುಂತಾದ ಯಜ್ಞಪಶುಗಳನ್ನೂ, ಬೆಳೆಯ ದಶಮಾಂಶಗಳನ್ನೂ, ಯೆಹೋವನಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆಮಾಡಿದ ವಿಶೇಷವಾದ ಕಾಣಿಕೆಗಳನ್ನೂ ಇವುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.


ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಲ್ಲಾ ಕುಲಗಳೊಳಗಿಂದ ಆರಿಸಿಕೊಳ್ಳುವನು. ನೀವು ಆ ಸ್ಥಳದಿಂದ ಆತನು ಆರಿಸಿಕೊಳ್ಳುವ ಸ್ಥಳಕ್ಕೆ ಸೇರಿ ಬರಬೇಕು. ಅಲ್ಲೇ ಆತನು ವಾಸಿಸುವನು.


ನೀವು ಆತನಲ್ಲಿ ಲಕ್ಷ್ಯವಿಟ್ಟು ಆತನ ಮಾತಿಗೆ ವಿಧೇಯರಾಗಿರಬೇಕು. ಆತನನ್ನು ಧಿಕ್ಕರಿಸಿದರೆ ನಿಮ್ಮ ಅಪರಾಧವನ್ನು ಕ್ಷಮಿಸಲಾರನು. ನನ್ನ ನಾಮಮಹಿಮೆ ಆತನಲ್ಲಿ ಇರುವುದು.


ನೀವು ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡಬೇಕು. ನೀವು ಅದರ ಮೇಲೆ ನಿಮ್ಮ ಸರ್ವಾಂಗಹೋಮ, ಸಮಾಧಾನಯಜ್ಞ, ಕುರಿದನಗಳನ್ನು ಸಮರ್ಪಿಸಬೇಕು. ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.


ಅವನು ಹೇಳಿದ್ದೇನೆಂದರೆ, “ಇಸ್ರಾಯೇಲರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ನನ್ನ ತಂದೆಯಾದ ದಾವೀದನಿಗೆ ವಾಗ್ದಾನ ಮಾಡಿದಂತೆ ಈಗ ತನ್ನಿಂದ ನೆರವೇರಿಸುವಂತೆ ಮಾಡಿದ್ದಾನೆ.


ಆದರೆ ಈಗ ನನ್ನ ಹೆಸರಿಗೋಸ್ಕರ ಯೆರೂಸಲೇಮನ್ನೂ ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಆಳುವುದಕ್ಕೋಸ್ಕರ ದಾವೀದನನ್ನೂ ಆರಿಸಿಕೊಂಡಿದ್ದೇನೆ’ ಎಂದು ಹೇಳಿದನು.


ಇದಲ್ಲದೆ, “ಯೆರೂಸಲೇಮಿನಲ್ಲಿ ನನ್ನ ಹೆಸರನ್ನು ಸ್ಥಾಪಿಸುವೆನು” ಎಂದು ಯೆಹೋವನು ಯಾವುದನ್ನು ಕುರಿತು ಹೇಳಿದ್ದನೋ, ಆ ಯೆಹೋವನ ಆಲಯದಲ್ಲಿ ಮನಸ್ಸೆಯು ಯಜ್ಞವೇದಿಗಳನ್ನು ಕಟ್ಟಿಸಿದನು.


ನಾನು ಇಸ್ರಾಯೇಲರನ್ನು ಐಗುಪ್ತದೇಶದಿಂದ ಬರಮಾಡಿದಂದಿನಿಂದ ಇಂದಿನ ವರೆಗೂ ಮನೆಯಲ್ಲಿ ವಾಸಮಾಡಲಿಲ್ಲ. ಗುಡಾರಗಳಲ್ಲಿ ವಾಸಿಸುತ್ತಾ ಇದ್ದೆನು.


ಈ ಸ್ಥಳವನ್ನು ಕುರಿತು, ‘ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವುದು’” ಎಂದು ಹೇಳಿದವನೇ, ನಿನ್ನ ಕೃಪಾ ಕಟಾಕ್ಷವು ಹಗಲಿರುಳು ಈ ಮಂದಿರದ ಮೇಲಿರಲಿ; ಇಲ್ಲಿ ನಿನ್ನ ಸೇವಕನು ಪ್ರಾರ್ಥಿಸುವಾಗಲೆಲ್ಲಾ ಸದುತ್ತರವನ್ನು ದಯಪಾಲಿಸು.


ನನ್ನ ನಾಮ ಮಹತ್ತು ಈ ಆಲಯದಲ್ಲಿ ಶಾಶ್ವತವಾಗಿರುವಂತೆ ಇದನ್ನು ನನಗೋಸ್ಕರ ಆರಿಸಿ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಠಿಯೂ, ಮನಸ್ಸೂ ಸದಾ ಇಲ್ಲೇ ಇರುತ್ತದೆ.


ಅರಸನಾದ ರೆಹಬ್ಬಾಮನು ಯೆರೂಸಲೇಮಿನಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಆಳುವವನಾದನು. ಅವನು ತನ್ನ ನಲ್ವತ್ತೊಂದನೆಯ ವರ್ಷ ತುಂಬಿದ ಮೇಲೆ ಪಟ್ಟಕ್ಕೆ ಬಂದು ಯೆಹೋವನು ತನ್ನ ಹೆಸರಿಗೋಸ್ಕರ ಇಸ್ರಾಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ.


ಅವರು ಈ ದೇಶದಲ್ಲಿ ನೆಲಗೊಂಡು ಇದರಲ್ಲಿ ನಿನ್ನ ಹೆಸರಿಗಾಗಿ ಪವಿತ್ರಾಲಯವನ್ನು ಕಟ್ಟಿದರು.


ತಮ್ಮ ಮೇಲೆ ನ್ಯಾಯ ತೀರ್ಪಿನ ಖಡ್ಗ, ಘೋರವ್ಯಾಧಿ, ಕ್ಷಾಮ ಮೊದಲಾದ ಆಪತ್ತುಗಳು ನಮಗೆ ಬರುವಾಗ, ನಾವು ನಿನ್ನ ನಾಮ ಮಹತ್ತು ಇರುವ ಈ ಆಲಯದ ಮುಂದೆಯೂ, ನಿನ್ನ ಮುಂದೆಯೂ ನಿಂತು, ನಮ್ಮ ಇಕ್ಕಟ್ಟಿನಲ್ಲಿ ನಿನಗೆ ಮೊರೆಯಿಡುವುದಾದರೆ ನೀನು ಕೇಳಿ ರಕ್ಷಿಸುವಿ ಎಂದುಕೊಂಡಿದ್ದೇವೆ.


ಈಗ ನೀವು ನಿಮ್ಮ ಪೂರ್ವಿಕರಂತೆ ರಾಜಾಜ್ಞೆಗೆ ಮಣಿಯದವರಾಗಿರಬೇಡಿರಿ, ಯೆಹೋವನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಯೆಹೋವನು ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡಿರುವ ಪವಿತ್ರಾಲಯಕ್ಕೆ ಬಂದು ಆತನನ್ನು ಆರಾಧಿಸಿರಿ. ಆಗ ನಿಮ್ಮ ಮೇಲಿರುವ ಆತನ ಉಗ್ರಕೋಪವು ತೊಲಗಿಹೋಗುವುದು.


ಯೆಹೋವನು ಯೆರೂಸಲೇಮಿನಲ್ಲಿ ತನ್ನ ಹೆಸರನ್ನು ಸದಾಕಾಲ ಸ್ಥಾಪಿಸುವುದಕ್ಕಾಗಿ ಆರಿಸಿಕೊಂಡ,


ತಾನು ಮಾಡಿಸಿದ ವಿಗ್ರಹ ಸ್ತಂಭವನ್ನು ದೇವಾಲಯದಲ್ಲಿಡಿಸಿದನು. ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ, “ಇಸ್ರಾಯೇಲರು ಮೋಶೆಯ ಮುಖಾಂತರ ತಮಗೆ ಕೊಡಲ್ಪಟ್ಟ ನನ್ನ ಎಲ್ಲಾ ಧರ್ಮಶಾಸ್ತ್ರದ ವಿಧಿವಿಧಾನಗಳನ್ನು ಅನುಸರಿಸಿ ನಡೆಯುವುದಾದರೆ ನನ್ನ ನಾಮಮಹತ್ತು ಈ ದೇವಾಲಯದಲ್ಲಿಯೂ ಇಸ್ರಾಯೇಲರ ಎಲ್ಲಾ ಊರುಗಳಲ್ಲಿಯೂ ನನಗೆ ಇಷ್ಟವಾಗಿರುವ ಯೆರೂಸಲೇಮಿನಲ್ಲಿಯೂ ಸದಾಕಾಲವಿರುವುದು.


ಬಾಬೆಲ್ ಸಂಸ್ಥಾನದಲ್ಲಿ ನಿನಗೆ ಸಿಕ್ಕುವ ಬೆಳ್ಳಿಬಂಗಾರ, ಇಸ್ರಾಯೇಲ್ ಸಾಧಾರಣಜನರೂ, ಯಾಜಕರೂ, ಯೆರೂಸಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕಾಗಿ ಸ್ವ ಇಚ್ಛೆಯಿಂದ ಕೊಡುವ ಕಾಣಿಕೆ ಇವುಗಳನ್ನು ಅಲ್ಲಿಗೆ ಒಪ್ಪಿಸಬೇಕು; ಹೀಗೆಂದು ನಾನೂ ಮತ್ತು ನನ್ನ ಏಳು ಜನ ಮಂತ್ರಿಗಳೂ ನಿನ್ನನ್ನು ಕಳುಹಿಸುತ್ತೇವೆ.


ಆಗ ಯೆಹೋವನ ದೂತನು ಸೈತಾನನಿಗೆ, “ಯೆಹೋವನು ನಿನ್ನನ್ನು ಖಂಡಿಸಲಿ! ಹೌದು, ಯೆರೂಸಲೇಮನ್ನು ಆರಿಸಿಕೊಂಡಿರುವ ಯೆಹೋವನು ನಿನ್ನನ್ನು ಖಂಡಿಸಲಿ! ಅದು ಉರಿಯುವ ಬೆಂಕಿಯಿಂದ ಎಳೆದ ಕೊಳ್ಳಿಯಾಗಿದೆಯಲ್ಲಾ?” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು