Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 7:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನನ್ನ ನಾಮ ಮಹತ್ತು ಈ ಆಲಯದಲ್ಲಿ ಶಾಶ್ವತವಾಗಿರುವಂತೆ ಇದನ್ನು ನನಗೋಸ್ಕರ ಆರಿಸಿ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಠಿಯೂ, ಮನಸ್ಸೂ ಸದಾ ಇಲ್ಲೇ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನನ್ನ ನಾಮ ಮಹಿಮೆ ಈ ಆಲಯದಲ್ಲಿ ಶಾಶ್ವತವಾಗಿರುವಂತೆ ಇದನ್ನು ನನಗಾಗಿ ಆರಿಸಿ ಪ್ರತಿಷ್ಠಿಸಿಕೊಂಡಿದ್ದೇನೆ. ನನ್ನ ದೃಷ್ಟಿಯೂ ಮನಸ್ಸೂ ಸದಾ ಅಲ್ಲಿ ಇರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನನ್ನ ನಾಮಮಹತ್ತು ಈ ಆಲಯದಲ್ಲಿ ಶಾಶ್ವತವಾಗಿರುವಂತೆ ಇದನ್ನು ನನಗೋಸ್ಕರ ಆರಿಸಿ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಟಿಯೂ ಮನಸ್ಸೂ ಸದಾ ಅಲ್ಲೇ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನನ್ನ ನಾಮದ ಮಹತ್ವ ಶಾಶ್ವತವಾಗಿರಬೇಕೆಂದು ನಾನು ಈ ಆಲಯವನ್ನು ಆರಿಸಿಕೊಂಡು ಶುದ್ಧೀಕರಿಸಿದ್ದೇನೆ. ಹೌದು, ನನ್ನ ದೃಷ್ಟಿಯೂ ನನ್ನ ಹೃದಯವೂ ಸದಾಕಾಲ ಈ ಆಲಯದ ಮೇಲೆ ನೆಲೆಸಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನನ್ನ ನಾಮವು ಯುಗಯುಗಾಂತರಕ್ಕೂ ಅಲ್ಲಿರುವ ಹಾಗೆ ಈ ಆಲಯವನ್ನು ಆಯ್ದುಕೊಂಡು ಪರಿಶುದ್ಧ ಮಾಡಿದ್ದೇನೆ. ನನ್ನ ಕಣ್ಣುಗಳೂ, ನನ್ನ ಹೃದಯವೂ ನಿತ್ಯವಾಗಿ ಅಲ್ಲಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 7:16
22 ತಿಳಿವುಗಳ ಹೋಲಿಕೆ  

ಇನ್ನು ಮುಂದೆ ಈ ಸ್ಥಳದಲ್ಲಿ ಪ್ರಾರ್ಥಿಸುವವರನ್ನು ಕಟಾಕ್ಷಿಸಿ ಅವರ ವಿಜ್ಞಾಪನೆಗಳಿಗೆ ಕಿವಿಗೊಡುವೆನು.


ಯೆಹೋವನು ಸೊಲೊಮೋನನಿಗೆ ರಾತ್ರಿಯಲ್ಲಿ ಪ್ರತ್ಯಕ್ಷನಾಗಿ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನು ಲಾಲಿಸಿ, ಬಲಿಯನ್ನರ್ಪಿಸುವ ಆಲಯವಾಗಿ ಈ ಸ್ಥಳವನ್ನು ಆರಿಸಿಕೊಂಡಿದ್ದೇನೆ.


ಆತನು ಅವನಿಗೆ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆಯನ್ನೂ ಕೇಳಿದ್ದೇನೆ. ನನ್ನ ನಾಮಮಹತ್ತು ನೀನು ಕಟ್ಟಿಸಿದ ಆಲಯದಲ್ಲಿ ಸದಾ ಇರುವಂತೆ ಅದನ್ನು ನನಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ. ನನ್ನ ದೃಷ್ಟಿಯೂ, ಮನಸ್ಸೂ ಪ್ರತಿದಿನವೂ ಅದರ ಮೇಲಿರುವವು.


ಈ ಸ್ಥಳವನ್ನು ಕುರಿತು, ‘ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವುದು’” ಎಂದು ಹೇಳಿದವನೇ, ನಿನ್ನ ಕೃಪಾ ಕಟಾಕ್ಷವು ಹಗಲಿರುಳು ಈ ಮಂದಿರದ ಮೇಲಿರಲಿ; ಇಲ್ಲಿ ನಿನ್ನ ಸೇವಕನು ಪ್ರಾರ್ಥಿಸುವಾಗಲೆಲ್ಲಾ ಸದುತ್ತರವನ್ನು ದಯಪಾಲಿಸು.


ದೇವರ ಸರ್ವಸಂಪೂರ್ಣತೆಯು ಕ್ರಿಸ್ತನ ದೇಹದಲ್ಲಿ ವಾಸಮಾಡುತ್ತಿದೆ,


ಆಗ ಯೆಹೋವನ ದೂತನು ಸೈತಾನನಿಗೆ, “ಯೆಹೋವನು ನಿನ್ನನ್ನು ಖಂಡಿಸಲಿ! ಹೌದು, ಯೆರೂಸಲೇಮನ್ನು ಆರಿಸಿಕೊಂಡಿರುವ ಯೆಹೋವನು ನಿನ್ನನ್ನು ಖಂಡಿಸಲಿ! ಅದು ಉರಿಯುವ ಬೆಂಕಿಯಿಂದ ಎಳೆದ ಕೊಳ್ಳಿಯಾಗಿದೆಯಲ್ಲಾ?” ಎಂದು ಹೇಳಿದನು.


ಆತನು, “ಇದು ನನ್ನ ಶಾಶ್ವತ ವಾಸಸ್ಥಾನ; ಇಲ್ಲೇ ಇರುವೆನು; ಇದು ನನಗೆ ಇಷ್ಟ.


ಆಗ “ಈತನು ನನ್ನ ಪ್ರಿಯ ಮಗನು, ಈತನನ್ನು ನಾನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ವಾಣಿ ಪರಲೋಕದಿಂದ ಕೇಳಿಬಂದಿತು.


ಇದಲ್ಲದೆ, “ಯೆರೂಸಲೇಮಿನಲ್ಲಿ ನನ್ನ ಹೆಸರನ್ನು ಸ್ಥಾಪಿಸುವೆನು” ಎಂದು ಯೆಹೋವನು ಯಾವುದನ್ನು ಕುರಿತು ಹೇಳಿದ್ದನೋ, ಆ ಯೆಹೋವನ ಆಲಯದಲ್ಲಿ ಮನಸ್ಸೆಯು ಯಜ್ಞವೇದಿಗಳನ್ನು ಕಟ್ಟಿಸಿದನು.


‘ನಾವು ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು’ ಎಂದು ಒಪ್ಪಿ ಪೂರ್ಣಮನಸ್ಸಿನಿಂದ ನಿನ್ನನ್ನು ಪ್ರಾರ್ಥಿಸುವುದಾದರೆ,


ನೀನು ನಿನ್ನ ಜನರನ್ನು ಶತ್ರುಗಳೊಡನೆ ಯುದ್ಧಮಾಡುವುದಕ್ಕೋಸ್ಕರ ಎಲ್ಲಿಗಾದರು ಕಳುಹಿಸಿದಾಗ ಅವರು ಅಲ್ಲಿಂದ ನೀನು ಆರಿಸಿಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು ಯೆಹೋವನಾದ ನಿನ್ನನ್ನು ಪ್ರಾರ್ಥಿಸುವುದಾದರೆ


“ಅವರ ಪಾಪಗಳ ನಿಮಿತ್ತವಾಗಿ ಆಕಾಶವು ಮಳೆಗರೆಯದಂತೆ ಮುಚ್ಚಿಕೊಂಡಾಗ ಅವರು ತಮ್ಮ ಪಾಪಗಳನ್ನು ಬಿಟ್ಟು ತಮ್ಮನ್ನು ತಗ್ಗಿಸಿದವನು ನೀನೇ ಎಂದು ನಿನ್ನ ನಾಮವನ್ನು ಸ್ತುತಿಸಿ ಈ ಆಲಯದ ಕಡೆಗೆ ತಿರುಗಿಕೊಂಡು ಪ್ರಾರ್ಥಿಸುವುದಾದರೆ,


ಆತನು, ‘ನಾನು ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತದಿಂದ ಬರಮಾಡಿದಂದಿನಿಂದ ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಆಳುವುದಕ್ಕೋಸ್ಕರ ದಾವೀದನನ್ನು ಆರಿಸಿಕೊಂಡೆನೇ ಹೊರತು ನನ್ನ ನಾಮದ ನಿವಾಸಕ್ಕೋಸ್ಕರ ಆಲಯ ಸ್ಥಾನವನ್ನಾಗಿ ಇಸ್ರಾಯೇಲ್ ಕುಲಗಳ ಯಾವ ಪಟ್ಟಣವನ್ನೂ ಆರಿಸಿಕೊಳ್ಳಲಿಲ್ಲ’ ಎಂದು ಹೇಳಿದ್ದನು.


ಮತ್ತು ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮಿಸಬೇಕು.


ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕಾಗಿ ಆರಿಸಿಕೊಂಡ ಸ್ಥಳವು ನಿಮಗೆ ದೂರವಾದರೆ, ಆತನು ನಿಮಗೆ ಅನುಗ್ರಹಿಸಿದ ದನ ಮತ್ತು ಕುರಿಗಳಲ್ಲಿ ಬೇಕಾದಷ್ಟನ್ನು ನಾನು ಅಪ್ಪಣೆಕೊಟ್ಟ ಮೇರೆಗೆ ನೀವು ಕೊಯಿದು ನಿಮ್ಮ ಊರಲ್ಲೇ ಊಟಮಾಡಬಹುದು.


ನೀನು ನಿನ್ನ ತಂದೆಯಾದ ದಾವೀದನಂತೆ ನನಗೆ ವಿಧೇಯನಾಗಿ ನಡೆದುಕೊಂಡು ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಕೊಳ್ಳುವುದಾದರೆ,


ಈಗ ನೀವು ನಿಮ್ಮ ಪೂರ್ವಿಕರಂತೆ ರಾಜಾಜ್ಞೆಗೆ ಮಣಿಯದವರಾಗಿರಬೇಡಿರಿ, ಯೆಹೋವನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಯೆಹೋವನು ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡಿರುವ ಪವಿತ್ರಾಲಯಕ್ಕೆ ಬಂದು ಆತನನ್ನು ಆರಾಧಿಸಿರಿ. ಆಗ ನಿಮ್ಮ ಮೇಲಿರುವ ಆತನ ಉಗ್ರಕೋಪವು ತೊಲಗಿಹೋಗುವುದು.


ನಿಶ್ಚಯವಾಗಿ ಯೆಹೋವನು ಚೀಯೋನನ್ನು ಅಪೇಕ್ಷಿಸಿ, ತನ್ನ ನಿವಾಸಕ್ಕಾಗಿ ಆರಿಸಿಕೊಂಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು