2 ಪೂರ್ವಕಾಲ ವೃತ್ತಾಂತ 8:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಸೊಲೊಮೋನನು, “ಯಾವ ಯಾವ ಸ್ಥಳಗಳಲ್ಲಿ ಯೆಹೋವನ ಮಂಜೂಷವಿತ್ತೋ ಅವೆಲ್ಲವೂ ಪವಿತ್ರಸ್ಥಾನಗಳು. ಆದುದರಿಂದ ಇಸ್ರಾಯೇಲರ ಅರಸನಾದ ದಾವೀದನ ಮನೆಯಲ್ಲಿ ಫರೋಹನ ಪುತ್ರಿಯಾದ ನನ್ನ ಹೆಂಡತಿಯು ವಾಸಿಸಬಾರದು” ಅಂದುಕೊಂಡು ಆಕೆಯನ್ನು ದಾವೀದನಗರದಲ್ಲಿರಿಸದೆ, ತಾನು ಆಕೆಗಾಗಿ ಕಟ್ಟಿಸಿದ ಮಂದಿರಕ್ಕೆ ಕರೆದುಕೊಂಡು ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 “ಯಾವ ಯಾವ ಸ್ಥಳಗಳಲ್ಲಿ ಸರ್ವೇಶ್ವರನ ಮಂಜೂಷವಿತ್ತೋ ಅವು ಪವಿತ್ರಸ್ಥಾನಗಳು; ಆದುದರಿಂದ ಇಸ್ರಯೇಲರ ಅರಸನಾಗಿದ್ದ ದಾವೀದನ ಮನೆ ಪವಿತ್ರವಾದುದು; ಅಲ್ಲಿ ಫರೋಹನ ಮಗಳಾದ ನನ್ನ ಹೆಂಡತಿ ವಾಸಿಸಬಾರದು,” ಎಂದುಕೊಂಡು ಸೊಲೊಮೋನನು ಆಕೆಯನ್ನು ದಾವೀದನಗರದಿಂದಾಚೆ ಆಕೆಗಾಗಿಯೇ ತಾನು ಕಟ್ಟಿಸಿದ್ದ ಮಂದಿರದಲ್ಲಿ ಇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಸೊಲೊಮೋನನು - ಯಾವ ಯಾವ ಸ್ಥಳಗಳಲ್ಲಿ ಯೆಹೋವನ ಮಂಜೂಷವಿತ್ತೋ ಅವು ಪವಿತ್ರಸ್ಥಾನಗಳೇ; ಆದದರಿಂದ ಇಸ್ರಾಯೇಲ್ಯರ ಅರಸನಾದ ದಾವೀದನ ಮನೆಯಲ್ಲಿ ಫರೋಹನ ಮಗಳಾದ ನನ್ನ ಹೆಂಡತಿಯು ವಾಸಿಸಬಾರದು ಅಂದುಕೊಂಡು ಆಕೆಯನ್ನು ದಾವೀದನಗರದಿಂದ ತಾನು ಆಕೆಗೋಸ್ಕರ ಕಟ್ಟಿಸಿದ ಮಂದಿರಕ್ಕೆ ಕರಕೊಂಡು ಬಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಸೊಲೊಮೋನನು ದಾವೀದ ನಗರದಲ್ಲಿದ್ದ ಫರೋಹನ ಕುಮಾರ್ತೆಯನ್ನು ಆಕೆಗಾಗಿ ಕಟ್ಟಿದ ಅರಮನೆಗೆ ಕರೆಸಿದನು. “ನನ್ನ ಹೆಂಡತಿಯು ದಾವೀದನ ಮನೆಯಲ್ಲಿ ವಾಸಿಸಬಾರದು. ಯಾಕೆಂದರೆ ದೇವರ ಒಡಂಬಡಿಕೆಯ ಪೆಟ್ಟಿಗೆ ಇರುವ ಸ್ಥಳಗಳು ಪರಿಶುದ್ಧವಾಗಿವೆ” ಎಂದು ಸೊಲೊಮೋನನು ಅಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಸೊಲೊಮೋನನು, “ಯೆಹೋವ ದೇವರ ಒಡಂಬಡಿಕೆಯ ಮಂಜೂಷವಿದ್ದ ಸ್ಥಳಗಳು ಪರಿಶುದ್ಧವಾಗಿರುವುದರಿಂದ, ನನ್ನ ಹೆಂಡತಿಯು ಇಸ್ರಾಯೇಲಿನ ಅರಸನಾದ ದಾವೀದನ ಅರಮನೆಯಲ್ಲಿ ವಾಸವಾಗಿರಕೂಡದು,” ಎಂದು ಹೇಳಿ ಸೊಲೊಮೋನನು ಫರೋಹನ ಮಗಳನ್ನು ದಾವೀದನ ಪಟ್ಟಣದಲ್ಲಿರಿಸದೆ ತಾನು ಆಕೆಗೋಸ್ಕರ ಕಟ್ಟಿಸಿದ ಅರಮನೆಯಲ್ಲಿ ಅವಳನ್ನು ಇರಿಸಿದನು. ಅಧ್ಯಾಯವನ್ನು ನೋಡಿ |