2 ಪೂರ್ವಕಾಲ ವೃತ್ತಾಂತ 7:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆಗ ಅವರಿಗೆ, ‘ಈ ದೇಶದವರು ತಮ್ಮನ್ನು ಐಗುಪ್ತ ದೇಶದಿಂದ ಬರಮಾಡಿದ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಕಡೆಗಣಿಸಿ, ಅನ್ಯ ದೇವತೆಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಆರಾಧಿಸಿದ್ದರಿಂದಲೇ ಆತನು ಈ ಎಲ್ಲಾ ಆಪತ್ತನ್ನು ಅವರಿಗೆ ಬರಮಾಡಿದ್ದಾನೆ.’” ಎಂದು ಉತ್ತರ ಕೊಡುವರು ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆಗ ಅವರಿಗೆ, ‘ಈ ನಾಡಿನವರು ತಮ್ಮನ್ನು ಈಜಿಪ್ಟ್ ದೇಶದಿಂದ ಬರಮಾಡಿದ ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನನ್ನು ಬಿಟ್ಟು, ಅನ್ಯದೇವತೆಗಳನ್ನು ಅವಲಂಭಿಸಿ, ಅವುಗಳಿಗೆ ಅಡ್ಡಬಿದ್ದು ಸೇವೆಸಲ್ಲಿಸಿದ್ದರಿಂದಲೇ ಅವರು ಈ ಎಲ್ಲಾ ಆಪತ್ತುಗಳನ್ನು ಅವರಿಗೆ ಬರಮಾಡಿ ಇದ್ದಾರೆ,’ ಎಂಬ ಉತ್ತರ ಸಿಕ್ಕುವುದು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆಗ ಅವರಿಗೆ - ಈ ದೇಶದವರು ತಮ್ಮನ್ನು ಐಗುಪ್ತದೇಶದಿಂದ ಬರಮಾಡಿದ ತಮ್ಮ ಪಿತೃಗಳ ದೇವರಾದ ಯೆಹೋವನನ್ನು ಬಿಟ್ಟು ಅನ್ಯದೇವತೆಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದಲೇ ಆತನು ಈ ಎಲ್ಲಾ ಆಪತ್ತನ್ನು ಅವರಿಗೆ ಬರಮಾಡಿದ್ದಾನೆ ಎಂಬ ಉತ್ತರ ಸಿಕ್ಕುವದು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆಗ ಜನರು, ‘ಯಾಕೆಂದರೆ ಇಸ್ರೇಲರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ಆತನು ಅವರನ್ನು ಈಜಿಪ್ಟಿನಿಂದ ಬಿಡಿಸಿ ಹೊರತಂದನು. ಆದರೆ ಅವರು ಬೇರೆ ದೇವರುಗಳನ್ನು ಪೂಜಿಸಿ ಅವುಗಳ ಸೇವೆಮಾಡಿದರು. ಆದ್ದರಿಂದಲೇ ಭಯಂಕರವಾದ ಈ ಸಂಕಟಗಳನ್ನೆಲ್ಲ ದೇವರು ಇಸ್ರೇಲರಿಗೆ ಬರಮಾಡಿದನು’ ಎಂದು ಹೇಳುವರು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅದಕ್ಕೆ ಜನರು, ‘ತಮ್ಮ ತಂದೆಗಳನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ತಮ್ಮ ದೇವರಾದ ಯೆಹೋವ ದೇವರನ್ನು ಬಿಟ್ಟು, ಅನ್ಯದೇವರುಗಳನ್ನು ಹಿಂಬಾಲಿಸಿ, ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ, ಅವರು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಾರೆಂದು ಹೇಳುವರು,’ ” ಎಂದರು. ಅಧ್ಯಾಯವನ್ನು ನೋಡಿ |