Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 7:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಿನ್ನ ರಾಜ್ಯಸಿಂಹಾಸನವನ್ನು ಸ್ಥಿರಪಡಿಸುವೆನು; ಅಲ್ಲದೆ ಇಸ್ರಾಯೇಲರಲ್ಲಿ ನಿನ್ನ ಸಂತಾನದವರು ತಪ್ಪದೆ ಸದಾಕಾಲ ರಾಜ್ಯಾಭಾರ ನಡಿಸುವರು ಎಂಬುದಾಗಿ ನಿನ್ನ ತಂದೆಯಾದ ದಾವೀದನಿಗೆ ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನಿನ್ನ ರಾಜ್ಯಸಿಂಹಾಸನವನ್ನು ಸ್ಥಿರಪಡಿಸುವೆನು; ‘ಇಸ್ರಯೇಲರಲ್ಲಿ ನಿನ್ನ ಸಂತಾನದವರು ತಪ್ಪದೆ ರಾಜ್ಯಾಧಿಕಾರ ನಡೆಸುವರು’ ಎಂಬುದಾಗಿ ನಿನ್ನ ತಂದೆ ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಿನ್ನ ರಾಜ್ಯಸಿಂಹಾಸನವನ್ನು ಸ್ಥಿರಪಡಿಸುವೆನು; ಮತ್ತು ಇಸ್ರಾಯೇಲ್ಯರಲ್ಲಿ ನಿನ್ನ ಸಂತಾನದವರು ತಪ್ಪದೆ ರಾಜ್ಯಾಧಿಕಾರ ನಡಿಸುವರು ಎಂಬದಾಗಿ ನಿನ್ನ ತಂದೆಯಾದ ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಾನು ನಿನ್ನನ್ನು ಬಲಿಷ್ಠನಾದ ಅರಸನನ್ನಾಗಿ ಮಾಡುವೆನು. ನಿನ್ನ ರಾಜ್ಯವು ಮಹಾರಾಜ್ಯವಾಗುವದು. ನಿನ್ನ ತಂದೆಯಾದ ದಾವೀದನಿಗೆ, ‘ದಾವೀದನೇ, ನಿನ್ನ ಕುಟುಂಬದವರಲ್ಲಿ ಒಬ್ಬನು ಯಾವಾಗಲೂ ಇಸ್ರೇಲಿನ ರಾಜನಾಗಿರುವನು’ ಎಂದು ನಾನು ವಾಗ್ದಾನ ಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ‘ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ನಿನಗೆ ಉತ್ತರಾಧಿಕಾರಿಯ ಕೊರತೆಯಾಗುವುದಿಲ್ಲ,’ ಎಂದು ನಾನು ನಿನ್ನ ತಂದೆ ದಾವೀದನ ಸಂಗಡ ಮಾಡಿದ ಒಡಂಬಡಿಕೆಯ ಪ್ರಕಾರ ನಿನ್ನ ರಾಜ್ಯದ ಸಿಂಹಾಸನವನ್ನು ಸ್ಥಿರಪಡಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 7:18
9 ತಿಳಿವುಗಳ ಹೋಲಿಕೆ  

ಇಸ್ರಾಯೇಲರ ದೇವರಾದ ಯೆಹೋವನೇ, ನೀನು ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ, ‘ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಕಟ್ಟಳೆಯನ್ನು ಅನುಸರಿಸಿ ನಡೆದುಕೊಳ್ಳುವುದಾದರೆ ಅವರು ತಪ್ಪದೆ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು ಎಂಬುದಾಗಿ ವಾಗ್ದಾನ ಮಾಡಿರುವೆಯಲ್ಲಾ, ಅದನ್ನು ನೆರವೇರಿಸು.’


ಇಸ್ರಾಯೇಲರಲ್ಲಿ ನಿನ್ನ ಸಿಂಹಾಸನವನ್ನು ಸದಾ ಸ್ಥಿರಪಡಿಸುವೆನು. ‘ಇಸ್ರಾಯೇಲ್ ಸಿಂಹಾಸನದ ಮೇಲೆ ನಿನ್ನ ಸಂತಾನದವರು ತಪ್ಪದೆ ಕುಳಿತುಕೊಳ್ಳುವರು’ ಎಂಬುದಾಗಿ ನಿನ್ನ ತಂದೆಯಾದ ದಾವೀದನಿಗೆ ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು.


ಮತ್ತು ಯೆಹೋವನು, ‘ನಿನ್ನ ಸಂತಾನದವರು ನಂಬಿಗಸ್ತರಾಗಿ, ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನನಗೆ ನಡೆದುಕೊಳ್ಳುವುದರಲ್ಲಿ ಜಾಗರೂಕರಾಗಿರುವುದಾದರೆ, ಅವರು ತಪ್ಪದೆ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು’ ಎಂಬುದಾಗಿ ತಾನು ನನಗೆ ಮಾಡಿದ ವಾಗ್ದಾನವನ್ನು ಸ್ಥಿರಪಡಿಸುವನು,


ನೀನು ನಿನ್ನ ತಂದೆಯಾದ ದಾವೀದನಂತೆ ನನಗೆ ವಿಧೇಯನಾಗಿ ನಡೆದುಕೊಂಡು ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಕೊಳ್ಳುವುದಾದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು