Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 8:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಈ ಇನ್ನೂರೈವತ್ತು ಮಂದಿ ಅರಸನಾದ ಸೊಲೊಮೋನನ ಮುಖ್ಯಾಧಿಕಾರಿಗಳೂ, ಪ್ರಜೆಗಳ ಮೇಲ್ವಿಚಾರಕರೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇಂಥ ಇನ್ನೂರೈವತ್ತು ಮಂದಿ ಮುಖ್ಯಾಧಿಪತಿಗಳು ಅರಸ ಸೊಲೊಮೋನನ ಆಳುಗಳ ಮೇಲೆ ಅಧಿಕಾರಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಈ ಇನ್ನೂರೈವತ್ತು ಮಂದಿ ಮುಖ್ಯಾಧಿಪತಿಗಳು ಅರಸನಾದ ಸೊಲೊಮೋನನ ಆಳುಗಳ ಮೇಲೆ ಅಧಿಕಾರಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಇನ್ನು ಕೆಲವರು ಮುಖ್ಯಾಧಿಕಾರಿಗಳಿಗೆ ಅಧಿಪತಿಗಳಾಗಿದ್ದರು. ಜನಸೇವೆಗಾಗಿ ಈ ರೀತಿಯ 250 ಅಧಿಪತಿಗಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇವರು ಅರಸನಾದ ಸೊಲೊಮೋನನ ಅಧಿಪತಿಗಳಲ್ಲಿ ಪ್ರಧಾನರಾಗಿದ್ದರು, ಇವರು ಇನ್ನೂರೈವತ್ತು ಮಂದಿ ಆಳುಗಳ ಮೇಲೆ ಅಧಿಕಾರಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 8:10
5 ತಿಳಿವುಗಳ ಹೋಲಿಕೆ  

ಅವರಲ್ಲಿ ಹೊರೆಹೊರುವುದಕ್ಕಾಗಿ ಎಪ್ಪತ್ತು ಸಾವಿರ ಮಂದಿಯನ್ನೂ, ಕಲ್ಲುಗಣಿಗಳಲ್ಲಿ ಕೆಲಸಮಾಡುವುದಕ್ಕಾಗಿ ಎಂಭತ್ತು ಸಾವಿರ ಮಂದಿಯನ್ನೂ, ಕೆಲಸದವರ ಮೇಲ್ವಿಚಾರಣೆಗಾಗಿ ಮೂರು ಸಾವಿರದ ಆರುನೂರು ಮಂದಿಯನ್ನೂ ನೇಮಿಸಿದನು.


ಇದಲ್ಲದೆ ಅವನು ಬಿಟ್ಟೀಕೆಲಸ ಮಾಡುವವರ ಮೇಲೆ ಐನೂರೈವತ್ತು ಮಂದಿ ಇಸ್ರಾಯೇಲರನ್ನು ಅಧಿಕಾರಿಗಳನ್ನಾಗಿಯೂ ನೇಮಿಸಿದನು.


ಈ ಕೆಲಸದವರ ಮೇಲ್ವಿಚಾರಣೆಗಾಗಿ ಅವನು ಮೂರು ಸಾವಿರದ ಮುನ್ನೂರು ಮೇಸ್ತ್ರಿಗಳನ್ನು ನೇಮಿಸಿದನು.


ಆದರೆ ಸೊಲೊಮೋನನು ಬಿಟ್ಟಿ ಕೆಲಸಕ್ಕಾಗಿ ಇಸ್ರಾಯೇಲರನ್ನು ನೇಮಕ ಮಾಡಿಕೊಳ್ಳಲಿಲ್ಲ. ಅವರನ್ನು ಸೈನಿಕರನ್ನಾಗಿಯೂ, ಅಧಿಪತಿಗಳನ್ನಾಗಿಯೂ, ಸರದಾರರನ್ನಾಗಿಯೂ, ರಥಾಶ್ವಬಲಗಳ ನಾಯಕರನ್ನಾಗಿಯೂ ನೇಮಿಸಿಕೊಂಡನು.


ಸೊಲೊಮೋನನು, “ಯಾವ ಯಾವ ಸ್ಥಳಗಳಲ್ಲಿ ಯೆಹೋವನ ಮಂಜೂಷವಿತ್ತೋ ಅವೆಲ್ಲವೂ ಪವಿತ್ರಸ್ಥಾನಗಳು. ಆದುದರಿಂದ ಇಸ್ರಾಯೇಲರ ಅರಸನಾದ ದಾವೀದನ ಮನೆಯಲ್ಲಿ ಫರೋಹನ ಪುತ್ರಿಯಾದ ನನ್ನ ಹೆಂಡತಿಯು ವಾಸಿಸಬಾರದು” ಅಂದುಕೊಂಡು ಆಕೆಯನ್ನು ದಾವೀದನಗರದಲ್ಲಿರಿಸದೆ, ತಾನು ಆಕೆಗಾಗಿ ಕಟ್ಟಿಸಿದ ಮಂದಿರಕ್ಕೆ ಕರೆದುಕೊಂಡು ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು