2 ಪೂರ್ವಕಾಲ ವೃತ್ತಾಂತ 7:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯೆಹೋವನು ಸೊಲೊಮೋನನಿಗೆ ರಾತ್ರಿಯಲ್ಲಿ ಪ್ರತ್ಯಕ್ಷನಾಗಿ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನು ಲಾಲಿಸಿ, ಬಲಿಯನ್ನರ್ಪಿಸುವ ಆಲಯವಾಗಿ ಈ ಸ್ಥಳವನ್ನು ಆರಿಸಿಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಬಳಿಕ ಸರ್ವೇಶ್ವರ ಅವನಿಗೆ ರಾತ್ರಿಯಲ್ಲಿ ಪ್ರತ್ಯಕ್ಷರಾಗಿ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನು ಆಲಿಸಿ, ಈ ಮನೆಯನ್ನು ಬಲಿಯರ್ಪಣಾ ಮಂದಿರಕ್ಕಾಗಿ ಆರಿಸಿಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯೆಹೋವನು ಅವನಿಗೆ ರಾತ್ರಿಯಲ್ಲಿ ಪ್ರತ್ಯಕ್ಷನಾಗಿ - ನೀನು ನನಗೆ ಮಾಡಿದ ಪ್ರಾರ್ಥನೆಯನ್ನು ಲಾಲಿಸಿ ಈ ಮನೆಯನ್ನು ನನ್ನ ಯಜ್ಞಾಲಯಕ್ಕಾಗಿ ಆರಿಸಿಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆ ಬಳಿಕ ಯೆಹೋವನು ರಾತ್ರಿಯಲ್ಲಿ ಸೊಲೊಮೋನನಿಗೆ ಕಾಣಿಸಿಕೊಂಡು, “ಸೊಲೊಮೋನನೇ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ. ನಾನು ಈ ಆಲಯವನ್ನು ಯಜ್ಞಾಲಯಕ್ಕಾಗಿ ಆರಿಸಿಕೊಂಡಿರುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯೆಹೋವ ದೇವರು ರಾತ್ರಿಯಲ್ಲಿ ಸೊಲೊಮೋನನಿಗೆ ಪ್ರತ್ಯಕ್ಷರಾಗಿ ಅವನಿಗೆ, “ನಾನು ನಿನ್ನ ಪ್ರಾರ್ಥನೆಯನ್ನು ಕೇಳಿ ಬಲಿಯನ್ನು ಅರ್ಪಿಸುವ ಆಲಯವಾಗಿ ನನಗೆ ಈ ಸ್ಥಳವನ್ನು ಆಯ್ದುಕೊಂಡಿದ್ದೇನೆ. ಅಧ್ಯಾಯವನ್ನು ನೋಡಿ |