2 ಪೂರ್ವಕಾಲ ವೃತ್ತಾಂತ 7:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವುಗಳಿಗೆ ಕೈಮುಗಿಯುವುದಾದರೆ ನಾನು ಇಸ್ರಾಯೇಲ್ಯರಿಗೆ ಕೊಟ್ಟ ನನ್ನ ದೇಶದಿಂದ ಅವರನ್ನು ಹೊರಗೆ ಹಾಕಿ ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿ ಅದು ಎಲ್ಲಾ ಜನಾಂಗಗಳವರಿಗೂ ಶಾಪದ ಮಾದರಿ ಮಾತಾಗಿಯೂ ನಿಂದೆಗೆ ಆಸ್ಪದವಾಗುವಂತೆಯೂ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನಾನು ಇಸ್ರಯೇಲರಿಗೆ ಕೊಟ್ಟ ನನ್ನ ನಾಡಿನಿಂದ ನಿಮ್ಮನ್ನು ಕಿತ್ತುಹಾಕುವೆನು; ನನ್ನ ಹೆಸರಿಗೆ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿಬಿಡುವೆನು; ಎಲ್ಲ ಜನಾಂಗಗಳವರು ಪರಿಹಾಸ್ಯದಿಂದ ಲಾವಣಿ ಕಟ್ಟುವುದಕ್ಕೂ ನಿಂದಿಸುವುದಕ್ಕೂ ಇದು ಆಸ್ಪದವಾಗುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವುಗಳಿಗೆ ಕೈಮುಗಿಯುವದಾದರೆ ನಾನು ಇಸ್ರಾಯೇಲ್ಯರಿಗೆ ಕೊಟ್ಟ ನನ್ನ ದೇಶದಿಂದ ಅವರನ್ನು ಕಿತ್ತುಹಾಕಿ ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿಬಿಟ್ಟು ಎಲ್ಲಾ ಜನಾಂಗಗಳವರು ಗಾದೆಗಳನ್ನು ಕಲ್ಪಿಸುವದಕ್ಕೂ ನಿಂದಿಸುವದಕ್ಕೂ ಅದು ಆಸ್ಪದವಾಗುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನಾನು ಇಸ್ರೇಲರನ್ನು ಅವರಿಗೆ ಕೊಟ್ಟಿರುವ ದೇಶದಿಂದ ತೆಗೆದುಹಾಕುವೆನು; ನನ್ನ ಹೆಸರಿಗೋಸ್ಕರ ಪವಿತ್ರ ಮಾಡಿದ ಈ ದೇವಾಲಯವನ್ನು ತೊರೆದುಬಿಡುವೆನು. ಈ ದೇವಾಲಯದ ಬಗ್ಗೆ ಲೋಕದ ಜನರು ಗೇಲಿಮಾಡುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆಗ ನಾನು ಇಸ್ರಾಯೇಲಿಗೆ ಕೊಟ್ಟ ನನ್ನ ದೇಶದೊಳಗಿಂದ ಅವರನ್ನು ಕಿತ್ತುಹಾಕಿ, ನನ್ನ ನಾಮಕ್ಕೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಾನು ನಿರಾಕರಿಸುವೆನು. ಅದನ್ನು ಸಮಸ್ತ ಜನರಲ್ಲಿ ಗಾದೆಯಾಗಿಯೂ, ಅಪಹಾಸ್ಯಕ್ಕೆ ಆಸ್ಪದವಾಗುವಂತೆ ಮಾಡುವೆನು. ಅಧ್ಯಾಯವನ್ನು ನೋಡಿ |